DAKSHINA KANNADA
(Bone Marrow Transplant) ಖಾಯಿಲೆಯಿಂದ ಬಳಲುತ್ತಿದ್ದಾನೆ 7ರ ಪೋರ; ಆರ್ಥಿಕ ಬೆಂಬಲದ ನಿರೀಕ್ಷೆಯಲ್ಲಿ ತನಿಶ್ ಕುಟುಂಬ..!
Published
4 years agoon
By
Admin(Bone Marrow Transplant) ಖಾಯಿಲೆಯಿಂದ ಬಳಲುತ್ತಿದ್ದಾನೆ 7ರ ಪೋರ; ಆರ್ಥಿಕ ಬೆಂಬಲದ ನಿರೀಕ್ಷೆಯಲ್ಲಿ ತನಿಶ್ ಕುಟುಂಬ..!
(Bone Marrow Transplant) suffering from disease 7; Thanish family in search of financial support ..!
ಮಂಗಳೂರು: ಈತ 7ರ ಪೋರ ತನಿಶ್ ಗಟ್ಟಿ! ತಂದೆ ನವೀನ್ ಗಟ್ಟಿ ಕಾವು ಬಜಾಲ್ ವಾಚ್ ಮ್ಯಾನ್, ಮನೆ ಕಾಯಕದಲ್ಲಿದ್ದ ತಾಯಿ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಸಂತೋಷ,ಪ್ರೀತಿಗೆ ಕೊರತೆಯಿರಲಿಲ್ಲ.
ಚಿಕ್ಕ, ಚೊಕ್ಕ ಸಂಸಾರಕ್ಕೆ ಪುಟಾಣಿ ತನಿಶ್ ಉತ್ಸಾಹದ ಚಿಲುಮೆಯಾಗಿದ್ದ. ಆದರೆ ಬೆಳೆದು ದೊಡ್ಡವನಾಗುತ್ತಿದ್ದಂತೆ ಅಂದ್ರೆ 7ರ ಹರೆಯಕ್ಕೆ ಬರುವಾಗ ಪುಟಾಣಿ ವಿಪರೀತ ಜ್ವರದಿಂದ ಬಳಲಾರಂಬಿಸಿದ.
ಈತನನ್ನು ದೇರಳಕಟ್ಟೆ, ನಿಟ್ಟೆ, ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತಾದ್ರೂ ಈತನ ಜ್ವರ ಕ್ಷೀಣಿಸಲಿಲ್ಲ.
ಇದರ ನಡುವೆ ವೈದ್ಯರು ಹೇಳಿದ ರೋಗದ ಹೆಸರು ಕೇಳಿ ಪುಟ್ಟ ಸಂಸಾರಕ್ಕೆ ಆಘಾತದ ಬರಸಿಡಿಲು ಬಡಿದಂತಾಗಿದೆ.ಇದೀಗ ಮಗು H.L.H (Hemophagocytic Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದಾನೆ.K.M.C ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವುದಾಗಿ ಹೇಳಿದ್ದಾರೆ.ಅವರ ನಿರ್ದೇಶನದಂತೆ ಮಗುವನ್ನು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಜುಂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿಯ ಉನ್ನತ ವೈದ್ಯರು ಮೂಳೆ ಅಸ್ಥಿ ಮಜ್ಜೆ ಕಸಿ ( Bone Marrow Transplant) ಮಾಡಲು ಸೂಚಿಸಿದ್ದಾರೆ.
ಈಗಾಗಲೇ ತನಿಶ್ ಚಿಕಿತ್ಸೆಗಾಗಿ ದಾನಿಗಳ ಸಹಾಯದಿಂದ ಲಕ್ಷಾಂತರ ರೂಪಾಯಿ ವ್ಯಯಿಸಿರುವ ಈ ಕುಟುಂಬ ಇದೀಗ ವೈದ್ಯರು ಹೇಳಿರುವ ಈ ಖಾಯಿಲೆಯಿಂದ ಕಂಗಾಲಾಗಿದ್ದಾರೆ.
ವೈದ್ಯರು ಈ ಚಿಕಿತ್ಸೆಗೆ ಅಂದಾಜು ವೆಚ್ಚ 45 ಲಕ್ಷ ರೂಪಾಯಿ ತಗುಲಲಿದೆ ಎಂದು ಹೇಳಿದ್ದು, ಅದನ್ನು ಭರಿಸಲು ಈ ಬಡ ಕುಟುಂಬ ಅಶಕ್ತವಾಗಿದೆ.
ಈ ವರೆಗೆ ಖರ್ಚು ವೆಚ್ಚಕ್ಕಾಗಿ ದಾನ ಮಾಡಿದ ದಾನಿಗಳ ಸಹಾಯಹಸ್ತ ಸ್ಮರಿಸುತ್ತಾ ಮತ್ತಷ್ಟು ದಾನಿಗಳ ನೆರವಿಗಾಗಿ ಕುಟುಂಬ ನೆರವಿನ ನಿರೀಕ್ಷೆಯಲ್ಲಿದೆ.
ನವೀನ್ ಗಟ್ಟಿಯವರ ಮನವಿ ಪತ್ರ
HLH (Hemophagocyti Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ 7 ವರ್ಷದ ನಮ್ಮ ಮಗು ತನಿಶ್ ಗಟ್ಟಿಯ ಹೆಚ್ಚಿನ ಚಿಕಿತ್ಸೆಗೆ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ….🙏🙏🙏🙏
ವಾಚ್ ಮ್ಯಾನ್ ಕೆಲಸದಲ್ಲಿರುವ ತಂದೆ, ಮನೆಯಲ್ಲಿರುವ ತಾಯಿ, ಉತ್ಸಾಹದ ಚಿಲುಮೆಯಾಗಿದ್ದ ಮಗು ಪುಟ್ಟ ಕುಟುಂಬಕ್ಕೆ ಮಗುವಿನ ಈ ಖಾಯಿಲೆಯು ಬರಸಿಡಿಲಿನಂತೆ ಎರಗಿದೆ. ಎಲ್ಲರ ಕಣ್ಮಣಿಯಾಗಿದ್ದ ಮಗು, ಕಳೆದ ಕೆಲವು ತಿಂಗಳುಗಳಿಂದ ಕಾಡುವ ವಿಪರೀತ ಜ್ವರದಿಂದ ಕಂಗಾಲಾಗಿದ್ದಾನೆ. ಮಗುವನ್ನು ದೇರಳಕಟ್ಟೆ, ನಿಟ್ಟೆ ಆಸ್ಪತ್ರೆ, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು.ಪ್ರಸ್ತುತ ಅತ್ತಾವರ K.M.C ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈಗ ಮಗು H.L.H (Hemophagocytic Lymphohistocytosis) ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದಾನೆ.K.M.C ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವುದಾಗಿ ಹೇಳಿದ್ದಾರೆ. ಅವರ ನಿರ್ದೇಶನದಂತೆ ಮಗುವನ್ನು ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿರುವ ಮಜುಂದಾರ್ ಷಾ ಕ್ಯಾನ್ಸರ್ ಆಸ್ಪತ್ರೆಗೆ ಕೊಂಡುಹೋಗಿದ್ದು, ಅಲ್ಲಿಯ ಉನ್ನತ ವೈದ್ಯರು ಮೂಳೆ ಅಸ್ಥಿ ಮಜ್ಜೆ ಕಸಿ ( Bone Marrow Transplant) ಮಾಡಲು ಸೂಚಿಸುತ್ತಾರೆ. ಈ ಚಿಕಿತ್ಸೆಗೆ ಅಂದಾಜು ಸುಮಾರು 45 ಲಕ್ಷ ರೂಪಾಯಿ ಖರ್ಚು ಇದ್ದು ಅದನ್ನು ಬರಿಸಲು ನಮ್ಮ ಬಡ ಕುಟುಂಬವು ಅಶಕ್ತರಾಗಿದ್ದೇವೆ . ಇದುವರೆಗೂ ಚಿಕಿತ್ಸೆಗೆ ಸಹಾಯಹಸ್ತ ನೀಡಿದ ನೂರಾರು ಸಹೃದಯಿ ಬಂಧುಗಳಿಗೆ ಹೃದಯಪೂರ್ವಕ ವಂದಿಸುತ್ತಾ ಮಗುವಿನ ಮುಂದಿನ ಚಿಕಿತ್ಸೆಗೂ ಸಹೃದಯಿ ಬಾಂಧವರಲ್ಲಿ ನೆರವನ್ನು ಬೇಡುತ್ತಿದ್ದೇವೆ. ನಮ್ಮ ಪುಟ್ಟ ಮಗುವಿನ ಭವಿಷ್ಯ ನಿಮ್ಮ ಪುಟ್ಟ ಸಹಾಯದಲ್ಲಿ ನಿಂತಿದೆ.. ನಿಮ್ಮ ನೆರವಿನ ಸಹಾಯಹಸ್ತದೊಂದಿಗೆ, ಎಲ್ಲರ ಶುಭ ಹಾರೈಕೆಯು ನಮ್ಮ ಮಗುವಿನ ಮುಂದಿನ ಬದುಕಿಗೆ ಆಶಾಕಿರಣವಾಗಲಿ ಎಂದು ತಮ್ಮಲ್ಲಿ ಹೃದಯಪೂರ್ವಕ ಯಾಚಿಸುತ್ತೇವೆ….🙏🙏🙏
ಇತೀ ತಮ್ಮ ವಿಶ್ವಾಸಿ
ನವೀನ್ ಗಟ್ಟಿ
ಕಾವು ಬೈಲ್ ಬಜಾಲ್
Mob:- 7899500542
Name:- Naveen
Adress:- D.No 8-125/1
Kudthadka kankanady bajal.mangalore
Branch:- Bajal (Mangalore)
Account number:-38955686728
IFSC CODE:- SBINOOO9052
DAKSHINA KANNADA
ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ
Published
6 hours agoon
26/11/2024ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.
ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.
DAKSHINA KANNADA
ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ
Published
23 hours agoon
25/11/2024By
NEWS DESK4ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್ 22 ಮತ್ತು 23 ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.
ಪ್ರಶಸ್ತಿ ವಿವರ :
ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.
ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.
DAKSHINA KANNADA
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
Published
1 day agoon
25/11/2024By
NEWS DESK4ಮಂಗಳೂರು/ಮಸ್ಕತ್ : ಬಿರುವ ಜವನೆರ್ ಮಸ್ಕತ್ ಆಯೋಜಿಸಿದ ಕರ್ನಾಟಕ ಪ್ರೀಮಿಯಾರ್ ಲೀಗ್ ನ 2024 ನೇ ಸಾಲಿನ ಕ್ರೀಡಾಕೂಟ ಮಸ್ಕತ್ ನ ಅಲ್ ಹೈಲ್ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಓಮನ್ ಕ್ರಿಕೆಟ್ ನ ಟಿ20 ತಂಡದ ನಾಯಕ ವಿನಾಯಕ್ ಶುಕ್ಲ ನೆರವೇರಿಸಿದರು.
ಈ ಸಂದರ್ಭ ಉತ್ತಮ್ ಕೋಟ್ಯಾನ್, ಮುಸ್ತಫಾ, ರಮಾನಂದ್ ಬಂಗೇರ, ಚಂದ್ರಕಾಂತ್ ಕೋಟ್ಯಾನ್, ದಾಮೋದರ್ ಶೆಟ್ಟಿ, ಪದ್ಮಾಕರ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಪುದರ್ ದೀತಿಜಿ ನಾಟಕದ ಪೋಸ್ಟರ್ ಬಿಡುಗಡೆ :
ಇದೇ ಸಂದರ್ಭದಲ್ಲಿ ಜನವರಿ 10 ರಂದು ಮಸ್ಕತ್ ನ ಆಲ್ ಫಾಜಾಜ್ ಹೋಟೆಲ್ ನಲ್ಲಿ ನಡೆಯಲಿರುವ ಕಾಪಿಕಾಡ್ ಅವರ ಚಾ ಪರ್ಕ ತಂಡದ ” ಪುದರ್ ದೀತಿಜಿ ” ನಾಟಕದ ಪೋಸ್ಟರ್ ಬಿಡುಗಡೆ ಹಾಗೂ ಪ್ರಚಾರ ಅಭಿಯಾನಕ್ಕೆ ಡಾ. ದೇವದಾಸ್ ಕಾಪಿಕಾಡ್ ಹಾಗೂ ಅರ್ಜುನ್ ಕಾಪಿಕಾಡ್ ಚಾಲನೆ ನೀಡಿದರು.
LATEST NEWS
ಏಲಿಯನ್ಗಳು ನಿಜಕ್ಕೂ ಇದೆಯಾ? ಡಾ.ಸೋಮನಾಥ್ರಿಂದ ಅಚ್ಚರಿಯ ಮಾಹಿತಿ !!
ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಮುಂದಿನ ಸಿಎಂ ಇವರೇ ?
ಮಧ್ಯಪ್ರದೇಶದಲ್ಲಿ ಸ್ಫೋಟ – 3 ಮನೆಗಳು ಕುಸಿದು ಇಬ್ಬರು ಸಾ*ವು
BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್
14 ಬಾರಿಯ ಒಲಿಂಪಿಕ್ ಪದಕ ವಿಜೇತೆ ವಿದಾಯ !
Trending
- LATEST NEWS6 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS3 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!