ಮಂಗಳೂರು: ನೇತ್ರಾವತಿ ನದಿಯಲ್ಲಿ ಬಿದ್ದು ಪ್ರಾಣಾಪಾಯದಲ್ಲಿರುವರನ್ನು ರಕ್ಷಿಸಲು ನಾಡದೋಣಿ ಬೇಕು ಎನ್ನುವ ಪಾಣೆಮಂಗಳೂರು ಪರಿಸರದ ಈಜುಗಾರರ ಹಲವು ವರ್ಷದ ಬೇಡಿಕೆ ಕೊನೆಗೂ ಈಡೇರಿದೆ.
ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ, ಏರ್ಯ ಬಾಲಕೃಷ್ಣ ಹೆಗ್ಡೆ ಮತ್ತಿತರರ ಸಹಕಾರದೊಂದಿಗೆ ಅಂದಾಜು 70 ಸಾವಿರ ರೂಪಾಯಿ ಮೌಲ್ಯದ ಹೊಸ ನಾಡ ದೋಣಿಯನ್ನು ಈ ಈಜುಗಾರರಿಗೆ ನೀಡಿದೆ.
ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಸಭಾ ಭವನದಲ್ಲಿ ಸೇವಾಂಜಲಿ ರಕ್ಷಕ ನಾಮಾಂಕಿತ ದೋಣಿಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ತಾಲೂಕಿನ ವಿವಿದೆಡೆ ನೇತ್ರಾವತಿ ನದಿಗೆ ಹಾರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಇತ್ತೀಚಿನ ಕೆಲ ವರ್ಷಗಳಿಂದ ಹೆಚ್ಚಾಗಿದೆ.
ನೇತ್ರಾವತಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ.
ಅಲ್ಲದೆ ಆಕಸ್ಮಿಕವಾಗಿ ನದಿಗೆ ಬಿದ್ದು ಕೊಚ್ಚಿ ಹೋಗುವಂತಹ ಪ್ರಕರಣಗಳು ಅಲ್ಲಲ್ಲಿ ನಡೆಯುತ್ತಿರುತ್ತದೆ.
ಇಂತಹ ಸಂದರ್ಭದಲ್ಲಿ ಸ್ಥಳೀಯ ಈಜುಗಾರರು ನದಿಗೆ ಹಾರಿ ನೀರಲ್ಲಿ ಕೊಚ್ಚಿ ಹೋಗುತ್ತಿರುವರನ್ನು ಸ್ವಯಂ ಪ್ರೇರಿತರಾಗಿ ರಕ್ಷಿಸುವ ಪ್ರಯತ್ನ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ.
ಆದರೆ ಇವರಿಗೆ ದೋಣಿಯ ವ್ಯವಸ್ಥೆಯಾಗಲಿ, ಲೈಪ್ ಜಾಕೆಟ್ ನಂತಹ ಮೂಲ ಭೂತ ಸೌಕರ್ಯಗಳಿರಲಿಲ್ಲ.
ಮಾಧ್ಯಮಗಳ ಮುಂದೆ ತಮ್ಮ ಕಾರ್ಯಕ್ಕೆ ನಾಡದೋಣಿ ಹಾಗೂ ಲೈಫ್ ಜಾಕೆಟ್ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು.
ಈ ಬೇಡಿಕೆಗೆ ಸ್ಪಂದಿಸಿದ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ದೋಣಿ ಹಾಗೂ ಲೈಫ್ ಜಾಕೆಟನ್ನು ಕೊಡುಗೆಯಾಗಿ ನೀಡಿ ಸಾಹಸಿ ಯುವಕರಲ್ಲಿ ಸ್ಪೂರ್ತಿ ತುಂಬುವ ಕಾರ್ಯ ಮಾಡಿದೆ.
ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ದೋಣಿ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಅವರು, ಜಾತಿ, ಧರ್ಮ ನೋಡದೆ ಈ ಈಜುಗಾರರು ತಮ್ಮ ನಿಸ್ವಾರ್ಥ ಸೇವೆಯನ್ನು ನೀಡುತ್ತಾ ಬಂದಿದ್ದಾರೆ.
ಪ್ರತಿ ವರ್ಷ ಮಳೆಗಾಲ ಬಂದಾಗಲೂ ಇವರು ತಾಲೂಕಾಡಳಿತದೊಂದಿಗೆ ಸಹಕರಿಸುತ್ತಿದ್ದಾರೆ. ಇವರ ಸೇವೆ ಮುಂದಿನ ದಿನಗಳಲ್ಲಿಯೂ ತಾಲೂಕಾಡಳಿತ ಹಾಗೂ ಎಲ್ಲರಿಗೂ ಅಗತ್ಯವಿದೆ ಎಂದು ಶುಭ ಹಾರೈಸಿದರು.
