ಬಂಟ್ವಾಳ: ಚುನಾವಣೆ ಹತ್ತಿರ ಬಂದ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಮೋಸ ಮಾಡುವುದೇ ಬಿಜೆಪಿ ಸಾಧನೆಯಾಗಿದ್ದು ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಆರೋಪಿಸಿದ್ದಾರೆ.
ಬಂಟ್ವಾಳದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ
ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯು ಇಂದು ಬಿಸಿರೋಡಿನ ಪ್ಲೈ ಓವರ್ ಕೆಳಗೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ ಅವರು, ಚುನಾವಣೆ ಹತ್ತಿರ ಬಂದ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಮೋಸ ಮಾಡುವುದೇ ಬಿಜೆಪಿ ಸಾಧನೆಯಾಗಿದ್ದು,
ಕೇವಲ ಸರಕಾರ ಸ್ವಾಮ್ಯದ ಕಂಪೆನಿಗಳನ್ನು ಮಾರಾಟ ಮಾಡಿದ್ದೇ ಬಿಜೆಪಿಯ ಸಾಧನೆ ಎಂದು ವ್ಯಂಗವಾಡಿದರು. ಕಾಂಗ್ರೆಸ್ ಸರಕಾರ ಬಡವರ ಏಳಿಗೆಗಾಗಿ ಇರುವ ಪಕ್ಷವಾದರೆ ಬಿಜೆಪಿ ಕೇವಲ ಓಟಿಗಾಗಿ ಮಾತ್ರ ಇರುವ ಪಕ್ಷವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಪ್ರಮುಖರಾದ ಸುಭಾಶ್ಚಂದ್ರ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಲೋಕೇಶ್ ಸುವರ್ಣ, ಐಡಾ ಸುರೇಶ್, ಜೆಸಿಂತಾ ಡಿಸೋಜ, ಎಂ.ಎಸ್.ಮೊಹಮ್ಮದ್, ಅಬ್ಬಾಸ್ ಅಲಿ, ವೆಂಕಪ್ಪ ಪೂಜಾರಿ ಮೊದಲಾದವರಿದ್ದರು.