Sunday, November 27, 2022

ಟಾಲಿವುಡ್ ಚಿತ್ರಜಗತ್ತಿಗೆ ಸೋಮವಾರ ಕೆಟ್ಟ ದಿನ..! ನಟ ನಾಗಶೌರ್ಯ,ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ..!

ಬೆಂಗಳೂರು : ಟಾಲಿವುಡ್(tollywood )ಇತಿಹಾಸದಲ್ಲಿ ಇದೊಂದು ಕೆಟ್ಟ ದಿನದಂತೆ ಕಾಣುತ್ತಿದೆ. ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ ಇಂದು ಬೆಳಗ್ಗೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ನಟ ನಾಗಶೌರ್ಯ ಕೆಲ ನಿಮಿಷಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದೀಗ ನಟ ನಾಗಶೌರ್ಯ ಕೆಲ ನಿಮಿಷಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಯುವ ಮತ್ತು ಭರವಸೆಯ ನಾಯಕ ನಾಗ ಶೌರ್ಯ ಶೂಟಿಂಗ್ ಸ್ಪಾಟ್‌ನಲ್ಲಿ ಮೂರ್ಛೆ ಹೋಗಿದ್ದಾರೆ.

ಕಳೆದ 3 ದಿನಗಳಿಂದ ಅವರು ತಮ್ಮ ಪಾತ್ರಕ್ಕಾಗಿ ಡಯಟ್‌ನಲ್ಲಿದ್ದರು ಎಂದು ಚಿತ್ರತಂಡ ತಿಳಿಸಿದೆ.

ಕೂಡಲೇ ಅವರನ್ನು ಹೈದರಾಬಾದ್‌ನ ಗಚಿಬೌಲಿಯಲ್ಲಿರುವ ಎಐಜಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ನಿರ್ಜಲೀಕರಣಗೊಂಡಿದ್ದು, ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ನಾಳೆ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ನಾಗ ಶೌರ್ಯ ಇದೇ ಭಾನುವಾರ ಬೆಂಗಳೂರಿನಲ್ಲಿ ಅನುಷಾ ಶೆಟ್ಟಿ ಅವರನ್ನು ಮದುವೆಯಾಗಲಿದ್ದಾರೆ.

ಇನ್ನು ಖ್ಯಾತ ನಟ ಮಹೇಶ್‌ ಬಾಬು ಅವರ ತಂದೆ ಸೂಪರ್‌ ಸ್ಟಾರ್‌ ಕೃಷ್ಣ ಅವರು ಅಸ್ಪತ್ರೆಗೆ ದಾಖಲಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. 24 ಗಂಟೆ ಬಳಿಕವಷ್ಟೇ ಅವರ ಆರೋಗ್ಯದ ಸ್ಥಿತಿ ಕುರಿತು ಹೇಳಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಮಧ್ಯರಾತ್ರಿ ಹೃದಯಾಘಾತವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ.

24 ಗಂಟೆಗಳ ನಂತರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು, ಈಗಾಗಲೇ ಇಪ್ಪತ್ತು ನಿಮಿಷಗಳ ಕಾಲ ಸಿಪಿಆರ್ ಮಾಡಲಾಗಿದೆ,

ಆದರೆ ಈಗ ಅವರ ಆರೋಗ್ಯ ಸ್ಥಿರವಾಗಿದ್ದರೂ ಸಹ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಕಾಂಟಿನೆಂಟರ್‌ ವೈದ್ಯರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...