Connect with us

    DAKSHINA KANNADA

    ಬಿಜೆಪಿ ಪ್ರತಿನಿಧಿಗಳು 35 ವರ್ಷಗಳಿಂದ ಕೊಟ್ಟದ್ದು ದುರಾಡಳಿತ ಮಾತ್ರ: ಮುನೀರ್ ಕಾಟಿಪಳ್ಳ ಆರೋಪ

    Published

    on

    ಮಂಗಳೂರು: ಕಳೆದ 35 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದ ಕ್ಷೇತ್ರಗಳನ್ನು ಬಿಜೆಪಿಯವರೇ ಪ್ರತಿನಿಧಿಸುತ್ತಿದ್ದಾರೆ. ಯಾವುದೇ ಸರಕಾರ ಬಂದರೂ ಆಡಳಿತ ಬಿಜೆಪಿಯವರ ಕೈಯಲ್ಲಿದೆ. ಆದರೆ ಕಳೆದ ಮೂರುವರೆ ದಶಕದ ಅವಧಿಯಲ್ಲಿ ಈ ಬಿಜೆಪಿಯ ಪ್ರತಿನಿಧಿಗಳು ದುರಾಡಳಿತ ನಡೆಸಿದರೇ ಹೊರತು ಜನರಿಗೆ ಬೇಕಾದ್ದನ್ನು ಏನೂ ಮಾಡಿಲ್ಲ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಹಾಗೂ ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಅರೋಪಿಸಿದರು.

    ಸಿಪಿಎಂ ಜಿಲ್ಲಾ ಸಮಿತಿ ವತಿಯಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸರ್ವ ಜನತೆಯ ಉತ್ತಮ ಬದುಕಿಗಾಗಿ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬೇಡಿಕೆಗಳನ್ನು ಮುಂದಿಟ್ಟು ಮಂಗಳೂರಿನಲ್ಲಿ ನಡೆದ ಜಿಲ್ಲಾಧಿಕಾರಿ ಕಚೇರಿ ಚಲೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಕಳೆದ 35 ವರ್ಷಗಳಿಂದ ಕರಾವಳಿ ಜಿಲ್ಲೆಗಳನ್ನು ಪ್ರತಿನಿಧಿಸಿದ ಬಿಜೆಪಿಯ ಶಾಸಕರು ಮತ್ತು ಸಂಸದರು ಈ ಜಿಲ್ಲೆಗಳ ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ. ಹಾಗಾಗಿ ನಾವು ಅವರ ಬಗ್ಗೆ ಮಾತನಾಡುತ್ತಿದ್ದೇವೆ ಎಂದರು. ಸಿಪಿಎಂ ನಾಯಕ ಯಾದವ ಶೆಟ್ಟಿ ಪ್ರಸ್ತಾವನೆಗೈದು ಬಿಜೆಪಿಯವರು ಆಯ್ಕೆಯಾಗಿ ಹೋದ ಬಳಿಕ ಜಿಲ್ಲೆಯ ಪ್ರಗತಿ ಶೂನ್ಯ. ಭಾವನಾತ್ಮಕ ವಿಷಯಗಳ ಮೇಲೆಯೇ ಅವರು ಆಡಳಿತ ನಡೆಸಿದ್ದಾರೆ ಎಂದು ಟೀಕಿಸಿದರು.

    ಸಭೆಯನ್ನುದ್ದೇಶಿಸಿ ಸಿಪಿಎಂ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್‌ ಬಜಾಲ್, ಜಯಂತಿ ಶೆಟ್ಟಿ, ವಸಂತ ಆಚಾರಿ, ಕೃಷ್ಣಪ್ಪ ಕೊಂಚಾಡಿ ಮುಂತಾದವರು ಮಾತನಾಡಿದರು. ಪ್ರಾರಂಭದಲ್ಲಿ ಜ್ಯೋತಿ ಜಂಕ್ಷನಿನ ಅಂಬೇಡ್ಕರ್‌ ವೃತ್ತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಕ್ಲಾಕ್‌ ಟವರ್‌ ಜಂಕ್ಷನ್‌ ಬಳಿಗೆ ತೆರಳಿ ಅಲ್ಲಿ ಬಹಿರಂಗ ಸಭೆ ನಡೆಸಿದರು.

     

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending