Connect with us

DAKSHINA KANNADA

ಪಂಚ ರಾಜ್ಯದಲ್ಲಿ ಬಿಜೆಪಿ ಸಾಧನೆ ಮಹತ್ತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ..!

Published

on

ಮಂಗಳೂರು: ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದ್ದಾರೆ.ದೇಶದ ವಿವಿಧ ಕಡೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮತದಾರರ ಸಂಖ್ಯೆ ಹೆಚ್ಚಾಗಿದೆ.

ನಮ್ಮ ಅಸ್ತಿತ್ವ ಇಲ್ಲದ ಕಡೆ ಕೂಡ ಛಾಪು ಮೂಡಿಸಿದ್ದೇವೆ.ಮಸ್ಕಿಯಲ್ಲಿ ಸೋತಿದ್ದೇವೆ. ಸೋಲು ಗೆಲುವು ಸಹಜ.ಮತ ಹಾಕಿದ ಎಲ್ಲಾ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ.

ಸಂಭ್ರಮ ಮಾಡದೇ ಕೋವಿಡ್ ರೋಗಿಗಳಿಗೆ ನೆರವಾಗಿ ಎಂದu ಕಾರ್ಯಕರ್ತರಿಗೆ ಕರೆ ಕೊಡುತ್ತೇನೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪರ ಜನ ಒಲವು ತೋರಿಸಿದ್ದು, ಸೀಟು ಕಡಿಮೆ ಬಂದಿದ್ದರೂ ಮತ ಗಳಿಕೆಯಲ್ಲಿ ಬಿಜೆಪಿ ಅಗ್ರಸ್ಥಾನದಲ್ಲಿದೆ.

ಪಶ್ಚಿಮ ಬಂಗಾಳದಲ್ಲಿ ದೀದಿಯ ಪ್ರಭಾವ ಕಡಿಮೆಯಾಗಿರೋದು ಬಹಳ ಸ್ಪಷ್ಟವಾಗಿದೆ ಇನ್ನು ಪುದುಚೇರಿ ಮತ್ತು ಅಸ್ಸಾಂನಲ್ಲಿ ಬಿಜೆಪಿ ಕಮಾಲ್ ಮಾಡಿದೆ.

ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಅನ್ನು ಜನದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿರುವುದು ಫಲಿತಾಂಶದಲ್ಲಿ ಗೊತ್ತಾಗಿದೆ.

ಕೇರಳದಲ್ಲೂ ಬಿಜೆಪಿ ಸಾಧನೆ ಉತ್ತಮವಾಗಿದೆ. ಕಳೆದ ಬಾರಿ ಒಂದು ಸೀಟ್ ಗೆದ್ದುಗೊಂಡಿದ್ದು, ಈ ಭಾರಿ ಮೂರರಲ್ಲಿ ಮುನ್ನಡೆ ಸಾಧಿಸಿದ್ದೇವೆ.

ಕೇರಳದಲ್ಲೂ ಜನ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಿದ್ದಾರೆಂದು ಕಟೀಲ್ ಲೇವಡಿಯಾಡಿದ್ದಾರೆ.ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ವಿಚಾರವಾಗಿ, ಮಸ್ಕಿಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವುದು ನಿಜ.

ಆದರೆ, ಬಸವಕಲ್ಯಾಣದಲ್ಲಿ ಅಮೋಘ ಗೆಲುವಾಗಿದೆ. ಬೆಳಗಾವಿಯಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಅಂತಾ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending