Connect with us

    LATEST NEWS

    ಆಪರೇಷನ್ ಎನ್ನುವ ಕೆಟ್ಟ ಶಬ್ಧ ಬಿಜೆಪಿಯವರಿಂದಲೇ ಪ್ರಾರಂಭ: ಬೋಸ್ ರಾಜು ವ್ಯಂಗ್ಯ

    Published

    on

    ಮಂಗಳೂರು:  ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕಾಗುತ್ತದೆ. ಇದು ಸದ್ಯ ಬಿಜೆಪಿಯಲ್ಲಿ ಕಾಣಿಸುತ್ತಿದೆ ಎಂದು ಸಣ್ಣ ನೀರಾವರಿ ಸಚಿವ ಬೋಸ್ ರಾಜು ತಿಳಿಸಿದ್ದಾರೆ.

    ಬಿಜಿಪಿಯ ಕೆಲವರು ಕಾಂಗ್ರೆಸಿಗೆ ಬರಲು ಇಚ್ಛೆ ವ್ಯಕ್ತ ಪಡಿಸುತ್ತಿರುವ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ  ಬೋಸ್ ರಾಜು, ಕಾಂಗ್ರೆಸ್ ಪಕ್ಷ ದೊಡ್ಡ ಸಮುದ್ರ ಇದ್ದ ಹಾಗೆ, ಈ ಪಕ್ಷಕ್ಕೆ 138 ವರ್ಷಗಳ ಇತಿಹಾಸವಿದೆ. ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರದಲ್ಲಿ ಆಡಳಿತ ನಡೆಸಿದ ಪಕ್ಷ. ಸದ್ಯದ ಬೆಳವಣಿಗೆಯಿಂದ ಬಿಜೆಪಿಯ ಕೆಲವರು ತಳಮಳಗೊಂಡಿದ್ದಾರೆ, ಪಕ್ಷ ಬಿಡುವ ಚಿಂತನೆ ಮಾಡಿದ್ದಾರೆ. ನಾವು ಕಾಂಗ್ರೆಸ್ಸಿನವರು ಆಪರೇಷನ್ ಎನ್ನುವ ಶಬ್ದವನ್ನು ಬಳಸುವುದಿಲ್ಲ. ಆಪರೇಷನ್ ಎನ್ನುವ ಕೆಟ್ಟ ಶಬ್ದ ಬಿಜೆಪಿಯವರಿಂದಲೇ ಪ್ರಾರಂಭವಾಗಿದೆ. ಪ್ರಜಾ ಸತಾತ್ಮಕವಾಗಿ ಆಡಳಿತಕ್ಕೆ ಬಂದ ಸರಕಾರಗಳನ್ನು ಕೆಡುಹುವ ಕೆಲಸವನ್ನು ಬಿಜೆಪಿಯವರು ಮಾಡಿದ್ದಾರೆ. ಬಿಜೆಪಿಯವರು ಮಾಡಿದ ಕರ್ಮದ ಫಲವನ್ನು ಅವರೇ ಅನುಭವಿಸ ಬೇಕಾಗುತ್ತದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು ಎಂದು ತಿಳಿಸಿದರು.

    LATEST NEWS

    ಚಹಲ್-ಧನಶ್ರೀ ದಾಂಪತ್ಯದಲ್ಲಿ ಬಿರುಕು; ಖಚಿತ ಪಡಿಸಿತು ಕ್ರಿಕೆಟರ್ ಮಾಡಿದ ಆ ಒಂದು ಕೆಲಸ !

    Published

    on

    ಮಂಗಳೂರು/ಮುಂಬೈ : ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಖ್ಯಾತ ಕೊರಿಯೋಗ್ರಾಫರ್ ಧನಶ್ರೀ ವರ್ಮಾ ದಾಂಪತ್ಯ ಜೀವನ ಮುರಿದುಬಿತ್ತಾ ಎಂಬ ಅನುಮಾನ ಶುರುವಾಗಿದೆ.

    ಕಳೆದ ಕೆಲವು ವರ್ಷಗಳಿಂದಲೂ ಚಹಲ್-ಧನಶ್ರೀ ದಾಂಪತ್ಯ ಜೀವನದಲ್ಲಿ ಬಿರುಕುಬಿಟ್ಟಿದೆ ಎನ್ನುವಂತಹ ಮಾತುಗಳು ಕೇಳಿ ಬಂದಿದ್ದವು.

    ಇದೀಗ ಅಚ್ಚರಿ ಎಂಬಂತೆ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಇಬ್ಬರು ಇನ್ ಸ್ಟಾಗ್ರಾಂನಲ್ಲಿ ಒಬ್ಬರಿಗೊಬ್ಬರು ಅನ್ ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್ ಸ್ಟಾಗ್ರಾಂನಲ್ಲಿ ಅಳಿಸಿ ಹಾಕಿದ್ದಾರೆ. ಆದರೆ, ಚಹಲ್ ಅವರನ್ನು ಅನ್ ಫಾಲೋ ಮಾಡಿರುವ ಧನಶ್ರೀ ಅವರೊಂದಿಗಿನ ಫೋಟೊಗಳನ್ನು ಈವರೆಗೆ ಅಳಿಸಿ ಹಾಕಿಲ್ಲ.

    ಇದನ್ನೂ ಓದಿ: 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ

    2023ರಲ್ಲಿ ಧನಶ್ರೀ ಅವರು ಇನ್ ಸ್ಟಾಗ್ರಾಂ ಯುಸರ್ ನೇಮ್ ನಿಂದ ‘ಚಹಲ್’ ಅನ್ನು ಕೈಬಿಟ್ಟ ನಂತರ ವಿಚ್ಛೇದನ ವದಂತಿಗಳು ಹರಿದಾಡಿದ್ದವು. ಆದರೆ, ಈ ವದಂತಿಯನ್ನು ಆಗ ಯಜುವೇಂದ್ರ ಚಹಲ್ ನಿರಾಕರಿಸಿದ್ದರು.

