ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಇಂದು ಕೂಡ ಯತ್ನಿಸಿದ್ದಾರೆ.
ಕಾರ್ಯಕ್ರಮಕ್ಕೆ ಪ್ರತಿಭಟನೆ ಮೂಲಕ ಅಡ್ಡಿಪಡಿಸಲು ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯೆಗೆ ಪ್ರತಿಕ್ರಿಯೆ ತೋರಿದರು.
ಆದರೆ ಪೊಲೀಸರು ಅದಕ್ಕೆ ಅವಕಾಶ ಕೊಡದೆ ಬಿಜೆಪಿಯ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಪಂಜಾಬ್ ನಲ್ಲಿ ಅಲ್ಲಿನ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ಕಾರಿನಲ್ಲಿ ಅರ್ಧ ತಾಸು ಕಾಯುವಂತೆ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತ ಪಡಿಸಿದರು.
ದಿವಂಗತ ಇಂದಿರಾ ಗಾಂಧಿ ಅವರು ಅವರ ಅಂಗರಕ್ಷಕರಿಂದ ಹತ್ಯೆಗೆ ಒಳಗಾದಾಗ ನಾವು ಆಘಾತ ವ್ಯಕ್ತ ಪಡಿಸಿದ್ದೇವೆ. ನಮ್ಮ ನೋವು ತೋಡಿಕೊಂಡಿದ್ದೆವು ಆದರೆ ಇಂದು ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಅವಮಾನ ಎಸಗಿದೆ ಎಂದು ಬಿಜೆಪಿ ನಾಯಕರು ದೂರಿದರು.