Connect with us

  MANGALORE

  ವೃಂದಾವನಸ್ಥ ವಿಶ್ವೇಶ ತೀರ್ಥ ಸ್ವಾಮೀಜಿ ಪುಣ್ಯತಿಥಿ ಅಂಗವಾಗಿ ರಕ್ತದಾನ ಶಿಬಿರ

  Published

  on

  ಮಂಗಳೂರು: ವೃಂದಾವನಸ್ಥ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಎರಡನೇ ಪುಣ್ಯತಿಥಿಯ ಅಂಗವಾಗಿ ಶಿವಳ್ಳಿ ಸ್ಪಂದನ ಮಂಗಳೂರು, ಇದರ ವತಿಯಿಂದ ಜ.2ರಂದು ಎರಡನೇ ವರ್ಷದ ಬೃಹತ್ ರಕ್ತದಾನ ಶಿಬಿರ ಕದ್ರಿಯ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಿತು.


  ಶಿವಳ್ಳಿ ಸ್ಪಂದನ ದೇರೇಬೈಲು ವಲಯದ ಸಹಭಾಗಿತ್ವದಲ್ಲಿ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಪೇಜಾವರ ಶ್ರೀಗಳ ಪುಣ್ಯಸ್ಮರಣೆಗಾಗಿ ಆಯೋಜಿಸಿದ್ದ

  ಈ ರಕ್ತದಾನ ಶಿಬಿರವನ್ನು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನ‌ ಪ್ರಾಂಶುಪಾಲರಾದ ಹರೀಶ ಶೆಟ್ಟಿ ಉದ್ಘಾಟಿಸಿದರು.
  ನಂತರ ನಡೆದ ವಿಶ್ವೇಶ ತೀರ್ಥ ಶ್ರೀಪಾದರ ದ್ವಿತೀಯ ಸಂಸ್ಮರಣಾ ಕಾರ್ಯಕ್ರಮ‌ ಕಾಲೇಜಿನ‌ ಆಡಿಟೋರಿಯಂ‌ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಉದ್ಯಮಿ ರಮೇಶ ರಾವ್, ಹಿರಿಯ ಜ್ಯೋತಿಷಿ ನವೀನ ಚಂದ್ರ ಭಟ್ ಅತಿಥಿಗಳಾಗಿ ಆಗಮಿಸಿದ್ದರು.

  ರೆಡ್‌ಕ್ರಾಸ್‌ನ ಹಿರಿಯ ವೈದ್ಯಾಧಿಕಾರಿ ಡಾ. ಜೆ ಎನ್ ಭಟ್‌ರಿಗೆ ಅವರ ನಿಸ್ವಾರ್ಥ ಸೇವೆಗಾಗಿ ಗೌರವಾಭಿನಂದನೆ ಸಲ್ಲಿಸಲಾಯಿತು.

  ನಂತರ ಮಾತನಾಡಿದ ಡಾ ಭಟ್, ರಕ್ತದಾನದ ಮಹತ್ವ ಹಾಗೂ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಬಗ್ಗೆ ಎಲ್ಲರಿಗೂ ಕರೆ ನೀಡಿದರು.

  ಇದೇ ಸಂದರ್ಭದಲ್ಲಿ ನೀಟ್ ಪಿಜಿ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 103ನೇ ರಾಂಕ್ ಗಳಿಸಿದ ಡಾ. ರಕ್ಷಾ ಅವರನ್ನೂ ಸನ್ಮಾನಿಸಲಾಯಿತು.

  ಹೊಸ ವರುಷದ ಈ ಸಂದರ್ಭದಲ್ಲಿ, ಶಿವಳ್ಳಿ ಸ್ಪಂದನದ ವರ್ಣಮಯ ಕ್ಯಾಲೆಂಡರನ್ನೂ ಬಿಡುಗಡೆಗೊಳಿಸಲಾಯಿತು.


  ಪ್ರಾಸ್ತಾವಿಕ ಭಾಷ‌ಣ ಮಾಡಿದ ಶಿವಳ್ಳಿ ಸ್ಪಂದನ ತಾಲೂಕು ಕಾರ್ಯದರ್ಶಿ, ಗಣೇಶ ಹೆಬ್ಬಾರ್, ಸ್ವಾಮೀಜಿಯವರ ಸಮಾಜಸೇವೆಯೇ ಈ ರಕ್ತದಾನ ಶಿಬಿರಕ್ಕೆ ಪ್ರೇರಣೆ ಎಂದರು.

