Connect with us

    bengaluru

    ಭಗವದ್ಗೀತೆ ಓದುವವರು ದೇಶದ ಆಸ್ತಿ: ರಾಜ್ಯದಲ್ಲಿ ಭಗವದ್ಗೀತೆ ಕಲಿಕೆಯನ್ನು ಸ್ವಾಗತಿಸಿದ ಬಿಜೆಪಿ ರಾಜ್ಯಾಧ್ಯಕ್ಷ

    Published

    on

    ಬೆಂಗಳೂರು: ಶಿಕ್ಷಣ ಎಂದರೆ ಅದು ಮನುಷ್ಯನ ಸುಪ್ತ ಸಾಮರ್ಥ್ಯದ ಅಭಿವ್ಯಕ್ತಿಗೊಳಿಸುವ ಪ್ರಕ್ರಿಯೆ. ಇಂದಿನ ಶಿಕ್ಷಣದಲ್ಲಿ ಕೇವಲ ಮೆದುಳಿಗೆ ಮಾಹಿತಿ ಕೊಡಲಾಗುತ್ತಿದೆ.

     

    ಶಿಕ್ಷಣವು ಮನುಷ್ಯನೊಳಗಿನ ವ್ಯಕ್ತಿತ್ವಕ್ಕೆ ಹೊಳಪು ಮತ್ತು ಬೆಳಕು ಕೊಡುವ ಮಾದರಿಯಲ್ಲಿರಬೇಕು.

    ಆದ್ದರಿಂದ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ತರಗತಿಗಳಲ್ಲಿ ಭಗವದ್ಗೀತೆಯ ಶಿಕ್ಷಣ ನೀಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

    ಶಿಕ್ಷಣದಲ್ಲಿ ಭಗವದ್ಗೀತೆಯನ್ನು ಭೋಧಿಸುವ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ಅವರು “ವಿದ್ಯಾರ್ಥಿಯ ಸರ್ವತೋಮುಖ ವಿಕಾಸದ ಬದಲಾಗಿ ಇಂದು ಆತನ ತಲೆಗೆ ಏನೇನೋ ತುರುಕುವ ಕೆಲಸ ನಡೆದಿದೆ. ಮನುಷ್ಯನ ನೈತಿಕ ಮೌಲ್ಯಗಳನ್ನು ಗಟ್ಟಿಗೊಳಿಸುವ ನಮ್ಮ ಪ್ರಾಚೀನ ಚಿಂತನೆ, ವಿಚಾರಧಾರೆಯನ್ನು ತಿಳಿಸುವ ಕೆಲಸ ಆಗಬೇಕು.

    ವಿದ್ಯಾರ್ಜನೆ “ನಹಿ ಜ್ಞಾನೇನ ಸದೃಶಂ” ಎಂಬಂತೆ ದೇಶ ಮತ್ತು ಜಗತ್ತಿನ ಒಳಿತಿಗೆ ಬಳಕೆ ಆಗಬೇಕೆಂಬುದನ್ನು ಹೇಳಿಕೊಡಬೇಕು. ಸ್ವಂತ ಬೆಳವಣಿಗೆ ಮಾತ್ರವಲ್ಲದೆ ಸಮಾಜದ ಒಳಿತಿಗಾಗಿ ಕಲಿತ ವಿದ್ಯೆ ಬಳಕೆ ಆಗಬೇಕು. ಭಗವದ್ಗೀತೆಯು ಭಾರತ ದೇಶದ ಅಂತಃಸತ್ವ.

    ಹಿಂದೆ ಶಿಕ್ಷಣ ಸಚಿವರಾಗಿದ್ದ ಎಂ.ಸಿ. ಚಾಗ್ಲಾ ಅವರು ನೈತಿಕ ಶಿಕ್ಷಣವನ್ನು ಕೊಡುವ ಕುರಿತು ಪ್ರತಿಪಾದಿಸಿದ್ದರು. ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ವಿಚಾರಧಾರೆಯನ್ನು ತಿಳಿಸಲು ಅವರು ತಿಳಿಸಿದ್ದರು ಎಂದು ವಿವರಿಸಿದ್ದಾರೆ.

    ಭಗವದ್ಗೀತೆಯನ್ನು ವಿದೇಶಗಳಲ್ಲೂ ಇಷ್ಟಪಟ್ಟು ಕಲಿಸುತ್ತಿದ್ದಾರೆ. ಮನುಷ್ಯ ಮನುಷ್ಯತ್ವದೊಂದಿಗೆ ಬದುಕಬೇಕು ಎಂಬುದನ್ನು ತಿಳಿಸುವ ಕಾರ್ಯವನ್ನು ಭಗವದ್ಗೀತೆ ಮಾಡುತ್ತದೆ. ಇವತ್ತಿನ ಕ್ರೌರ್ಯ, ಹಿಂಸೆ, ಅಪರಾಧ ಪ್ರವೃತ್ತಿ ಹೆಚ್ಚಳದ ಈ ಕಾಲಘಟ್ಟದಲ್ಲಿ ಭಗವದ್ಗೀತೆಯ ಅಗತ್ಯ ಹೆಚ್ಚಾಗಿದೆ ಎಂದಿದ್ದಾರೆ.

