Connect with us

    BANTWAL

    ಬಂಟ್ವಾಳ: ಗಾಂಧಿ ಜಯಂತಿ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

    Published

    on

    ಬಂಟ್ವಾಳ: ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ, ತೆಂಕಬೆಳ್ಳೂರು, ಬಡಗಬೆಳ್ಳೂರು, ಕುರಿಯಾಳ, ಅಮ್ಟಾಡಿ ಮತ್ತು ಅರಳ ವಲಯ ಕಾಂಗ್ರೆಸ್ ಸಮಿತಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ,

    ಉಚಿತ ಕಣ್ಣಿನ ಮತ್ತು ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ಕಾರ್ಡು ವಿತರಣಾ ಕಾರ್ಯಕ್ರಮವು ಇಂದು ಪಚ್ಚಿನಡ್ಕ ತೊಡಂಬಿಲ ಚರ್ಚ್ ಹಾಲ್ ನಲ್ಲಿ ನಡೆಯಿತು.

    ಮಾಜಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹಾತ್ಮಾಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಬಳಿಕ ಮಾತನಾಡಿದ ಅವರು, ಸುಂದರ ಹಾಗೂ ಸಾಮರಸ್ಯದ ಭಾರತದ ಕನಸನ್ನು ಕಂಡ ಗಾಂಧೀಜಿಯವರನ್ನು ಅಪಮಾನಿಸುವ ಘಟನೆಗಳು ನಡೆಯುತ್ತಿದ್ದು ಇದು ಖಂಡನೀಯ ಎಂದರು.

    ಈ ಬಗ್ಗೆ ಪ್ರಜ್ಞಾವಂತರು ಮೌನವಾಗಿರದೆ ಅದನ್ನು ವಿರೋಧಿಸುವ ಕೆಲಸ ಮಾಡಬೇಕು ಎಂದರು. ದೇಶ ಎಂದರೆ ಒಂದು ವ್ಯಕ್ತಿ, ಪಕ್ಷ ಅಲ್ಲ. ಹುತಾತ್ಮರಾದವರಿಗೆ ಅಗೌರವ ಕೊಡುವ ಕೆಲಸ ಮಾಡಬಾರದು ಎಂದ‌ ಅವರು,ಗಾಂಧೀಜಿಯ ಆಶಯದಂತೆ ಮತೀಯವಾದಕ್ಕೆ ಜಾತ್ಯಾತೀತವಾದ ಉತ್ತರವಾಗಲಿ ಎಂದರು.

    ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ವಂ.ಫಾದರ್ ವಿನ್ಸೆಂಟ್‌ ಲೋಬೋ, ಈ ಸಂದರ್ಭ ಬಿಲ್ಲವ ಮುಖಂಡ ಸೇಸಪ್ಪ ಕೋಟ್ಯಾನ್, ಫಾದರ್ ಮುಲ್ಲರ್ ಆಸ್ಪತ್ರೆ ರಕ್ತನಿಧಿ ಕೇಂದ್ರದ ಚಾರು ಕೋಸ್ಲಾ ವೇದಿಕೆಯಲ್ಲಿದ್ದರು.

    ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಬೇಬಿಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಸುದರ್ಶನ್ ಜೈನ್, ಅಬ್ಬಾಸ್ ಅಲಿ, ಸಂಜೀವ ಪೂಜಾರಿ, ಜಯಂತಿ ವಿ.ಪೂಜಾರಿ, ಮಲ್ಲಿಕಾ ಶೆಟ್ಟಿ, ಫ್ಲೋಸಿ ಡಿಸೋಜ, ಮಲ್ಲಿಕಾ ಪಕ್ಕಳ ಮೊದಲಾದವರು ಉಪಸ್ಥಿತರಿದ್ದರು.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending