ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಬಂಟ್ವಾಳ : ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಇಲ್ಲಿನ ಉಕ್ಕುಡ ಅಲಂಗಾರು ನಿವಾಸಿಯಾಗಿರುವ 20 ವರ್ಷದ ರಂಜಿತ್ ಎಂದು ಗುರುತಿಸಲಾಗಿದೆ.
ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಢಿಕ್ಕಿಯ ಬಳಿಕ ಲಾರಿಯು ಸವಾರರನ್ನು ಕೆಲ ಮೀಟರುಗಳ ದೂರ ಎಳೆದೊಯ್ಯದಿದ್ದು, ಅಪಘಾತದ ತೀವ್ರತೆಗೆ ಸವಾರನ ತಲೆ ಛಿದ್ರವಾಗಿದೆ.
ಸಹಸವಾರ ಗಂಭೀರ ಗಾಯಗೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .