Friday, August 12, 2022

ಮಂಗಳೂರು: ‘ಬ್ಲಡ್ ಡೋನರ್ಸ್’ ಇದರ 350ನೇ ರಕ್ತದಾನ ಶಿಬಿರಕ್ಕೆ ಚಾಲನೆ

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ “ಕರಾವಳಿಯ ಚರಿತ್ರೆಯ ಪುಟಗಳಿಗೆ ಮತ್ತೊಂದು ಗರಿ” ಎಂಬ ಧ್ಯೇಯದೊಂದಿಗೆ  350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ನಾಟೆಕಲ್ ಆರ್ ಕೆ ಸಿ ವಂಡರ್ ಸಿಟಿಯಲ್ಲಿ ನಡೆಯಿತು.


ವಿಧಾನ ಪರಿಷತ್ ಸದಸ್ಯ‌ ಬಿ.ಎಂ ಫಾರೂಖ್ ಮುಖ್ಯ ಅತಿಥಿಯಾಗಿ‌ ಭಾಗವಹಿಸಿ‌ ಮಾತನಾಡಿ‌ ಕೋವಿಡ್ ನಿಂದಾಗಿ ರಕ್ತದಾನ ಶಿಬಿರಗಳು ನಡೆಸಲು ಸಾಧ್ಯವಾಗದ ಕಾರಣದಿಂದಾಗಿ ಜಿಲ್ಲೆಯಾದ್ಯಂತ ಶೇ.100 ರಕ್ತದ ಕೊರತೆಯಾಗಿತ್ತು.

2020ರ ಸಮೀಕ್ಷೆ ಪ್ರಕಾರ ದೇಶದಲ್ಲಿ 15ಸಾವಿರ  ಯೂನಿಟ್ ರಕ್ತದ ಬೇಡಿಕೆಯಿದೆ. ದಾನಿಗಳಿಂದ 11ಸಾವಿರ ಯೂನಿಟ್ ರಕ್ತ‌ ಮಾತ್ರ ಸಂಗ್ರಹವಾಗಿದೆ. ಒಟ್ಟು 4 ಸಾವಿರ ಯೂನಿಟ್ ರಕ್ತದ ಕೊರತೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾದ ಯುವ ಜನತೆ  ರಕ್ತದಾನ ಮಾಡುವ ಮೂಲಕ  ಹಾಗೂ ರಕ್ತದಾನದ ಜಾಗೃತಿಯನ್ನು ಮೂಡಿಸುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕಿದೆ ಎಂದರು.

ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ‌ ಶಿಬಿರದಲ್ಲಿ ರಕ್ತದಾನ ಮಾಡಿ ಮಾತನಾಡಿ, ಕಳೆದ ಒಂಭತ್ತು ವರ್ಷಗಳಿಂದ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆ ಜಾತಿಧರ್ಮ ನೋಡದೆ ನಿರಂತರವಾಗಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ರಕ್ತ ಒದಗಿಸುವ ಜೊತೆಗೆ ಸಮಾಜ ಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿರುವುದು ಶ್ಲಾಘನಿಯ ಎಂದರು.

ಬ್ಲಡ್ ಡೋನರ್ಸ್ ಉಳ್ಳಾಲ  ಮಂಗಳೂರು ಇದರ ಮಹಿಳಾ ವಿಭಾಗದ ಅಧ್ಯಕ್ಷೆ ಆಯಿಷಾ ಯು.ಕೆ ಉಳ್ಳಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ರಕ್ತದ ಅವಶ್ಯಕತೆ ಬಿದ್ದಾಗ  ಅತ್ಯುತ್ತಮವಾಗಿ  ಕಾರ್ಯನಿರ್ವಹಿಸುವವರಿಗೆ ಹಾಗೂ ನಿರಂತರವಾಗಿ ರಕ್ತದಾನ ಮಾಡುವವರನ್ನು ಗೌರವಿಸಲಾಯಿತು.

ಬೆಳ್ಮ‌ ಗ್ರಾ.ಪಂ ಅಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಕೆಪಿಸಿಸಿ ಪ್ರ.ಕಾರ್ಯದರ್ಶಿ ಇನಾಯತ್ ಆಲಿ‌ ಮುಲ್ಕಿ,  ಯೆನೆಪೋಯ ವಿಶ್ವ ವಿದ್ಯಾಲಯದ ಕಾರ್ಯಕ್ರಮ ಸಂಯೋಜಕಿ ಡಾ. ಅಶ್ವಿನಿ, ನಾಟೆಕಲ್ ಆರ್‌ ಕೆಸಿ ಸಂಸ್ಥೆಯ ನಿರ್ದೇಶಕ ಅಬ್ದುಲ್‌ ಅಝೀಝ್, ಬ್ಲಡ್ ಡೋನರ್ಸ್ ಮಂಗಳೂರು‌ ಇದರ ಅಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಉಪಾಧ್ಯಕ್ಷ ಅಶ್ರಫ್‌ ಉಪ್ಪಿನಗಂಡಿ, ಜೊತೆ ಕಾರ್ಯದರ್ಶಿ ಸಾಹುಲ್ ಹಮೀದ್ ಕಾಶಿಪಣ್ನ, ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು,‌‌ ಕಾಸರಗೋಡು ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ,

ಜಿ.ಪಂ ಮಾಜಿ ಸದಸ್ಯ ಮುಸ್ತಾಫ ಪಾವೂರು, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಡಿ.ಎಂ  ಮುಹಮ್ಮದ್,  ಉದ್ಯಮಿ ಕೆ.ಟಿಂಬರ್ ಅಬೂಬಕ್ಕರ್, ನಾಸೀರ್ ಸಾಮಣಿಗೆ, ಕಥೋಲಿಕ್ ಸಭಾ ಉಳ್ಳಾಲ ವಲಯ ಮಾಜಿ ಅಧ್ಯಕ್ಷ ಆಲ್ವಿನ್ ಡಿಸೋಜಾ, ಮದನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ  ಇಸ್ಮಾಯಿಲ್‌ ಮಾಸ್ಟರ್, ಝಕರಿಯ್ಯಾ‌ ಮಲಾರ್, ಹಮೀದ್ ಮಾರಿಪಳ್ಳ, ಹಕೀಂ ಮಾರಿಪಳ್ಳ, ಸುಹೇಲ್ ಕಂದಕ್, ರವೂಫ್ ಸಿ.ಎಂ,‌ ಸಿದ್ದೀಕ್ ಉಚ್ಚಿಲ, ಮುನೀರ್ ಚೆಂಬುಗುಡ್ಡೆ, ಅಪ್ತಾಬ್ ಕುಳಾಯಿ, ಲತೀಫ್ ಉಪಸ್ಥಿತರಿದ್ದರು.

ಈ ಸಂದರ್ಭ ದಾನಿಗಳಿಂದ 358 ಯುನಿಟ್ ರಕ್ತ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here

Hot Topics

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...

ಆದಾಯಕ್ಕಿಂತ ಅಧಿಕ ಆಸ್ತಿ: ಮಂಗಳೂರು ಮೂಲದ ಸರ್ಕಾರಿ ಅಧಿಕಾರಿಗೆ 3 ವರ್ಷ ಜೈಲು, 50 ಲಕ್ಷ ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6...

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...