  ಶಿವಳ್ಳಿ ಸ್ಪಂದನ ಮಂಗಳೂರು‌ ಅಧ್ಯಕ್ಷ ಕೃಷ್ಣ ಭಟ್ ಮಾತನಾಡಿ ಸಂಘಟನೆಯು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು,

  ಎರಡು ವರುಷಗಳ ಸಾಧನೆಗೆ ಸದಸ್ಯರನ್ನು ಅಬಿನಂದಿಸಿದರು. ಈ ಕಾರ್ಯಕ್ರಮದ ಆಯೋಜನೆಯ ನೇತೃತ್ವ ವಹಿಸಿದ್ದ ದೇರೇಬೈಲ್ ವಲಯ ಅಧ್ಯಕ್ಷ ಗೋಪಾಲಕೃಷ್ಣ ಎಲ್ಲರನ್ನೂ ಸ್ವಾಗತಿಸಿದರು.

  ದೇರೇಬೈಲ್ ವಲಯ ಕಾರ್ಯದರ್ಶಿ ರಘುರಾಮ‌ ರಾವ್ ಧನ್ಯವಾದ‌ ಸಮರ್ಪಿಸಿದರು. ಧನ್ಯಾ ಮತ್ತು ಪ್ರಾಪ್ತಿ ನಿರೂಪಿಸಿದರು.
  200 ಅಧಿಕ ಜನರು ರಕ್ತದಾನ ಮಾಡಿದರು.

  DAKSHINA KANNADA

  ಹಾವು ಮನೆಯೊಳಗೆ ಬಂದರೆ ಶುಭ ಸೂಚಕವೇ..?

  Published

  on

  ಮಂಗಳೂರು: ಹಾವು.. ಆ ಶಬ್ಧ ಕೇಳಿದೊಡನೆ ಒಮ್ಮೆ ಭಯ ಹುಟ್ಟಿಸುತ್ತದೆ. ಇನ್ನು ಎದುರಿಗೆ ಹಾವು ನೋಡಿದರೆ ಹೃದಯದ ಬಡಿತವೇ ನಿಂತು ಹೋದಂತೆ ಆಗುತ್ತದೆ. ಹಾಗೆಯೇ ಒಂದು ವೇಳೆ ನಿಮ್ಮ ಮನೆಯೊಳಗೆ ಹಾವು ಬಂದರೆ ನಿಮಗೆ ಹೇಗಾಗಬಹುದು. ಕೆಲವೊಮ್ಮೆ ಎಷ್ಟೋ ಜನರ ಮನೆಯೊಳಗೆ ಹಾವು ಬಂದಿರುತ್ತದೆ. ಹಾಗೋ ಹೀಗೋ ಹಾವು ಹಿಡಿಯುವರನ್ನು ಕರೆದು ಹಾವನ್ನು ಹೊರಗೆ ಕಳಿಸುವ ಸಾಹಸ ಮಾಡಿದ ನಂತರವೂ ಕೆಲವು ದಿನಗಳವರೆಗೂ ಆ ಭಯ ಇದ್ದೇ ಇರುತ್ತದೆ.

  ಆದರೆ ಹಾವು ಮನೆಯೊಳಗೆ ಬಂದರೆ ಅದನ್ನು ಕೆಲವರು ಶುಭವೆಂದೂ ಇನ್ನೂ ಕೆಲವರು ಸಮಸ್ಯೆ ಎಂದು ಹೇಳುವುದನ್ನು ನಾವು ಕೇಳಿದ್ದೇವೆಹಾವು ಮನೆಗೆ ಬಂದರೆ ಏನು ಅರ್ಥ? ಅದರಿಂದ ಏನಾದರೂ ಸಮಸ್ಯೆ ಇದೆಯೇ ತಿಳಿಯೋಣ.

  ಮನೆಯೊಳಗೆ ಹಾವು ಬರುವುದು ಶುಭ ಸೂಚಕ ಎಂದು ಹೇಳುತ್ತಾರೆ. ಹಿಂದೂ ಸಂಪ್ರದಾಯದಲ್ಲಿ ಹಾವನ್ನು ದೇವರ ರೂಪದಲ್ಲಿ ಪೂಜಿಸಲಾಗುತ್ತದೆ. ಆದಿಶೇಷ ಸರ್ಪಗಳ ರಾಜ, ಶಿವನು ಕೂಡಾ ಹಾವನ್ನು ತನ್ನ ಕತ್ತಿನಲ್ಲಿ ಸುತ್ತಿಕೊಂಡಿದ್ದಾನೆ. ಆದ್ದರಿಂದ ದೇವರ ಸ್ವರೂಪವಾಗಿರುವುದರಿಂದ ಮನೆಯೊಳಗೆ ಹಾವು ಬಂದರೆ ಅದು ಖಂಡಿತ ಏನೋ ಶುಭ ಮುನ್ಸೂಚನೆ ಎಂದು ನಂಬಲಾಗಿದೆ.

  ಮನೆಯೊಳಗೆ ಒಂದು ವೇಳೆ ಕಪ್ಪು ಹಾವು ಬಂದರೆ ಅದನ್ನು ಶುಭ ಎಂದು ಪರಿಗಣಿಸಲಾಗುತ್ತದೆ. ಇದರಿಂದ ನಿಮಗೆ ಶಿವನ ಕೃಪೆ ದೊರೆಯಲಿದ್ದು ಕೆಲವೇ ದಿನಗಳಲ್ಲಿ ನಿಮ್ಮ ಜೀವನ ಬದಲಾಗಲಿದೆ, ನೀವು ಸಂತೋಷ ಜೀವನವನ್ನು ಗಳಿಸಲಿದ್ದೀರಿ ಎಂಬ ಅರ್ಥವನ್ನು ನೀಡುತ್ತದೆ.

  ಹಾವಿನ ಮರಿ ಮನೆಯೊಳಗೆ ಬಂದರೆ ನೀವು ಕೆಲವು ದಿನಗಳಿಂದ ಅರ್ಧಕ್ಕೆ ನಿಲ್ಲಿಸಿದ್ದ ಕೆಲಸಗಳು ಆದಷ್ಟು ಬೇಗ ಪೂರ್ಣಗೊಳ್ಳುತ್ತವೆ ಎಂದು ಅರ್ಥ. ಹಾವು ಮನೆಯನ್ನು ಪ್ರವೇಶಿಸಿದರೆ ಲಕ್ಷ್ಮೀ ಆಶೀರ್ವಾದ ಕೂಡಾ ನಿಮ್ಮ ಮೇಲಿದೆ ಎಂದು ಅರ್ಥ. ಇದುವರೆಗೂ ನೀವು ಎದುರಿಸುತ್ತಿದ್ದ ನಿಮ್ಮ ಆರ್ಥಿಕ ಸಮಸ್ಯೆ ಕೊನೆಗೊಳ್ಳುವುದು. ನಿಮ್ಮ ಆರ್ಥಿಕ ಪರಿಸ್ಥಿತಿ ಸದೃಢಗೊಳ್ಳುವುದು ಖಚಿತ.

  ಒಂದು ವೇಳೆ ನಿಮ್ಮ ಮನೆಗೆ ಬಿಳಿ ಬಣ್ಣದ ಹಾವು ಪ್ರವೇಶಿಸಿದರೆ ಇದು ಇನ್ನಷ್ಟು ಮಂಗಳಕರ ಎನ್ನಲಾಗಿದೆ. ಇದು ಮನೆಯಲ್ಲಿ ಶಾಂತಿ, ಸುಖ, ಸಮೃದ್ಧಿ ನೆಲೆಸುವಂತೆ ಮಾಡುತ್ತದೆ. ಇದ್ದಕ್ಕಿದ್ದಂತೆ ನಿಮ್ಮ ಮನೆಗೆ ಹಸಿರು ಹಾವು ಬಂದರೆ ಅದೂ ಕೂಡಾ ಶುಭವೇ. ಶೀಘ್ರದಲ್ಲೇ ನೀವು ಶುಭ ಸುದ್ದಿ ಕೇಳಲಿದ್ದೀರಿ, ನಿಮ್ಮ ಕಷ್ಟನಷ್ಟಗಳು ಕೊನೆಗೊಳ್ಳುತ್ತವೆ.

  ಹಳದಿ ಬಣ್ಣದ ಹಾವು ಮನೆಗೆ ಬಂದರೆ ನೀವು ಅತಿ ಶೀಘ್ರದಲ್ಲೇ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿ ಜೀವನದಲ್ಲಿ ಪ್ರಗತಿ ಹೊಂದಲಿದ್ದೀರಿ ಎಂದು ಅರ್ಥ. ಅಷ್ಟೇ ಅಲ್ಲ, ಮನೆಗೆ ಹಾವು ಬಂದರೆ ಪತಿ ಪತ್ನಿ ನಡುವೆ ಬಾಂಧವ್ಯ ಹೆಚ್ಚಾಗುತ್ತದೆ. ಪರಸ್ಪರ ಪ್ರೀತಿ ವಿಶ್ವಾಸ ಬೆಳೆಯುತ್ತದೆ. ಜೀವನ ಸುಂದರವಾಗಿರುತ್ತದೆ.

  Continue Reading

  LATEST NEWS

  ಮರದ ಹುಡಿಯ ಗೋಡೌನ್‌ಗೆ ಬೆಂಕಿ..! ಅಗ್ನಿಶಾಮಕ ಸಿಬಂದಿಗಳ ಕಾರ್ಯಾಚರಣೆಯಿಂದ ತಪ್ಪಿದ ಅನಾಹುತ

  Published

  on

  ಉಡುಪಿ: ಉಡುಪಿ  ಜಿಲ್ಲೆಯ ಕಾಪು ತಾಲೂಕಿನ ಪಾದೂರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರದ ಹುಡಿಯನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್‌ಗೆ ಬೆಂಕಿ ತಗುಲಿದ್ದು, ಹೊಗೆ ಮತ್ತು ಬೆಂಕಿಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು.

  ಇದನ್ನೂ ಓದಿ..; ಚಿಕಿತ್ಸೆಗೆಂದು ಬಂದ ಯುವತಿ ಮೇಲೆ ಅತ್ಯಾ*ಚಾರ..! ಕಾಸರಗೋಡು ಮೂಲದ ಯುವಕನ ಬಂಧನ

  ಬಳಿಕ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಉಡುಪಿಯಿಂದ ತೆರಳಿದ ಅಗ್ನಿಶಾಮಕ ದಳ ಸಿಬಂಧಿ ತಕ್ಷಣ ಕಾರ್ಯ ಪ್ರವೃತ್ತಿಗೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮರದ ಹುಡಿ ಬೆಂಕಿಯ ತೀವ್ರತೆಯನ್ನು ಬೇಗನೆ ಆವರಿಸುವುದರಿಂದ ಸಂಭವಿಸುವ ಭಾರೀ ಅನಾಹುತ ತಪ್ಪಿದೆ.

  Continue Reading

  DAKSHINA KANNADA

  ಚಿಕಿತ್ಸೆಗೆಂದು ಬಂದ ಯುವತಿ ಮೇಲೆ ಅತ್ಯಾ*ಚಾರ..! ಕಾಸರಗೋಡು ಮೂಲದ ಯುವಕನ ಬಂಧನ

  Published

  on

  ಮಂಗಳೂರು: ಅನಾರೋಗ್ಯ ಹಿನ್ನಲೆ ಚಿಕಿತ್ಸೆಗೆ ಬಂದ ಮಹಿಳೆಗೆ ಸಹಾಯ ಮಾಡುವ ನಾಟಕವಾಡಿ ಆಕೆಯನ್ನು ಅತ್ಯಾ*ಚಾರ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೇರಳ ಮೂಲದ ಮಹಿಳೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದು, ಅಲ್ಲಿ ಪರಿಚಿತ ಹಾಗೂ ಸಹಾಯ ಮಾಡಲು ನಿಂತಿದ್ದ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಅತ್ಯಾಚಾರ ಮಾಡಿದ್ದು ಅಲ್ಲದೆ ಅದನ್ನ ತನ್ನ ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದು ಬಳಿಕ ಆರೋಪಿ ಆ ವಿಡಿಯೋವನ್ನು ತೋರಿಸಿ ಬ್ಲ್ಯಾಕ್ಮೇಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿರುವುದಾಗಿ ದೂರು ದಾಖಲಾಗಿದೆ.

  ಇದನ್ನೂ ಓದಿ..; ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ದುರಂ*ತ; ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾ*ವು

  ಕಾಸರಗೋಡು ಮೂಲದ ನೊಂದ ಮಹಿಳೆ ಪರಿಚಿತ ಸುಜಿತ್ ಈ ಕೃತ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಬಾರಿಗೆ ತನ್ನ ಮೇಲೆ ಅತ್ಯಾಚಾರ ನಡೆಸಿದ ಸುಜಿತ್, ವಿಡಿಯೋ ಬಹಿರಂಗ ಪಡಿಸುವ ಬೆದರಿಕೆ ಹಾಕಿ ನಿರಂತರ ಕಿರುಕುಳ ನೀಡಿದ್ದಾಗಿ ಮಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತೀಚೆಗೆ ನೊಂದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಅಲ್ಲಿಯೂ ತನ್ನ ಮೇಲೆ ಸುಜೀತ್ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆಯ ಬಳಿಕ ನೊಂದ ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿ ರಕ್ಷಣೆ ಕೋರಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಕಾಸರಗೋಡಿನ ಹೊಸದುರ್ಗದಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  Continue Reading

  LATEST NEWS

  Trending