Monday, October 18, 2021

ಕಾಬೂಲ್‌ನಲ್ಲಿ ಬಾಂಬ್‌ ದಾಳಿ: 73ಕ್ಕೂ ಅಧಿಕ ಸಾವು, ಹಲವರಿಗೆ ಗಂಭೀರ ಗಾಯ

ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಗುರುವಾರ ಆತ್ಮಹತ್ಯಾ ದಾಳಿಕೋರರು ಮತ್ತು ಇಬ್ಬರು ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 73 ಆಗಿದೆ. 60 ಮಂದಿ ಅಪ್ಘನ್ನರು ಮತ್ತು 13 ಮಂದಿ ಅಮೆರಿಕನ್ ಸೈನಿಕರು ಮೃತಪಟ್ಟಿದ್ದಾರೆ ಎಂದು ಅಫ್ಘಾನ್ ಮತ್ತು ಅಮೆರಿಕ ಅಧಿಕಾರಿಗಳು ದೃಢಪಡಿಸಿದ್ದಾರೆ.


ಈ ದಾಳಿಯ ಹೊಣೆಯನ್ನು ISIS ಸಂಘಟನೆ ಹೊತ್ತಿದೆ. ಮೃತಪಟ್ಟವರಲ್ಲಿ 12 ಮಂದಿ ಸಾಗರ ಸೈನಿಕರು ಮತ್ತು ಒಬ್ಬ ನೌಕಾಪಡೆ ಯೋಧ ಸೇರಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

12 ಮಂದಿ ಸೇವಾ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. 140ಕ್ಕೂ ಹೆಚ್ಚು ಮಂದಿ ಅಫ್ಘನ್ನರು ದಾಳಿಯಲ್ಲಿ ಗಾಯಗೊಂಡಿದ್ದಾಗಿ ಅಫ್ಘಾನ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...