Friday, August 12, 2022

ಖ್ಯಾತ ಬಾಲಿವುಡ್ ಗಾಯಕ ಕೆ.ಕೆ ಇನ್ನಿಲ್ಲ….

ಕೋಲ್ಕತ್ತಾ: ಖ್ಯಾತ ಬಾಲಿವುಡ್ ಗಾಯಕ ಕೆ.ಕೆ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗಲೇ ಅಸ್ವಸ್ಥಗೊಂಡು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕೃಷ್ಣಕುಮಾರ್ ಕುನ್ನಾಥ್ ಅವರಿಗೆ 53 ವರ್ಷ ಪ್ರಾಯವಾಗಿತ್ತು. ಅಭಿಮಾನಿಗಳಿಗೆ ಕೆ.ಕೆ ಎಂದೇ ಪರಿಚಿತರಾಗಿದ್ದ ಇವರ ಹಾಡುಗಳು ಜನರ ಅಭಿಮಾನಕ್ಕೆ ಸಾಕ್ಷಿಯಾಗಿತ್ತು.

ಹೃದಯಾಘಾತಕ್ಕೆ ಒಳಗಾದ ಕೆಲವೇ ನಿಮಿಷಗಳಲ್ಲಿ ಇವರನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿ ಜೀವನದಲ್ಲಿ ಕೆಕೆ ಭಾರತೀಯ ಸಂಗೀತ ಪ್ರೇಮಿಗಳಿಗೆ ಯಾರೂನ್ ದೋಸ್ತಿಯಂತಹ ಅನೇಕ ಹಿಟ್‌ಗಳನ್ನು ನೀಡಿದರು.

ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ ಮತ್ತು ಬೆಂಗಾಲಿ ಭಾಷೆಗಳಲ್ಲಿ ಹಾಡನ್ನು ಹಾಡುತ್ತಿದ್ದ ಅವರು ತನ್ನ ಸುಶ್ರಾವ್ಯ ಧ್ವನಿಯಲ್ಲೇ ಮನೆಮಾತಾಗಿದ್ದರು.

2000ದಲ್ಲಿ ಹಿನ್ನೆಲೆ ಗಾಯಕನಾಗಿ ವೃತ್ತಿ ಜೀವನ ಆರಂಭಿಸಿದ ಇವರು ಸಂಚಾರಿ, ಲವ್, ಮನಸಾರೆ, ಪರಿಚಯ, ಮಳೆ ಬರಲಿ ಮಂಜು ಇರಲಿ ಮುಂತಾದ ಚಿತ್ರಗಳಿಗೆ ಧ್ವನಿ ನೀಡಿದ್ದಾರೆ.

ಇವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಕೆಕೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದುಬೈನಿಂದ ಬಂದಿಳಿದ ಓರ್ವನ ನಿಕ್ಕರ್‌ನಲ್ಲಿತ್ತು 43 ಲಕ್ಷದ ಚಿನ್ನ: ಮತ್ತೋರ್ವನಲ್ಲಿ 5 ಲಕ್ಷ ರೂ ಮೌಲ್ಯದ ಫಾರಿನ್‌ ಕರೆನ್ಸಿ..!

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ...

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಆದಾಯಕ್ಕಿಂತ ಅಧಿಕ ಆಸ್ತಿ: ಮಂಗಳೂರು ಮೂಲದ ಸರ್ಕಾರಿ ಅಧಿಕಾರಿಗೆ 3 ವರ್ಷ ಜೈಲು, 50 ಲಕ್ಷ ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6...