Tuesday, January 31, 2023

ಕೆಲವು ತಿಂಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೂಳೆ ಪತ್ತೆ..!

ಹಾಸನ: ಕೆಲವು ತಿಂಗಳಿಂದ ನಾಪತ್ತೆಯಾಗಿದ್ದ ಮಹಿಳೆ ಮೂಳೆಗಳ ರೂಪದಲ್ಲಿ ಪತ್ತೆಯಾದ ಘಟನೆ ಹಾಸನದಲ್ಲಿ ನಡೆದಿದೆ.

ರತ್ನಮ್ಮ (55) ಎಂಬಾಕೆ ನಾಪತ್ತೆಯಾಗಿದ್ದ ಮಹಿಳೆ.


ಈಕೆ ಹಾಸನ ತಾಲೂಕಿನ ನಾರಾಯಣಪುರ ಗ್ರಾಮದಿಂದ ಜುಲೈ 20 ರಂದು ಕಾಣೆಯಾಗಿದ್ದರು. ಈ ಸಂಬಂಧ ರತ್ನಮ್ಮರ ಪುತ್ರಿ ಶಾಂತಿ ಗ್ರಾಮದ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


ಇತ್ತ ಮನೆಯವರು ಎಷ್ಟೇ ಹುಡುಕಾಟ ನಡೆಸಿದರೂ ರತ್ನಮ್ಮ ಸಿಕ್ಕಿರಲಿಲ್ಲ. ಆದರೆ ಸೋಮವಾರ ಸಂಜೆ ಜೋಳದ ಹೊಲದಲ್ಲಿ ರತ್ನಮ್ಮ ಉಟ್ಟಿದ್ದ ಸೀರೆ, ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದು ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪೊಲೀಸರಿಗೆ ದೂರು ಕೊಟ್ಟರೂ ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಡಿವೈಎಸ್‍ಪಿ ಉದಯ್‍ ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಲೆ ಬುರುಡೆ, ಮೂಳೆಗಳನ್ನು ಸಂಗ್ರಹಿಸಿ ಹಾಸನ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

15 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 32ರ ಮಹಿಳೆ..!

ಮುಂಬೈ: ಮಹಿಳೆಯೊಬ್ಬಳು 15 ವರ್ಷದ ಬಾಲಕನ ಮೇಲೇ ಲೈಂಗಿಕ ದೌರ್ಜನ್ಯ (Sexual Abuse) ಎಸಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯಲ್ಲಿ ನಡೆದಿದೆ.ಈ ಸಂಬಂಧ ಮಹಿಳೆಯ ವಿರುದ್ಧ ಪೋಸ್ಕೋ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.32...

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ...

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...