ಬಂಟ್ವಾಳ ಗ್ರಾಮಾಂತರ ಠಾಣಾ ಎಸೈ ಪ್ರಸನ್ನ ಅವರು ಲೈಫ್ ಜಾಕೆಟ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ದೋಣಿಯನ್ನು ನೀಡಲಾಗಿದೆಯೋ ಆ ಉದ್ದೇಶಕ್ಕೆ ಬಳಸಿಕೊಳ್ಳಬೇಕು.
ಸೇವಾಂಜಲಿ ಪ್ರತಿಷ್ಠಾನ ಮಾನವೀಯ ಕಾರ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಇದು ಇನ್ನೂ ಮುಂದುವರಿಯಲಿ ಎಂದರು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಅಧ್ಯಕ್ಷ ವಜ್ರನಾಭ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ರೋಟರಿ ಜಿಲ್ಲಾ ಗವರ್ನರ್ ನಾಮಿನಿ ಪ್ರಕಾಶ್ ಕಾರಂತ್,
ಅಮ್ಮುಂಜೆಗುತ್ತು ದೇವದಾಸ್ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ಪಿ.ಎ. ರಹೀಂ. ಪುದು ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಾನಂದ ಆಳ್ವ ಕಂಪ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು/ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸುಮಾರು 12ಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಫೋಟಗೊಂಡಿರುವಂತಹ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸುತ್ತಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ.
ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೂ, ಈ ಮಹಾ ಕುಂಭಮೇಳಕ್ಕೆ ಸಾಧು ಸಂತರು ಸೇರಿದಂತೆ ಕೋಟ್ಯಾಂತರ ಭಕ್ತರು ಆಗಮಿಸಿದ್ದರು.
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪುನೀತರಾಗುತ್ತಿದ್ದರು. ಆದ್ರೆ ಇದೇ ಹೊತ್ತಲ್ಲಿ ಪ್ರಯಾಗ್ರಾಜ್ನ ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಕರ ಸಂಕ್ರಾಂತಿಯದ್ದೇ ಕೋಟ್ಯಂತರ ಭಕ್ತರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು.
ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮಾಹಿತಿ ಪಡೆದಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಮಂಗಳೂರು/ಗಾಜಿಯಾಬಾದ್ : ಮನೆಯೊಂದು ಬೆಂ*ಕಿಗಾಹುತಿಯಾಗಿ, ಒಳಗಿದ್ದ ನಾಲ್ವರು ಸಜೀವದ*ಹನವಾದ ಘಟನೆ ಇಂದು(ಜ.19) ಗಾಜಿಯಾಬಾದ್‌ನ ಲೋನಿ ಪ್ರದೇಶದ ಕಾಂಚನ್ ಪಾರ್ಕ್ ಬಳಿ ನಡೆದಿದೆ. ಕಟ್ಟಡದ ಮೂರನೇ ಮಹಡಿಯ ಮನೆಯಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ಮನೆಯಲ್ಲಿ 8 ಮಂದಿ ವಾಸವಾಗಿದ್ದರು. ಬೆಂ*ಕಿ ಕಾಣಿಸಿಕೊಂಡಾಗ ಮನೆಯವರೆಲ್ಲಾ ನಿದ್ರೆಯಲ್ಲಿದ್ದರು ಎನ್ನಲಾಗಿದೆ.
ಗುಲ್ಬಹಾರ್ (32), ಮಕ್ಕಳಾದ ಶಾನ್ (8) ಮತ್ತು ಜಾನ್ (9), ಅವರ ಸಂಬಂಧಿಕರ ಮಗ ಜೀಶನ್ (5) ಮೃತಪಟ್ಟವರು. ಮೃತ ಗುಲ್ಬಹಾರ್‌ನ ಪತಿ ಶಹನವಾಜ್ ಯಾವುದೇ ಗಾ*ಯಗಳಿಲ್ಲದೆ ಪಾರಾಗಿದ್ದಾರೆ. ಇನ್ನು ಉಳಿದವರು ಗಾ*ಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು/ಬೆಂಗಳೂರು : ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಮಳೆ ಅಚ್ಚರಿ ಮೂಡಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು (KSNDMC) ಹವಾಮಾನ ಇಲಾಖೆ ಮುನ್ಸೂಚನೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ. ‘ರಾಜ್ಯದ ದಕ್ಷಿಣ ಒಳಭಾಗ, ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರದ ಜಿಲ್ಲೆಗಳ ಶುಷ್ಕ ಗಾಳಿ ಇರಲಿದೆ. ರಾಜ್ಯದಾದ್ಯಂತ ಸಾಧಾರಣದಿಂದ ಮಂಜು ಮತ್ತು ಅಲ್ಲಲ್ಲಿ ತುಂತುರು ಮಳೆ ಇರುತ್ತದೆ’ ಎಂದು ಹೇಳಿದೆ.
ಎಲ್ಲೆಲ್ಲಿ ಮಳೆ ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ ಎಂದು ತಿಳಿಸಿದೆ.