ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಬಾಳೆಹಣ್ಣನ್ನು ನೀಡಿ ಹಸಿವನ್ನು ನೀಗಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರನ್ನು ಸೇರಿಸುವ ಚಾರ್ಮಾಡಿ ಘಾಟ್‌ನಲ್ಲಿ ಮಂಗಗಳಿಗೆ ಹಣ್ಣು ವಿತರಣೆ ಮಾಡುತ್ತಿದ್ದರು.
ಈ ಸಂದರ್ಭ ಆ ದಾರಿಯಾಗಿ ಪ್ರಯಾಣಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸಹ ಕಾರಿನಿಂದ ಇಳಿದು ಕಾರ್ಯಕರ್ತರಿಗೆ ಸಾಥ್ ನೀಡಿದ್ದಾರೆ.
ಲಾಕ್ ಡೌನ್ನಿಂದ ವಾಹನ ಸಂಚಾರವಿಲ್ಲದೆ ಆಹಾರಕ್ಕಾಗಿ ಕೋತಿಗಳು ಪರದಾಟ ನಡೆಸಿದ್ದವು.
ನಿನ್ನೆ ಮಂಗಗಳಿಗೆ 100 ಕೆ.ಜಿ. ಹಣ್ಣನ್ನು ವಿಹೆಚ್‌ಪಿ ಮತ್ತು ಭಜರಂಗದಳ ಕಾರ್ಯಕರ್ತರು ಆಹಾರವಾಗಿ ನೀಡಿದ್ದಾರೆ.