Thursday, April 22, 2021

ನಟ ಅಮೀರ್ ಖಾನ್‌ ಗೆ ಕೋರೊನಾ ಪಾಸಿಟಿವ್..!

ಮುಂಬೈ : ಖ್ಯಾತ ಬಾಲಿವುಡ್​ ನಟ ಆಮೀರ್​ ಖಾನ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕಳೆದ ವಾರವಷ್ಟೇ ನಟ ಆಮೀರ್​ ಖಾನ್​ ಸೋಶಿಯಲ್ ಮೀಡಿಯಾಗೆ ಗುಡ್​ ಬೈ ಹೇಳಿದ್ದರಿಂದ ಅವರ ವಕ್ತಾರ ಆಮೀರ್​ ಖಾನ್​ಸೋಂಕಿಗೆ ಒಳಗಾಗಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.

ಆಮೀರ್​ ಖಾನ್​ ಸದ್ಯ ಹೋಂ ಕ್ವಾರಂಟೈನ್​ನಲ್ಲಿದ್ದು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಆಮೀರ್ ಖಾನ್​ ವಕ್ತಾರ ಮಾಹಿತಿ ನೀಡಿದ್ದಾರೆ.

ಆಮೀರ್​ ಖಾನ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರು ಈಗ ಹೋಂ ಕ್ವಾರಂಟೈನ್​ನಲ್ಲಿ ಇದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನ ಪಾಲನೆ ಮಾಡುತ್ತಿರುವ ಆಮೀರ್​ ಕ್ಷೇಮವಾಗಿದ್ದಾರೆ.

ಆಮೀರ್​ ಖಾನ್​ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುವುದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ. ನಿಮ್ಮ ಕಾಳಜಿ ಹಾಗೂ ಹಾರೈಕೆಗಳಿಗೆ ಧನ್ಯವಾದ ಎಂದು ಆಮೀರ್​ ಖಾನ್​ರ ವಕ್ತಾರ ಹೇಳಿದ್ದಾರೆ.

56 ವರ್ಷದ ನಟ ತಮ್ಮ ಹುಟ್ಟುಹಬ್ಬದ ಸಂಭ್ರಮದ ನಡುವೆಯೇ ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾದಿಂದ ದೂರ ಇರೋದಾಗಿ ಹೇಳುವ ಮೂಲಕ ಶಾಕ್​ ನೀಡಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...