DAKSHINA KANNADA
ಮಂಗಳೂರು: ‘ಬ್ಲಡ್ ಡೋನರ್ಸ್’ ಇದರ 350ನೇ ರಕ್ತದಾನ ಶಿಬಿರಕ್ಕೆ ಚಾಲನೆ
Published
2 years agoon
By
Adminಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ “ಕರಾವಳಿಯ ಚರಿತ್ರೆಯ ಪುಟಗಳಿಗೆ ಮತ್ತೊಂದು ಗರಿ” ಎಂಬ ಧ್ಯೇಯದೊಂದಿಗೆ 350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ನಾಟೆಕಲ್ ಆರ್ ಕೆ ಸಿ ವಂಡರ್ ಸಿಟಿಯಲ್ಲಿ ನಡೆಯಿತು.
ವಿಧಾನ ಪರಿಷತ್ ಸದಸ್ಯ ಬಿ.ಎಂ ಫಾರೂಖ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕೋವಿಡ್ ನಿಂದಾಗಿ ರಕ್ತದಾನ ಶಿಬಿರಗಳು ನಡೆಸಲು ಸಾಧ್ಯವಾಗದ ಕಾರಣದಿಂದಾಗಿ ಜಿಲ್ಲೆಯಾದ್ಯಂತ ಶೇ.100 ರಕ್ತದ ಕೊರತೆಯಾಗಿತ್ತು.
2020ರ ಸಮೀಕ್ಷೆ ಪ್ರಕಾರ ದೇಶದಲ್ಲಿ 15ಸಾವಿರ ಯೂನಿಟ್ ರಕ್ತದ ಬೇಡಿಕೆಯಿದೆ. ದಾನಿಗಳಿಂದ 11ಸಾವಿರ ಯೂನಿಟ್ ರಕ್ತ ಮಾತ್ರ ಸಂಗ್ರಹವಾಗಿದೆ. ಒಟ್ಟು 4 ಸಾವಿರ ಯೂನಿಟ್ ರಕ್ತದ ಕೊರತೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾದ ಯುವ ಜನತೆ ರಕ್ತದಾನ ಮಾಡುವ ಮೂಲಕ ಹಾಗೂ ರಕ್ತದಾನದ ಜಾಗೃತಿಯನ್ನು ಮೂಡಿಸುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕಿದೆ ಎಂದರು.
ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಶಿಬಿರದಲ್ಲಿ ರಕ್ತದಾನ ಮಾಡಿ ಮಾತನಾಡಿ, ಕಳೆದ ಒಂಭತ್ತು ವರ್ಷಗಳಿಂದ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆ ಜಾತಿಧರ್ಮ ನೋಡದೆ ನಿರಂತರವಾಗಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ರಕ್ತ ಒದಗಿಸುವ ಜೊತೆಗೆ ಸಮಾಜ ಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿರುವುದು ಶ್ಲಾಘನಿಯ ಎಂದರು.
ಬ್ಲಡ್ ಡೋನರ್ಸ್ ಉಳ್ಳಾಲ ಮಂಗಳೂರು ಇದರ ಮಹಿಳಾ ವಿಭಾಗದ ಅಧ್ಯಕ್ಷೆ ಆಯಿಷಾ ಯು.ಕೆ ಉಳ್ಳಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ರಕ್ತದ ಅವಶ್ಯಕತೆ ಬಿದ್ದಾಗ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಹಾಗೂ ನಿರಂತರವಾಗಿ ರಕ್ತದಾನ ಮಾಡುವವರನ್ನು ಗೌರವಿಸಲಾಯಿತು.
ಬೆಳ್ಮ ಗ್ರಾ.ಪಂ ಅಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಕೆಪಿಸಿಸಿ ಪ್ರ.ಕಾರ್ಯದರ್ಶಿ ಇನಾಯತ್ ಆಲಿ ಮುಲ್ಕಿ, ಯೆನೆಪೋಯ ವಿಶ್ವ ವಿದ್ಯಾಲಯದ ಕಾರ್ಯಕ್ರಮ ಸಂಯೋಜಕಿ ಡಾ. ಅಶ್ವಿನಿ, ನಾಟೆಕಲ್ ಆರ್ ಕೆಸಿ ಸಂಸ್ಥೆಯ ನಿರ್ದೇಶಕ ಅಬ್ದುಲ್ ಅಝೀಝ್, ಬ್ಲಡ್ ಡೋನರ್ಸ್ ಮಂಗಳೂರು ಇದರ ಅಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಉಪಾಧ್ಯಕ್ಷ ಅಶ್ರಫ್ ಉಪ್ಪಿನಗಂಡಿ, ಜೊತೆ ಕಾರ್ಯದರ್ಶಿ ಸಾಹುಲ್ ಹಮೀದ್ ಕಾಶಿಪಣ್ನ, ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು, ಕಾಸರಗೋಡು ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ,
ಜಿ.ಪಂ ಮಾಜಿ ಸದಸ್ಯ ಮುಸ್ತಾಫ ಪಾವೂರು, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಡಿ.ಎಂ ಮುಹಮ್ಮದ್, ಉದ್ಯಮಿ ಕೆ.ಟಿಂಬರ್ ಅಬೂಬಕ್ಕರ್, ನಾಸೀರ್ ಸಾಮಣಿಗೆ, ಕಥೋಲಿಕ್ ಸಭಾ ಉಳ್ಳಾಲ ವಲಯ ಮಾಜಿ ಅಧ್ಯಕ್ಷ ಆಲ್ವಿನ್ ಡಿಸೋಜಾ, ಮದನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಇಸ್ಮಾಯಿಲ್ ಮಾಸ್ಟರ್, ಝಕರಿಯ್ಯಾ ಮಲಾರ್, ಹಮೀದ್ ಮಾರಿಪಳ್ಳ, ಹಕೀಂ ಮಾರಿಪಳ್ಳ, ಸುಹೇಲ್ ಕಂದಕ್, ರವೂಫ್ ಸಿ.ಎಂ, ಸಿದ್ದೀಕ್ ಉಚ್ಚಿಲ, ಮುನೀರ್ ಚೆಂಬುಗುಡ್ಡೆ, ಅಪ್ತಾಬ್ ಕುಳಾಯಿ, ಲತೀಫ್ ಉಪಸ್ಥಿತರಿದ್ದರು.
ಈ ಸಂದರ್ಭ ದಾನಿಗಳಿಂದ 358 ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