ಮಂಗಳೂರು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಇವುಗಳ ಆಶ್ರಯದಲ್ಲಿ ರಕ್ತನಿಧಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಶ್ರೀ ಭಾರತಿ ಕಾಲೇಜು ನಂತೂರು ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ನಗರದ ನಂತೂರಿನಲ್ಲಿರುವ ಶ್ರೀ ಭಾರತಿ ಕಾಲೇಜಿನಲ್ಲಿ ಇಂದು ನಡೆಯಿತು.
ಈ ವೇಳೆ ಶಿಬಿರವನ್ನು ಉದ್ದೇಶಿಸಿ ಹೋಮ್ ಗಾರ್ಡ್ ಕಮಾಂಡೆಂಟ್ ಡಾ .ಮುರಲೀ ಮೋಹನ ಚೂಂತಾರು ಮಾತನಾಡಿ ರಕ್ತ ಅಗತ್ಯವಿರುವ ರೋಗಿಗಳಿಗೆ ರಕ್ತ ಪೊರೈಕೆ ಮಾಡುವಂತಹ ನಿಟ್ಟಿನಲ್ಲಿ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದರು.
ಸುಮಾರು 50 ಕ್ಕೂ ಹೆಚ್ಚು ಮಂದಿ ರಕ್ತದಾನಿಗಳು ಭಾಗವಹಿಸಿ ರಕ್ತದಾನ ಮಾಡಿದರು.
ಈ ವೇಳೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಪ್ರಮುಖರು ಹಾಗು ಮಂಗಳೂರು ಹವ್ಯಕ ಸಭಾದ ಪ್ರಮುಖರು, ಶ್ರೀ ಭಾರತಿ ಕಾಲೇಜು ಆಡಳಿತ ಮಂಡಳಿಯ ಪ್ರಮುಖರು, ರಕ್ತನಿಧಿ ವೆನ್ನಾಕ್ ಆಸ್ಪತ್ರೆ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.