Tuesday, October 19, 2021

ಕುಂದ್ರಾ ಲ್ಯಾಪ್‌ಟಾಪ್‌ನಲ್ಲಿತ್ತು 68 ಅಶ್ಲೀಲ ವೀಡಿಯೊಗಳು: ವರದಿ ಕೊಟ್ಟ ತನಿಖಾಧಿಕಾರಿ

ಮುಂಬೈ: ಅಶ್ಲೀಲ ಚಿತ್ರ ನಿರ್ಮಿಸಿ ಅದನ್ನು ಆ್ಯಪ್ ಮೂಲಕ ಹಂಚಿಕೊಂಡ ಆರೋಪದಲ್ಲಿ ಮುಂಬೈ ಪೊಲೀಸರಿಂದ ಬಂಧಿತರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಜೈಲೇ ಗತಿಯಾಗಿದೆ.


ತನ್ನ ಬಂಧನ ವಿರುದ್ಧ ರಾಜ್ ಕುಂದ್ರಾ ಸಲ್ಲಿಸಿರುವ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿರುವ ಕಾರಣ ಕುಂದ್ರಾ ಜೈಲುವಾಸ ಮುಂದುವರಿದಿದೆ.
ಬಾಂಬೆ ಹೈಕೋರ್ಟ್ ಆಗಸ್ಟ್ 2ರಂದು ಕುಂದ್ರಾ ಹಾಗೂ ಆತನ ಸಹವರ್ತಿ ರಯಾನ್ ಥೋರ್ಪೆ ಬಂಧನ ವಿರುದ್ಧ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಕಾಯ್ದಿರಿಸಿತ್ತು. ಕುಂದ್ರಾ ಲ್ಯಾಪ್‌ಟಾಪ್‌ನಲ್ಲಿ 68 ಅಶ್ಲೀಲ ವೀಡಿಯೊಗಳು ಕಂಡುಬಂದಿವೆ ಎಂದು ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತನಿಖಾಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದರು.
ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳ ಸೃಷ್ಟಿಯ ಆರೋಪದ ಮೇಲೆ ಜುಲೈ 19 ರಂದು ಇತರ 11 ಜನರೊಂದಿಗೆ ಬಂಧಿಸಲಾಗಿತ್ತು.
ಜುಲೈ 27 ರಂದು ಮುಂಬೈನ ನ್ಯಾಯಾಲಯವು ಉದ್ಯಮಿ ರಾಜ್ ಕುಂದ್ರಾ ಹಾಗೂ ಆತನ ಸಹವರ್ತಿ ರಯಾನ್ ಥೋರ್ಪೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...