Connect with us

    MANGALORE

    ಶ್ರೀದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಕ್ಷೇತ್ರದ ವತಿಯಿಂದ ರಕ್ತದಾನ ಶಿಬಿರ

    Published

    on

    ಮಂಗಳೂರು: ನಗರದ ಮಾರ್ನಮಿಕಟ್ಟೆಯಲ್ಲಿರುವ ಶ್ರೀ ದೇವಿ ಪ್ರತ್ಯಂಗಿರಾ ವಿಪರೀತ ಮಹಾಭದ್ರಕಾಳ್ಯೈ ಅಮ್ಮನವರ ದೇವಸ್ಥಾನದ ಧರ್ಮಾಧಿಕಾರಿ ಹಾಗೂ ಪ್ರಖ್ಯಾತ ಅಷ್ಟಮಂಗಲ ಜ್ಯೋತಿಷ್ಯ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿಯವರು ದೈವೀಕ ಕಾರ್ಯದ ಜೊತೆಗೆ ಸಮಾಜಮುಖಿ ಕೆಲಸದಲ್ಲೂ ತೊಡಗಿಸಿಕೊಂಡವರು. ಕಷ್ಟದಲ್ಲಿರುವ ರೋಗಿಗಳಿಗೆ ಹಿಡಿದು ಎಲ್ಲರಿಗೂ ಸಹಾಯ ಹಸ್ತವನ್ನು ಚಾಚಿದವರು. ಪ್ರತೀ ವರ್ಷ ತಮ್ಮ ತಾಯಿಯ ಶುಭವತಿ ಅವರ ಪುಣ್ಯ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ ನಡೆಸುತ್ತಿದ್ದಾರೆ.

    Read More..; ನಕಲಿ ವೈದ್ಯನಿಂದ ಭ್ರೂಣ ಹ*ತ್ಯೆ ..! ತನಿಖೆ ವೇಳೆ ವೈದ್ಯನ ಕರಾಳ ಮುಖ ಬಯಲು..!!

    ಈ ಬಾರಿ ನಗರದ ಅತ್ತಾವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಹಲವು ಮಂದಿ ರಕ್ತದಾನ ಮಾಡುವ ಮೂಲಕ ಜೀವದಾನಿಗಳಾದರು. ದೈವಜ್ಞ ಕರಣ್ ಜ್ಯೋತಿಷಿ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಪ್ರತೀ ಒಬ್ಬ ರಕ್ತದಾನಿಗಳಿಗೂ ಥರ್ಮೋಮೀಟರ್ ಜ್ವರಮಾಪನ ಸಾಧನವನ್ನು ವಿತರಿಸಲಾಯಿತು.

    ಕೆಎಂಸಿ ಸಹಯೋಗದೊಂದಿಗೆ ನಡೆದ ಈ ರಕ್ತದಾನ ಶಿಬಿರದಲ್ಲಿ ಜ್ಯೋತಿಷ್ಯ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ , ಕಾರ್ಪೋರೇಟರ್‌ ವೀಣಾ ಮಂಗಳ ಶುಭ ಹಾರೈಸಿದರು. ಕೆಎಂಸಿಯ ಡಾ.ಸುನಿದಿ, ಮಾರುಕಟ್ಟೆ ವಿಭಾಗದ ಅಧಿಕಾರಿ ರಾಕೇಶ್ ದರ್ಶನ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.

    DAKSHINA KANNADA

    ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು?

    Published

    on

    ಮಂಗಳೂರು: ಪೋಷಕರು ಅಥವಾ ಮನೆಯವರು ಚಹಾ, ಕಾಫಿ ಕುಡಿಯುವುದು ನೋಡಿ ಮಕ್ಕಳು ತಮಗೂ ಕೊಡಿ ಎಂದು ಹಟ ಮಾಡುತ್ತಾರೆ. ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು ಎಂದು ಸಂದಿಗ್ಧತೆ ಪೋಷಕರಲ್ಲಿ ಇರುವುದು ಸಹಜ. ಮಕ್ಕಳಿಗೆ ಈ ಪಾನೀಯವನ್ನು ಕೊಡುವ ಬಗ್ಗೆ ತಜ್ಞರು ಏನು ಹೇಳುತ್ತಾರೆ ನೋಡೋಣ.

    ಅಮೆರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಪ್ರಕಾರ 12 ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಚಹಾ, ಕಾಫಿ ಕೊಡಬಾರದು ಹಾಗೂ ಎನರ್ಜಿ ಡ್ರಿಂಕ್ ಕೂಡ ನೀಡುವಂತಿಲ್ಲ. 12 ರಿಂದ 18 ವರ್ಷ ಮಕ್ಕಳು 100 ಮಿಲಿ ಗ್ರಾಂ ನಷ್ಟು ಕೆಫಿನ್ ಹೊಂದಬಹುದು.

    12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಫಿನ್ ನೀಡುವುದರಿಂದ ಅವರ ಹೃದಯ, ಮೆದುಳು, ಮೂತ್ರಪಿಂಡ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಕೆಫಿನ್ ಅಂಶ ಇರುವ ಚಹಾ ಮತ್ತು ಕಾಫಿ ಮಾತ್ರವಲ್ಲು ಚಾಕೊಲೇಟ್ ಪಾನೀಯಗಳು, ಬೇಕರಿ ಐಟಂಗಳು, ಕುಕ್ಕೀಸ್ ಇತ್ಯಾದಿಗಳು ಕೂಡ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡುವಂತಿಲ್ಲ.

    12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಫಿನ್ ನೀಡುವುದರಿಂದ ಇದು ಅವರ ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

    Continue Reading

    DAKSHINA KANNADA

    ಮುಳುಗಿದ ಪಡೀಲ್ ಅಂಡರ್ಪಾಸ್ – ಸಂಚಾರ ಸ್ಥಗಿತ

    Published

    on

    ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಜನತೆಯನ್ನು ಚಂಡಿ ಹಿಡಿಸಿ ಬಿಟ್ಟಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

    ನಗರದ ಹಲವು ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿದ್ದು, ಜನರು ಪರದಾಡುವಂತಾಗಿದೆ. ನಗರದ ಪಡೀಲ್ – ಬಜಾಲ್ ಸಂಪರ್ಕಿಸುವ ರಸ್ತೆಯ ಅಂಡರ್ಪಾಸ್‌ ನೀರಿನಿಂದ ತುಂಬಿ ಮುಳುಗಿ ಹೋಗಿದೆ. ಇಂದು ಬೆಳಿಗ್ಗೆ ಅಂಡರ್‌ಪಾಸ್‌ ಕೆಳಭಾಗದಲ್ಲಿ ನೀರು ತುಂಬಿಕೊಂಡಿದ್ದು ಜನ ಸಂಚರಿಸಲಾಗದೇ ತೊಂದರೆ ಅನುಭವಿಸಿದರು.

    ಕಾರೊಂದು ನೀರಿನಲ್ಲಿ ಬರಲಾಗದ ಸ್ಥಿತಿಯಲ್ಲಿದ್ದು ಬಳಿಕ ಸ್ಥಳೀಯರು ವಾಹನವನ್ನು ದೂಡಿಕೊಂಡು ಬಂದು ಮೇಲೆ ತಂದಿದ್ದಾರೆ. ಪಡೀಲ್‌ – ಬಜಾಲ್‌ ಸಂಪರ್ಕಿಸುವ ಈ ಅಂಡರ್ಪಾಸ್‌ ಪ್ರತೀ ಮಳೆಗಾಲದ ಸಂದರ್ಭದಲ್ಲೂ  ಜನ ಕಂಗೆಡುತ್ತಿದ್ದಾರೆ.

    Continue Reading

    DAKSHINA KANNADA

    ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ

    Published

    on

    ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ.

    ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಎಲ್ಲೆಲ್ಲಿ ಆರೆಂಜ್ ಅಲರ್ಟ್?

    ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ

    ಎಲ್ಲೆಲ್ಲಿ ಯೆಲ್ಲೋ ಅಲರ್ಟ್?

    ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ

    Continue Reading

    LATEST NEWS

    Trending