    ಹಿಂದೊಮ್ಮೆ ಅಮೆರಿಕದ ಷಿಕಾಗೊದಲ್ಲಿ ಭಗವದ್ಗೀತೆಯ ಮೇಲ್ಗಡೆ ಕುರಾನ್, ಅದರ ಮೇಲೆ ಬೈಬಲ್ ಇತ್ತು. ಆಗ ವಿವೇಕಾನಂದರನ್ನು ಈ ಕುರಿತು ಅಲ್ಲಿನ ಪ್ರಜೆಯೊಬ್ಬರು ಗಮನ ಸೆಳೆದು ಭಗವದ್ಗೀತೆ ಕೆಳಗಿದೆ ಎಂದಾಗ “ಭಗವದ್ಗೀತೆಯು ಎಲ್ಲ ವಿಚಾರಗಳ ಬೇರು, ತಳಹದಿ” ಎಂದು ಸ್ವಾಮಿ ವಿವೇಕಾನಂದರು ತಿಳಿಸಿದ್ದರು. ಅದೇ ಮಾದರಿಯಲ್ಲಿ ಭಗವದ್ಗೀತೆ ಕಲಿಕೆಯು ನೈತಿಕತೆಯ ತಳಹದಿ ಆಗಬಲ್ಲದು ಎಂದು ತಿಳಿಸಿದ್ದಾರೆ.

    ಭಗವದ್ಗೀತೆಯು ದೇಶದ ಸಂಸ್ಕೃತಿಯ ಭಾಗವಾಗಿದೆ. ಮತಬ್ಯಾಂಕ್ ರಾಜಕಾರಣ, ಓಲೈಕೆಯ ರಾಜಕೀಯ ಮಾಡುವವರಿಗೆ ದೇಶದ ಇಂಥ ಗಟ್ಟಿ ಬೇರುಗಳ ಅರಿವಿಲ್ಲ. ಗಾಂಧೀಜಿ ಅವರು ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಭಗವದ್ಗೀತೆಯನ್ನು ದೇಶದಾದ್ಯಂತ ಪ್ರಸಾರ ಆಗಬೇಕೆಂದು ಪ್ರಯತ್ನ ಮಾಡಿದ್ದರು. ಭಗವದ್ಗೀತೆ ಓದುವವರು ದೇಶದ ಆಸ್ತಿಯಾಗುತ್ತಾರೆ. ಅವರು ದೇಶಕ್ಕೆಂದೂ ಹೊರೆ ಅನಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

    ನ್ಯಾಯಾಂಗ ವ್ಯವಸ್ಥೆಯಲ್ಲೂ ಭಗವದ್ಗೀತೆಯನ್ನು ಮುಟ್ಟಿ ಸತ್ಯವನ್ನೇ ಹೇಳುವುದಾಗಿ ಪ್ರಮಾಣ ಮಾಡುವ ಪದ್ಧತಿಯಿದೆ. ಭಗವದ್ಗೀತೆ ಎಂದಾಗ ದೇಶದೊಳಗೆ ವ್ಯಕ್ತಿಯಲ್ಲಿ ರೋಮಾಂಚನ ಆಗಿ ಸುಳ್ಳು ಹೇಳುವವನೂ ಸತ್ಯ ಹೇಳುವಂಥ ಸ್ಥಿತಿ ನಿರ್ಮಾಣವಾಗುತ್ತದೆ.

    ಸ್ವಾಮಿ ವಿವೇಕಾನಂದರು ಮನುಷ್ಯ ನಿರ್ಮಾಣದ ಶಿಕ್ಷಣ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಅದಕ್ಕೆ ಅನುಗುಣವಾಗಿ ಮೂಲ ಶಿಕ್ಷಣದಲ್ಲಿ ಭಗವದ್ಗೀತೆಯ ಶಿಕ್ಷಣ ಅತ್ಯಗತ್ಯ ಎಂದು ನಳಿನ್‍ ಕುಮಾರ್ ಕಟೀಲ್ ಅವರು ಪ್ರತಿಪಾದಿಸಿದ್ದಾರೆ.

    bengaluru

    ಪಟಾಕಿ ದುರಂತ: ಡಬ್ಬದ ಮೇಲೆ ಯುವಕನನ್ನು ಕೂರಿಸಿ ಬಾಂಬ್​ ಸಿಡಿಸಿದ್ರು; ಸ್ಥಳದಲ್ಲೇ ಸಾ*ವು!

    Published

    on

    ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.

    ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬ*ಲಿಯಾಗಿದ್ದಾನೆ.

    ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ‌ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.

    ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾ*ವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

    Continue Reading

    bangalore

    ಅಬ್ಬಬ್ಬಾ! ಖತರ್ನಾಕ್ ಗರ್ಲ್ ಫ್ರೆಂಡ್; ಪ್ರಿಯಕರನನ್ನೇ ರಾಬರಿ ಮಾಡಿಸಿದ ಯುವತಿ, ಯಾಕೆ ಗೊತ್ತಾ!?

    Published

    on

    ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.

    ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.

    ಆ್ಯಕ್ಸಿಡೆಂಟ್ – ಡ್ರಾಮಾ :
    ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್‌ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್‌ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
    ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
    ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

    ಇದನ್ನು ಓದಿ:ಪುತ್ತೂರು ಕಾಂಗ್ರೆಸ್‌ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್‌..!

    ಬೇಡವಾಗಿದ್ದ ಬಾಯ್ ಫ್ರೆಂಡ್ :

    ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    Continue Reading

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    Trending