Monday, July 4, 2022

ಮಗುಚಿಬಿದ್ದ ಮೀನುಗಾರಿಕಾ ಬೋಟ್‌: ಮೂವರ ರಕ್ಷಣೆ

ಉಡುಪಿ: ಭಾರೀ ಗಾಳಿ ಮಳೆಯ ಪರಿಣಾಮ ಇಂದು ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದ ದುರ್ಘಟನೆ ಕಂಚುಗೋಡು ಸಮೀಪದ ಕಡಲಿನಲ್ಲಿ ಸಂಭವಿಸಿದೆ. ದೋಣಿಯಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ.


ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ ಖಾರ್ವಿ (65), ನಾಗರಾಜ ಖಾರ್ವಿ (38) ಮತ್ತು ವಿನಯ ಖಾರ್ವಿ (30) ರಕ್ಷಿಸಲ್ಪಟ್ಟ ಮೀನುಗಾರರಾಗಿದ್ದಾರೆ.
ರಾಮ ಖಾರ್ವಿ ಅವರ ಓಂಕಾರ ಪ್ರಸನ್ನ ಎಂಬ ದೋಣಿಯಲ್ಲಿ ಮುಂಜಾವ ಮೂವರು ಮೀನುಗಾರಿಕೆಗೆ ತೆರಳಿದ್ದರು.

ಬೆಳಗ್ಗೆ 8ಗಂಟೆ ಸುಮಾರಿಗೆ ಭಾರೀ ಗಾಳಿ ಮಳೆ ಮತ್ತು ಅಲೆಗಳ ಹೊಡೆತದಿಂದ ದೋಣಿಯು ಕಂಚುಗೋಡು ಕಿನಾರೆ ಸಮೀಪ ಸಮುದ್ರದಲ್ಲಿ ಮಗುಚಿಬಿದ್ದಿದೆ. ದೋಣಿ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ಮೂವರು ಮೀನುಗಾರರನ್ನು ಸಮೀಪದಲ್ಲಿದ್ದ ದೋಣಿಗಳಲ್ಲಿದ್ದವರು ರಕ್ಷಿಸಿ, ದಡ ಸೇರಿಸಿದ್ದಾರೆ.
ದೋಣಿಯಲ್ಲಿದ್ದ ಇಂಜಿನ್, ಬಲೆ ಹಾಗೂ ಇನ್ನಿತರ ವಸ್ತುಗಳು ಮುಳುಗಿ 4.5ಲಕ್ಷ ರೂ. ನಷ್ಟವಾಗಿದೆ ಎಂದು ವಿನಯ ಖಾರ್ವಿ ಕರಾವಳಿ ಕಾವಲು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಗೋಕರ್ಣನಾಥೇಶ್ವರ ಕಾಲೇಜಿನ NSS ಘಟಕದಿಂದ ರಕ್ತದಾನ

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು ಇದರ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜುಲೈ 2 ರಂದು ಆಯೋಜಿಸಲಾಗಿತ್ತು.ಈ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...