    ಲಾಕೌಡೌನ್ ಸಮಯದಲ್ಲಿ ಪರಸ್ಪರ ಪರಿಚಯವಾಗಿದ್ದ ಚಹಲ್ ಮತ್ತು ಧನಶ್ರೀ, 2020ರ ಡಿಸೆಂಬರ್ 11ರಂದು ವಿವಾಹವಾಗಿದ್ದರು.

     

    Continue Reading

    LATEST NEWS

    ಅಜ್ಮೀರ ದರ್ಗಾಕ್ಕೆ ‘ಚಾದರ್’ ಸಮರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು..!

    Published

    on

    ಮಂಗಳೂರು/ಜೈಪುರ : ಭಾರತದ ಶ್ರೀಮಂತ ಆಧ್ಯಾತ್ಮಿಕ ಪರಂಪರೆ ಮತ್ತು ಶಾಂತಿ ಮತ್ತು ಏಕತೆಯ ಸಂದೇಶ ಸಾರುವ ಅಜ್ಮೀರ್ ಷರೀಫ್ ದರ್ಗಾದಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ದರ್ಗಾಗೆ ಭೇಟಿ ನೀಡಿ ಚಾದರ್ ಸಮರ್ಪಿಸುವ ಮೂಲಕ ಖ್ವಾಜಾ ಮೊಯಿನುದ್ದೀನ್ ಚಸ್ತಿ ಅವರ 813 ನೇ ಉರೂಸ್ ನಲ್ಲಿ ಭಾಗವಹಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸತತ ಹನ್ನೊಂದು ವರ್ಷಗಳಿಂದ ಅಜ್ಮೀರ್ ಷರೀಫ್ ದರ್ಗಾದ ಉರೂಸ್‌ ಸಮಯದಲ್ಲಿ ದರ್ಗಾಕ್ಕೆ ಚಾದರ್ ಸಮರ್ಪಣೆ ಮಾಡಿದ್ದಾರೆ. ಈ ಬಾರಿ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿ ಮೋದಿ ಅವರ ಪರವಾಗಿ ದರ್ಗಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಚಿವ ರಿಜಿಜು, “ಅಜ್ಮೀರ್ ಉರೂಸ್ ಸಮಯದಲ್ಲಿ ಗರೀಬ್ ನವಾಜ್ ದರ್ಗಾಕ್ಕೆ ಭೇಟಿ ನೀಡುವುದು ದೇಶದ ಹಳೆಯ ಸಂಪ್ರದಾಯವಾಗಿದೆ. ಸೌಹಾರ್ದತೆ ಮತ್ತು ಭಾತೃತ್ವದ ಸಂದೇಶವನ್ನು ರವಾನಿಸಲು ಪ್ರಧಾನಿ ಮೋದಿ ಅವರ ಪರವಾಗಿ ಚಾದರ್ ಅರ್ಪಿಸುವ ಅವಕಾಶ ಸಿಕ್ಕಿದೆ. ಉರೂಸ್‌ ಸಂದರ್ಭದಲ್ಲಿ ದೇಶದಲ್ಲಿ ಶಾಂತಿಯುತ ವಾತಾವರಣಕ್ಕಾಗಿ ನಾವು ಆಶೀರ್ವಾದವನ್ನು ಬಯಸುತ್ತಿದ್ದೇನೆ” ಎಂದು ಹೇಳಿದ್ದಾರೆ.

    ಇದೇ ವೇಳೆ ದರ್ಗಾಕ್ಕೆ ಭೇಟಿ ನೀಡುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಅನುಕೂಲ ಆಗುವ ಎಲ್ಲಾ ಮೂಲಸೌಕರ್ಯಗಳನ್ನು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

    Continue Reading

    LATEST NEWS

    ಕಮರಿಗೆ ಬಿದ್ದ ಸೇನಾ ವಾಹನ; ಇಬ್ಬರೂ ಯೋಧರ ಸಾವು, ಮೂವರಿಗೆ ಗಂಭೀರ ಗಾಯ

    Published

    on

    ಮಂಗಳೂರು/ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ.

    ಈ ದುರ್ಘಟನೆಯಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ವುಲರ್ ವ್ಯೂಪಾಯಿಂಟ್ ಬಳಿ ಸೇನಾ ವಾಹನವೊಂದು ರಸ್ತೆಯಿಂದ ಕೆಳಗಿಳಿದು ಆಳವಾದ ಕಮರಿಗೆ ಉರುಳಿದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ಉತ್ತರ ಕಾಶ್ಮೀರ ಜಿಲ್ಲೆಯ ಎಸ್.ಕೆ ಪಯೆನ್ ಬಳಿ ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಸೈನಿಕರ ಸಾವು, ಮೂವರು ಗಂಭೀರವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ- ಶ್ರೀನಗರ ರಸ್ತೆಯ ಎಸ್ ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಚೀನಾದ ನಿಗೂಢ ವೈರಸ್ ಕುರಿತು ಆರೋಗ್ಯ ಸಂಸ್ಥೆ ಮಾಹಿತಿ !

    ಈ ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಬಂಡಿಪೋರಾಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಇಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡ ಮೂವರು ಸೈನಿಕರನ್ನು ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.

    Continue Reading

    LATEST NEWS

    Trending