Home ಪ್ರಮುಖ ಸುದ್ದಿ ಬಾಂಬರ್ ಆದಿತ್ಯ ಪ್ರಕರಣ-ರಾಜ್ಯ ಗೃಹ ಸಚಿವರ ಬಹಿರಂಗ ಕ್ಷಮೆಗೆ ಎಸ್‌ಡಿಪಿಐ ಆಗ್ರಹ

ಬಾಂಬರ್ ಆದಿತ್ಯ ಪ್ರಕರಣ-ರಾಜ್ಯ ಗೃಹ ಸಚಿವರ ಬಹಿರಂಗ ಕ್ಷಮೆಗೆ ಎಸ್‌ಡಿಪಿಐ ಆಗ್ರಹ

ಬಾಂಬರ್ ಆದಿತ್ಯ ಪ್ರಕರಣ-ರಾಜ್ಯ ಗೃಹ ಸಚಿವರ ಬಹಿರಂಗ ಕ್ಷಮೆಗೆ ಎಸ್‌ಡಿಪಿಐ ಆಗ್ರಹ

ಮಂಗಳೂರು ವಿಮಾನ ನಿಲ್ದಾಣದ ಸಜೀವ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿತ್ತು.

ಮಂಗಳೂರಿನ ಹಂಪನಕಟ್ಟಾ, ಬೆಳ್ತಂಗಡಿ, ಸುರತ್ಕಲ್ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ಮುಖಂಡರುಗಳು ಪ್ರಕರಣದ ಹಿಂದೆ ಬೇರೆಯವರ ಕೈವಾಡ ಇದೆ.

ಈಗಾಗಲೇ ಬಂಧನಕ್ಕೊಳಗಾಗಿರುವ ಆದಿತ್ಯರಾವ್ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲಾಗುತ್ತಿದೆ. ಈ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಗೃಹ ಸಚಿವರು ಇದೇ ಹೇಳಿಕೆ ನೀಡುತ್ತಿದ್ದಾರೆ.

ಪ್ರಕರಣ ತನಿಖೆಯಲ್ಲಿರುವಾಗ ಈ ಹೇಳಿಕೆ ನೀಡಿ ಗೃಹ ಸಚಿವರು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು ಗೃಹ ಸಚಿವರಾದ ಬಸವರಾಜ ಬೊಮ್ಮಯಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿ 20 ರಂದು ಸಜೀವ ಬಾಂಬ್ ಪತ್ತೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು ಈಗಾಗಲೇ ಆರೋಪಿ ಆದಿತ್ಯರಾವ್ ಎಂಬ ಭಯೋತ್ಪಾದಕನನ್ನು ಬಂಧಿಸಲಾಗಿದೆ.

ಆದರೆ ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸದೇ ಆರೋಪಿ ಮಾನಸಿಕ ಅಸ್ವಸ್ಥ ಎಂಬ ಲೇಬಲ್ ಹಾಕಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದೆ ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಅದು ಆಗ್ರಹಿಸಿದೆ.

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...