Home ಪ್ರಮುಖ ಸುದ್ದಿ ಬಾಲಿವುಡ್ ನ ಸ್ಫುರದ್ರೂಪಿ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು…!!

ಬಾಲಿವುಡ್ ನ ಸ್ಫುರದ್ರೂಪಿ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು…!!

ಬಾಲಿವುಡ್ ನ ಸ್ಫುರದ್ರೂಪಿ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು…!!

ಮುಂಬೈ: ಧೋನಿ ಸಿನಿಮಾ ಖ್ಯಾತಿಯ ಸ್ಫುರದ್ರೂಪಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ.

ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.

ಖಾಸಗಿ ವಾಹಿನಿಯ ‘ಪವಿತ್ರ ರಿಶ್ತಾ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್ ಸಿಂಗ್, ಬಳಿಕ ‘ಕೈ ಪೋ ಚೇ’ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು.

ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’ ಸಿನಿಮಾದ ನಟನೆ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು.

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ‘ಧೋನಿ’ ಸಿನಿಮಾ ಸುಶಾಂತ್ ಸಿಂಗ್ ಗೆ ದೊಡ್ಡ ಮಟ್ಟದ ಬ್ರೇಕ್ ನೀಡಿತ್ತು.

ಬಳಿಕ ರಾಬ್ತಾ, ಕೇದಾರ್ ನಾಥ್, ಮುಂತಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಇವರು ಕೊನೆಯದಾಗಿ ಚಿಚ್ಚೋರೆ ಸಿನಿಮಾದಲ್ಲಿ ಮಿಂಚಿದ್ದರು.

ಅದು ಹೇಳಿಕೊಳ್ಳುವಷ್ಟೇನೋ ಸೌಂಡ್ ಮಾಡಲಿಲ್ಲ. ಇನ್ನೇನು ‘ದಿಲ್ ಬೇಚಾರ’ ಸಿನಿಮಾ ಮೇ ತಿಂಗಳಲ್ಲಿ ಬಿಡುಗಡೆ ಆಗಬೇಕಿತ್ತು.

ಇತ್ತೀಚೆಗಷ್ಟೇ ಇವರ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ನಟನ ಸರದಿ.

RECENT NEWS

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..! ತಿರುವಂತನಪುರ : ಸಾಲುಸಾಲು ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜಲಂಧರ್​ನ ಮಾಜಿ ಬಿಷಪ್ ಫ್ರಾಂಕೊ ಮುಲಾಕ್ಕಲ್ ಜಾಮೀನು ಅರ್ಜಿಯನ್ನು...

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
error: Content is protected !!