DAKSHINA KANNADA
ಕರಾವಳಿಯಲ್ಲಿ ಸಿಂಹದ ಜೊತೆ ಖದರ್ ತೋರಿಸಿದ ರಾಜಾಹುಲಿ
ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಭೇಟಿಯೂ ಸರಕಾರಿ ಕಾರ್ಯಕ್ರಮವಾಗಿದ್ದರೂ, ಕರಾವಳಿಯ ಕಾರ್ಯಕರ್ತರೊಳಗೆ ಹುದುಗಿದ್ದ ಅಸಮಾಧಾನವನ್ನು ಬಿಜೆಪಿ ಪಕ್ಷ ಮತ್ತು ಸ್ಥಳೀಯ ನಾಯಕರು ಅತ್ಯುತ್ತಮವಾಗಿ ಬಳಸಿಕೊಂಡು ಸ್ವಲ್ಪ ಮಟ್ಟಿಗೆ ಅಸಮಾಧಾನಿತ ಕಾರ್ಯಕರ್ತರನ್ನು ತಣಿಸುವಲ್ಲಿ ಯಶಸ್ವಿಯಾದರು.
ಕರಾವಳಿಯಲ್ಲಿ ಮೋದಿ ಇನ್ನೂ ಕ್ರೇಝ್ ಇದೆ ಎನ್ನುವುದನ್ನು ಮತ್ತೊಮ್ಮೆ ಕಾರ್ಯಕರ್ತರು ಇಂದಿನ ಕಾರ್ಯಕ್ರಮದಲ್ಲಿ ತೋರಿಸಿಕೊಟ್ಟಿದ್ದಾರೆ. ಮಧ್ಯಾಹ್ನ 12.30 ರ ಸುಮಾರಿಗೆ ಬರಬೇಕಿದ್ದ ಮೋದಿ 2 ಗಂಟೆಗೆ ಸಮಾವೇಶದ ಸ್ಥಳಕ್ಕೆ ಬಂದರೂ ಯಾವುದೇ ಉತ್ಸಾಹ ಬತ್ತದ ಅಭಿಮಾನಿಗಳು ‘ಮೋದಿ ಮೋದಿ’ ಎಂದು ಉದ್ಘೋಷ ಹಾಕುತ್ತಿದ್ದರು.
ಜೊತೆಗೆ ಕರ್ನಾಟಕ ಬಿಜೆಪಿಯ ಪವರ್ಫುಲ್ ಲೀಡರ್ ಯಡಿಯೂರಪ್ಪ ಮಾಜಿ ಸಿಎಂ ಆಗಿ ಚುನಾವಣಾ ನಿವೃತ್ತಿ ಘೋಷಿಸಿದ್ದರೂ ಹಾಲಿ ಸಿಎಂ ಗಿಂತ ಕರ್ನಾಟಕದಲ್ಲಿ ತನ್ನ ಖದರ್ ಇನ್ನೂ ಇದೆ ಎಂದು ಇದೇ ವೇದಿಕೆಯಲ್ಲಿ ಮತ್ತೊಮ್ಮೆ ಸಾಬೀತುಪಡಿಸಿದರು.
ಸಿಎಂ ಸ್ಥಾನದಿಂದ ಬಿಎಸ್ವೈ ನಿವೃತ್ತಿಯಾದರೂ ಕರಾವಳಿ ಜನರ ಹೃದಯದಲ್ಲಿ ಯಡಿಯೂರಪ್ಪ ಎಂಬ ಹೆಸರು ಇನ್ನೂ ಅಚ್ಚಳಿಯದೇ ಉಳಿದಿದೆ ಎಂಬುವುದನ್ನು ಅವರ ಹೆಸರು ಹೇಳುವ ವೇಳೆಗೆ ಸೌಂಡ್ ಮಾಡಿದ ಭಾರೀ ಕರತಾಡನದ ಮಳೆ ಹಾಗೂ ಉದ್ಘೋಷಗಳೇ ತಿಳಿಸುತ್ತಿತ್ತು.
ಇನ್ನೂ ವಿಶೇಷ ಅಂದರೆ ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದ ನಂತರ ಪ್ರಧಾನಿಯೊಂದಿಗೆ ಭಾಗವಹಿಸಿದ ಮೊದಲ ಕಾರ್ಯಕ್ರಮವಾಗಿತ್ತು.
ನಿನ್ನೆಯವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ನಾಯಕರ ಬಗ್ಗೆ ಇದ್ದ ಅಸಮಾಧಾನಗಳ ಬಗ್ಗೆ ಹೇಳುವುದಾದರೂ ಒಂದು ಹಂತಕ್ಕೆ ಶಮನಗೊಂಡವು ಎಂದು ಹೇಳಿದರೂ ಮುಂದಿನ ದಿನಗಳಲ್ಲಿ ಅದು ಯಾವ ರೂಪ ಪಡೆದುಕೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಅಧಿಕಾರಿಗಳು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!