Monday, July 4, 2022

ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ: ಮುಂಬರುವ ಚುನಾವಣೆ ಕುರಿತು ಸುದೀರ್ಘ ಚರ್ಚೆ..!

ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ: ಮುಂಬರುವ ಚುನಾವಣೆ ಕುರಿತು ಸುದೀರ್ಘ ಚರ್ಚೆ..!

ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಇಂದು ಶಿವಮೊಗ್ಗದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯ ಉಸ್ತುವಾರಿ  ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಞ ನಳಿನ್ ಕುಮಾರ್ ಕಟೀಲ್ ಸಭೆಯಲ್ಲಿ  ಭಾಗವಹಿಸಲಿದ್ದಾರೆ.

ಶಿವಮೊಗ್ಗದ ಪ್ರೇರಣಾ ಕನ್ವೆನ್ಞನ್ ಹಾಲ್ ನಲ್ಲಿ ಸಭೆ ನಡೆಯಲಿದ್ದು, ಬೆಳಗ್ಗೆ 10:30 ಕ್ಕೆ ಕಾರ್ಯಕಾರಣಿ ಸಭೆ ಉದ್ಘಾಟನೆಗೊಳ್ಳಲಿದೆ.

ಸಿಎಂ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ, ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ಡಿಸಿಎಂ ಗೋವಿಂದ ಕಾರಜೋಳ, ಸದಾನಂದ ಗೌಡ, ಪ್ರಹ್ಲಾದ ಜೋಷಿ, ಸಂಸದೆ ಶೋಭಾ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಏರ್ಪಡಿಸಲಾಗಿದ್ದು, ಶಿವಮೊಗ್ಗ ಬಿಜೆಪಿಯಿಂದ ಈ ಪ್ರತ್ಯೇಕ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕಾರಣಿ ಸಭೆಯಲ್ಲಿ ಸಂಘಟನೆ ಹಾಗೂ ಮುಂಬರುವ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾರ್ಯಕಾರಣಿ ಸಭೆ ಅಂತ್ಯವಾಗಲಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...