ಮೂಡಬಿದಿರೆ: ಇಲ್ಲಿ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಹಾಗೂ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಇಂದು ಬೆಳಗ್ಗೆ ಕಾರ್ಯನಿಮಿತ್ತ ಮಂಗಳೂರಿನಿಂದ ಮೂಡಬಿದಿರೆ ಕಡೆಗೆ ತೆರಳುತ್ತಿದ್ದಾಗ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಬಸ್ಸಿಗೆ ಬೆಂಗಾವಲು ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೆಂಗಾವಲು ವಾಹನದ ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.