Connect with us

DAKSHINA KANNADA

ಜೆಡಿಎಸ್‌ ಮೈತ್ರಿಯಿಂದ ಬಿಜೆಪಿ ಪಕ್ಷ ಸರ್ವನಾಶವಾಗಲಿದೆ : ಎಂ ವೀರಪ್ಪ ಮೊಯ್ಲಿ

Published

on

ಮಂಗಳೂರು: ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾರೋ ಆ ಪಕ್ಷಕ್ಕೆ ಒಡು ಹೊಕ್ಕಿದಂತೆ ಎಂದು ಬಿಜೆಪಿ ಜೊತೆಗೆ ಜೆಡಿಎಸ್‌ ಪಕ್ಷ ಮೈತ್ರಿ ಮಾಡಿಕೊಂಡಿರುವುದಕ್ಕೆ ಮಾಜಿ ಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ವ್ಯಂಗ್ಯ ಮಾಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವೀರಪ್ಪ ಮೊಯ್ಲಿ ಅವರು, ನಮ್ಮ ತುಳು ಭಾಷೆಯಲ್ಲಿ ಒಂದು ಗಾದೆ ಮಾತಿದೆ.

ಯಾವ ಮನೆಗೆ ಒಡು ಹೋಗುತ್ತದೆಯೋ ಅದು ಸರ್ವನಾಶವಾಗಿ ಹೋಗುತ್ತದೆ ಅಂತ. ಜೆಡಿಎಸ್ ಪಕ್ಷ ಕೂಡಾ ಒಂದು ಒಡು ಇದ್ದಂತೆ.

ಅವರು ಎಲ್ಲಿಗೆ ಹೋಗುತ್ತಾರೋ ಅದು ಸರ್ವನಾಶವಾಗಿ ಹೋಗುತ್ತದೆ. ಈಗ ಅವರು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ.

ಬಿಜೆಪಿಯೂ ಸರ್ವ ನಾಶವಾಗಿ ಹೋಗುತ್ತದೆ. ನಮಗೆ ಬಹಳ ಕಟು ಅನುಭವ ಆಗಿದೆ. ಈ ಹಿಂದೆ 28ರಲ್ಲಿ 1 ಸೀಟು ಲೋಕಸಭೆಯಲ್ಲಿ ಬಂದದ್ದು ಇಲ್ವೇ ಇಲ್ಲ. ಹೊಂದಾಣಿಕೆ ಬಿ ಟೀಮ್ ಎಂದು ಹೇಳುತ್ತಿದ್ದರು.

ಆ ದಾರಿದ್ರ್ಯ ನಮ್ಮ ಪಕ್ಷಕ್ಕೆ ಬರುವುದೇ ಇಲ್ಲ ಎಂದು ಕುಮಾರ ಸ್ವಾಮಿ ಹೇಳಿದ್ದರು. ಈಗ ಅವರಿಗೆ ದಾರಿದ್ರ್ಯ ಒಳಗೆ ಸೇರಿದೆ.

ಅವರ ಜೊತೆ ಸೇರಿದ ಸಂದರ್ಭ ನಾನು ಸೋತೆ, ಖರ್ಗೆ, ಮುನಿಯಪ್ಪ ಸೋತರು, ಮುನಿಯಪ್ಪ ಕೂಡಾ ಸೋತರು. ಈಗ ಅನಿಷ್ಟ ನಮ್ಮಿಂದ ದೂರ ಆಗಿದೆ ಎಂದರು.

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಟೀಕೆ ಮಾಡುತ್ತಿರುವ ರಾಜ್ಯ ಸಭಾ ಸದಸ್ಯ ಬಿಕೆ ಹರಿಪ್ರಸಾದ್‌ ಅವರ ಕುರಿತ ಪ್ರಶ್ನೆಗೆ ಉತ್ತರಿಸಿದ ಮೊಯ್ಲಿ, ಆಯಾಯ ಪಕ್ಷದ ವೇದಿಕೆಯಲ್ಲೇ ಚರ್ಚೆ ಮಾಡಬೇಕು. ಹೊರತು, ಬೇರೆ ಕಡೆ ಚರ್ಚೆ ಮಾಡಿದರೆ ಅದು ಅಶಿಸ್ತು ಆಗುತ್ತದೆ. ಇದು ಸರಿಯಲ್ಲ ಎಂದರು.

 

1 Comment

1 Comment

  1. Madhusudan P N

    23/09/2023 at 7:52 PM

    ಮೊಯಿಲಿಯವರು ಬಯಸಿದ್ದೇ ಆಗಲಿ. ಆದರೆ ಅವರು ಚಿಕ್ಕಬಳ್ಳಾಪುರದಿಂದ ಎಂ.ಪಿ ಆಘಲು ಸಾಧ್ಯವಾಗದು..

Leave a Reply

Your email address will not be published. Required fields are marked *

DAKSHINA KANNADA

Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!

Published

on

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ ಜಂಕ್ಷನ್‌ ಬಳಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ  ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್‌ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Continue Reading

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

LATEST NEWS

Trending