Monday, July 4, 2022

ಮಾಜಿ ಶಾಸಕ ಮೊಯ್ದೀನ್‌ ಬಾವ ಸಹೋದರನ ಫೆರಾರಿ ಕಾರು ಅಪಘಾತ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಫೆರಾರಿ ಕಾರು ರಸ್ತೆ ವಿಭಜಕಕ್ಕೆ ಗುದ್ದಿರುವ ಘಟನೆ ಯಲಹಂಕ ಫ್ಲೈ ಓವರ್ ಬಳಿ ನಡೆದಿದೆ.

ನಿನ್ನೆ ರಾತ್ರಿ 9 ಗಂಟೆ ಫಾರೂಖ್ ಒಡೆತನದ MH 02 FF 5555 ನಂಬರಿನ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ರಸ್ತೆ ವಿಭಜಕಕ್ಕೆ ಗುದ್ದಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.


ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕಾರು ರಸ್ತೆ ವಿಭಜಕಕ್ಕೆ ಗುದ್ದಿ ತಮಿಳುನಾಡು ಶಾಸಕರ ಪುತ್ರ, ಭಾವಿ ಸೊಸೆ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...

“ಮದರಸ ಬಗ್ಗೆ ಹೇಳಿಕೆಯನ್ನು ಉದುರುವಾಗ ನಾಲಗೆ ಹದ್ದು ಬಸ್ತಿನಲ್ಲಿ ಇಟ್ಟು ಮಾತನಾಡುವುದು ಒಳಿತು”

ಮಂಗಳೂರು: ಪ್ರವಾದಿ ನಿಂದನೆಗೈದ ನೂಪುರ್ ಶರ್ಮಾ ರನ್ನು ಬೆಂಬಲಿಸಿ ಹೇಳಿಕೆ ನೀಡಿದ ಕನ್ನಯ್ಯ ಲಾಲ್ ನನ್ನು ಇತ್ತೀಚೆಗೆ ರಾಜಸ್ತಾನದ ಉದಯಪುರದಲ್ಲಿ ಹತ್ಯೆ ಮಾಡಿದ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರು ಆಗಿದ್ದು,ಅಂತಹ...

ವಿಟ್ಲ: ಬಕ್ರೀದ್ ಹಬ್ಬ ಹಿನ್ನೆಲೆ ಜಿಲ್ಲಾ ಗಡಿಪ್ರದೇಶದಲ್ಲಿ ಬಂದೋಬಸ್ತ್‌

ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ...