Connect with us

DAKSHINA KANNADA

‘ಕಾರ್ಯಕರ್ತ ಹರ್ಷ ಹತ್ಯೆಯಲ್ಲಿ ಮುಸ್ಲಿಂ ಗೂಂಡಾಗಳು ಕ್ರೂರತೆಯನ್ನು ಮೆರೆದಿದ್ದಾರೆ’-ಶಾಸಕ ಭರತ್ ಶೆಟ್ಟಿ

Published

on

ಮಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸರಿಯಾಗಿ ಕಲಾಪಕ್ಕೆ ಅಡ್ಡಿಪಡಿಸುವುದು ಹಾಗೂ ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದ್ದು ಖಂಡಿಸಿ

ಭಾರತೀಯ ಜನತಾ ಪಾರ್ಟಿ ಉತ್ತರ ಮಂಡಲದ ವತಿಯಿಂದ ಮಂಗಳೂರಿನ ಕಾವೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.


ಕಾವೂರಿನ ಬಿಜೆಪಿ ಕಚೇರಿಯಿಂದ ಕಾವೂರು ಜಂಕ್ಷನ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಪಕ್ಷದ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕ ಡಾ ಭರತ್ ಶೆಟ್ಟಿ ವೈ ಮಾತನಾಡಿ “ರಾಜ್ಯದ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಜೋಡಿಸುವ ಕೆಲಸ ಮಾಡಬೇಕಾದ ಕಾಂಗ್ರೆಸ್ ವಿಧಾನಸಭೆಯ ಒಳಗೆ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಪ್ರವೇಶಿಸಿ ಕಾನೂನಿಗೆ ವಿರುದ್ಧವಾಗಿ ವರ್ತಿಸಿ ದೇಶದ್ರೋಹಿ ಕೆಲಸವನ್ನು ಮಾಡಿದೆ.


ಹಿಜಬ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರವನ್ನು ಧೈರ್ಯದಿಂದ ಪ್ರಕಟಿಸಲು ಮುಂದಾಗದೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಎಸ್‌ಡಿಪಿಐ ಪಕ್ಷದೊಂದಿಗೆ ಸೇರಿಕೊಂಡು

ಶಿಕ್ಷಣಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿಯರ ಮನಸ್ಸಿನಲ್ಲಿ ಧರ್ಮದ ಆಫೀಮನ್ನು ಕಾಂಗ್ರೆಸ್‌ನವರು ತುಂಬಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ರಾಷ್ಟ್ರೀಯವಾದಿ, ದೇಶಭಕ್ತ ಬಜರಂಗದಳದ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿ ಕೋಮುವಾದಿ ಮುಸ್ಲಿಂ ಗೂಂಡಾಗಳು ಕ್ರೂರತೆಯನ್ನು ಮೆರೆದಿದ್ದು,


6 ಗಂಟೆಯಲ್ಲಿ ಕೊಲೆಗಡುಕರನ್ನು ಬಂಧಿಸಿ ಜೈಲಿಗೆ ತಳ್ಳಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರುಗಳಾದ ತಿಲಕರಾಜ್ ಕೃಷ್ಣಾಪುರ,  ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಜಿಲ್ಲಾ ಮಾಧ್ಯಮ ಪ್ರಮುಖ್ ರಣ್ ದೀಪ್ ಕಾಂಚನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending