Connect with us

MANGALORE

5 ನೇ ವರ್ಷದ ಸಾರ್ವಜನಿಕ ರಕ್ತದಾನ ಶಿಬಿರ

Published

on

ಮಂಗಳೂರು: ಹಾರ್ದಿಕ್ ಫ್ರೆಂಡ್ಸ್ ಪಚ್ಚನಾಡಿ, ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್, ಶ್ರೀ ದೇವಿ ಮಾತೃ ಮಂಡಳಿಗಳ: ಸಂಯುಕ್ತ ಆಶ್ರಯದಲ್ಲಿ ದಿ. ಹಾರ್ಧಿಕ್ ರಾಜ್ ಕೊಟ್ಟಾರಿ ಅವರ 5 ನೇ ವರ್ಷದ ಸವಿನೆನಪಿಗೆ ಸಾರ್ವಜನಿಕ ರಕ್ತದಾನ ಶಿಬಿರವನ್ನು ಮಂಗಳೂರು ಹೊರ ವಲಯದ ಪಚ್ಚನಾಡಿಯ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.


ಬ್ಲಡ್ ಬ್ಯಾಂಕ್ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಆಯೋಜಿಸಿದ್ದ ಈ ರಕ್ತದಾನ ಶಿಬಿರವನ್ನು ಚಾಮುಂಡೆಶ್ವರಿ ದೇವಾಸ್ಥನದ ಪ್ರಧಾನ ಅರ್ಚಕರಾದ ರಾಜಾರಾಂ ಭಟ್ ದೀಪಬೆಳಗಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ರಕ್ತದಾನ ಜಗತ್ತಿನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ. ರಕ್ತದಾನ ಮಾಡುದರಿಂದ ಒಂದು ವ್ಯಕ್ತಿಯ ಜೀವ ಉಳಿಸುವ ಭಾಗ್ಯ ರಕ್ತ ದಾನಿಗೆ ಸಿಗುತ್ತೆ. ಆದ್ದರಿಂದ ಈ ಸಂಘಟನೆಗಳು ಇಂದು ಇಲ್ಲಿ ಮಾಡುವ ಕಾರ್ಯ ಇತರರಿಗೆ ಮಾದರಿ ಅಗಿದೆ ಎಂದರು.

ಕಾರ್ಯಕ್ರಮದಲ್ಲಿ ವೈದ್ಯರಾದ ಡಾ ಸತೀಶ್ ಕಲ್ಲಿಮಾರ್ ಬೊಂದೇಲ್, ಡಾ ಭರತ್ ಪದವಿನಂಗಡಿ, ಚಾಮುಂಡೆಶ್ವರಿ ದೇವಾಸ್ಥನದ ಅಧ್ಯಕ್ಷ ವಿಠಲ್ ಶೆಟ್ಟಿ, ಶ್ರೀ ದೇವಿ ಪ್ರಂಡ್ಸ್ ಅಧ್ಯಕ್ಷ ಮೋಹನ್ ಪಚ್ಚನಾಡಿ, ಕೆ ಎಂಸಿ ವೈಧ್ಯರಾದ ಡಾ ಆಕಾಶ್, ಶೇಖರ್ ಪದವಿನಂಗಡಿ,, ಅಂಗನವಾಡಿ ಕಾರ್ಯಕರ್ತೆ ಹರಿನಾಕ್ಷಿ, ಮನೋಹರ್ ಬಂದಳೆ, ರಾಧಾಕೃಷ್ಣ ಪಚ್ಚನಾಡಿ, ಧನುಶ್ ರಾಜ್ ಪಚ್ಚನಾಡಿ, ಶರತ್ ಪದವಿನಂಗಡಿ, ನಟರಾಜ್ ಪಚ್ಚನಾಡಿ, ಶ್ರೀರಾಜ್ ಪಚ್ಚನಾಡಿ ಮತ್ತಿತರರು ಉಪಸ್ಥಿತರಿದ್ದರು

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

LATEST NEWS

Trending