Connect with us

MANGALORE

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

Published

on

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಭಾ.ಜಪಾ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು.


ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಇಂದು ನಡೆದ ಶಿಬಿರವನ್ನು ಭಾಜಪಾ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉದ್ಘಾಟಿಸಿದರು.
ನೂರಕ್ಕಿಂತಲೂ ಹೆಚ್ಚು ನಾಗರಿಕರು ರಕ್ತದಾನ ಮಾಡಿದರು.

450 ಕ್ಕಿಂತಲೂ ಮಿಕ್ಕಿ ಸಾರ್ವಜನಿಕರು ಉಚಿತ ಕೋವಿಡ್ ಲಸಿಕೆಯನ್ನು ಪಡೆದರು.


ಶಿಬಿರದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ್ ಕಾಮತ್,

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಹಿತೈಷಿಗಳು, ಗಣ್ಯರು ಪಾಲ್ಗೊಂಡರು.

LATEST NEWS

ಕನ್ಯಾನ ಸದಾಶಿವ ಶೆಟ್ಟಿಗೆ ಮಾತೃ ವಿಯೋಗ

Published

on

ಬೆಳ್ತಂಗಡಿ : ಕೊಡುಗೈ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ತಾಯಿ, ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಪತ್ನಿ ಲೀಲಾವತಿ ಶೆಟ್ಟಿ ನಿಧ*ನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮೀ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಗಣ್ಯರ ಸಂತಾಪ :

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಶಶಿಧರ್ ಶೆಟ್ಟಿ, ಯಕ್ಷಧ್ರುವ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Continue Reading

LATEST NEWS

ಹಳೆಯಂಗಡಿ : ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Published

on

ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.

ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ,ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು.

ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.

 

Continue Reading

DAKSHINA KANNADA

ಗಾಂ*ಜಾ ಸಾಗಾಟದ ವೇಳೆ ಪೊಲೀಸರ ಬಲೆಗೆ ಬಿದ್ದ ಆರೋಪಿ..!

Published

on

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇಧಿತ ಮಾ*ದಕ ವಸ್ತು ಗಾಂ*ಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂ*ಜಾವನ್ನು ಬುಧವಾರ(ಮಾ.27) ದಂದು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ.  ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂ*ಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಯಿಂದ ಗೂಡ್ಸ್ ಟೆಂಪೋ, 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂ*ಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ  ಎಂದು ಅಂದಾಜಿಸಲಾಗಿದೆ. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹ*ಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹ*ಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂ*ಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.

Continue Reading

LATEST NEWS

Trending