Friday, March 24, 2023

ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಕಡಬ, ಸುಳ್ಯ, ಪುತ್ತೂರು ಬಂದ್‌ಗೆ ಕರೆ

ಪುತ್ತೂರು: ದ.ಕ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಮೂರು ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.


ನಿನ್ನೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವ ತನಕವೂ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಆಸ್ಪತ್ರೆ ಮುಂಭಾಗ ನೆರೆದಿದ್ದ ಸಂಬಂಧಿಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟು ಹಿಡಿದಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ತಡರಾತ್ರಿ 1.30 ರ ಸುಮಾರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಜಿಲ್ಲಾಧಿಕಾರಿ ನೀಡಿದ ಭರವಸೆಯ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರಿನ ಖಾಗಿ ಆಸ್ಪತ್ರೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇಂದು ಬೆಳಗ್ಗೆ 9.30ಕ್ಕೆ ಪುತ್ತೂರು ನಗರದಿಂದ ಪಾರ್ಥಿವ ಶರೀರದ ಮೆರವಣಿಗೆ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಪ್ರವೀಣ್ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬಂದೋಬಸ್ತ್ ಕಲ್ಪಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಹಾಗೂ ಸುಳ್ಯ, ಕಡಬ ಬೆಳ್ಳಾರೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...