Home ಕರ್ನಾಟಕ ವಾರ್ತೆ ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

ನೀವು ಪ್ರೇರಕರು ನಾನು ಸೇವಕಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ದೇಶದ ಜನರಿಗೆ ಬರೆದಿರುವ,

“ನೀವು ಪ್ರೇರಕರು ನಾನು ಸೇವಕ” ಎಂಬ ಪತ್ರದ ಸಾರಾಂಶ ಹಾಗೂ ಒಂದು ವರ್ಷದ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಪಾಂಡೇಶ್ವರದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

ಈ ಕುರಿತು ಮಾತನಾಡಿದ ಅವರು, ಕೋವಿಡ್ 19ನಿಂದ ದೇಶ ಸಂಕಷ್ಟದಲ್ಲಿದ್ದರೂ ಆರ್ಥಿಕವಾಗಿ ಮೇಲೆತ್ತುವಲ್ಲಿ ಸರಕಾರದ ಕಾರ್ಯ ವಿಶೇಷವಾದದ್ದು.

ಲಾಕ್ ಡೌನ್ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀ ಕರೆಗೆ ಭಾರತೀಯರು ಸ್ಪಂದಿಸಿದ ರೀತಿ ಜನರಿಗೆ ಸರಕಾರದ ಮೇಲಿರುವ ನಂಬಿಕೆಯ ಪ್ರತೀಕವಾಗಿದೆ.

ಕಳೆದ ಒಂದು ವರ್ಷದ ಸಾಧನೆಯ ಕುರಿತು ಹಾಗೂ ದೇಶದ ಜನರಿಗೆ ಪ್ರಧಾನಮಂತ್ರಿಗಳು ಬರೆದಿರುವ ಪತ್ರದ ಸಾರಾಂಶವನ್ನು ಜನತೆಗೆ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 1 ಮನೆಗೆ ಇಬ್ಬರಂತೆ ತೆರಳಿ ಜನತೆಗೆ ಸರಕಾರದ ಸಾಧನೆಯ ತಿಳಿಸಲಾಗುವುದು ಎಂದರು.

ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಎರಡನೇ ಅವಧಿಯ ಪ್ರಥಮ ವರ್ಷ ಪೂರೈಸುತ್ತಿದ್ದು,

ಈ ಸಂದರ್ಭದಲ್ಲಿ ಸರಕಾರ ಕೈಗೆತ್ತಿಕೊಂಡ ಗಟ್ಟಿ ನಿರ್ಧಾರಗಳ ಕುರಿತು ದೇಶದ ಜನತೆಗೂ ಹೆಮ್ಮೆಯಿದೆ.

ಸ್ವಾತಂತ್ರ್ಯ ನಂತರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೂಲಕ ಜನರಿಗೆ ನೀಡಿದ್ದ ವಾಗ್ದಾನವನ್ನು ಪೂರ್ಣಗೊಳಿಸಿದೆ.

ಅನೇಕ ವರ್ಷಗಳಿಂದ ವಿವಾದದ ಸುಳಿಯಾಗಿದ್ದ ರಾಮ ಮಂದಿರದ ತೀರ್ಪಿನ ಸಂಧರ್ಭದಲ್ಲೂ ಸರಕಾರ ಕೈಗೆತ್ತಿಕೊಂಡ ಕ್ರಮಗಳು ಜನರಿಗೆ ಹೊಸ ಭರವಸೆ ಮೂಡಿಸಿದೆ.

ಲಾಕ್ ಡೌನ್ ಸಂದರ್ಭದಲ್ಲಿ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಜನರ ಸಂಕಟ್ಟಕ್ಕೆ ಹೆಗಲು ನೀಡಿದೆ.

ಸರಕಾರದ ಎಲ್ಲಾ ಸಾಧನೆಗಳನ್ನು ಮಂಗಳೂರು ನಗರ ದಕ್ಷಿಣದ ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಿಸುವ ಕಾರ್ಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮಂಡಲ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಜೆ. ಸುರೇಂದ್ರ,

ರೂಪಾ ಡಿ ಬಂಗೇರ, ಬಿಜೆಪಿ ಮುಖಂಡರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಕಿರಣ್ ರೈ ಮತ್ತಿರರು ಉಪಸ್ಥಿತರಿದ್ದರು.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!