Monday, January 24, 2022

ಕರಾವಳಿಗರಿಗೆ ಇನ್ನು ಮುಂದೆ ರೇಷನ್‌ನಲ್ಲಿ ಕಜೆ ಅಕ್ಕಿ ಭಾಗ್ಯ: ಕುಚ್ಚಲಕ್ಕಿ ಪ್ರಿಯರು ಫುಲ್ ಖುಷ್

ಉಡುಪಿ: ಕರಾವಳಿಯಲ್ಲಿ ಕೊನೆಗೂ ಹತ್ತು ವರ್ಷದ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ನ್ಯಾಯಬೆಲೆ ಅಂಗಡಿಯಲ್ಲಿ ಇನ್ನು ಮುಂದೆ ಕುಚ್ಚಲಕ್ಕಿ ನೀಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದೆ.

“ದಕ್ಷಿಣಕನ್ನಡ ಜಿಲ್ಲೆಗೆ ಪಡಿತರ ಮೂಲಕ ವಿತರಣೆ ಮಾಡಲು, 1 ಲಕ್ಷ ಕ್ವಿಂಟಾಲ್ ಕುಚ್ಚಲಕ್ಕಿ ಅಕ್ಕಿ ಬಿಡುಗಡೆಯಾಗಲಿದೆ. ಎಂ4, ಜಯಾ ತಳಿಯ ಅಕ್ಕಿಯನ್ನು ಖರೀದಿ ಮಾಡಿ ವಿನಿಯೋಗಿಸುತ್ತೇವೆ” ಎಂದು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರಿನಿವಾಸ್ ಪೂಜಾರಿ ಭರವಸೆ ನೀಡಿದ್ದಾರೆ.

ಸದ್ಯ ಸರ್ಕಾರದ ಈ ತೀರ್ಮಾನದಿಂದ ಕರಾವಳಿಯ ಜನ ಸಂಸತಗೊಂಡಿದ್ದು, ಇದರಿಂದ ಕರವಾಳಿಯಲ್ಲಿ ಭತ್ತದ ಕೃಷಿಗೆ ಉತ್ತೇಜನ ಸಿಕ್ಕಂತಾಗಿದೆ.

ಕರಾವಳಿಗರು ನ್ಯಾಯಬೆಲೆ ಅಂಗಡಿಯಲ್ಲಿ ಬೆಳ್ತಿಗೆ ಅಕ್ಕಿಯನ್ನು ಪಡೆಯಬೇಕಾದ ಅನಿವಾರ್ಯತೆ ಇತ್ತು. ಕೆಲವರು ತಿಂಡಿಗಾಗಿ ಬೆಳ್ತಿಗೆ ಅಕ್ಕಿಯನ್ನು ಬಳಕೆ ಮಾಡುತ್ತಿದ್ದರು.

ಇನ್ನೂ ಕೆಲವು ಕಡೆ ನ್ಯಾಯ ಬೆಲೆಯಲ್ಲಿ ಸಿಗುವ ಅಕ್ಕಿಯನ್ನು ತೆಗೆದುಕೊಂಡು, ಮಾರಾಟ ಕೂಡ ಮಾಡುತ್ತಿದ್ದರು.

ಹೀಗಾಗಿ ಕರಾವಳಿಗರು ನ್ಯಾಯಬೆಲೆ ಅಂಗಡಿಯಲ್ಲಿ ಕುಚ್ಚಲಕ್ಕಿ ನೀಡಬೇಕೆಂದು 10 ವರ್ಷಗಳಿಂದ ಸರ್ಕಾರಕ್ಕೆ ಬೇಡಿಕೆ ಸಲ್ಲಿಕೆ ಮಾಡುತ್ತಿದ್ದರು.

ಇದರ ಫಲವಾಗಿ ಸದ್ಯ ಕೇಂದ್ರ ಸರ್ಕಾರ ನ್ಯಾಯಬೆಲೆ ಅಂಗಡಿಯಲ್ಲಿ ಕುಚ್ಚಲಕ್ಕಿ ನೀಡುವ ತೀರ್ಮಾನಕ್ಕೆ ಒಪ್ಪಿಗೆ ನೀಡಿದೆ.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...