Connect with us

    BANTWAL

    ವಿಟ್ಲ: ಮಾ.22ರಂದು ವೈದ್ಯರತ್ನಂ ಮಾಥುಕುಟ್ಟಿಯ ಇಡೆನ್ ಬೋಟಾನಿಕಲ್ ಗಾರ್ಡನ್ ಉದ್ಘಾಟನೆ

    Published

    on

    ಮಂಗಳೂರು: ವೈದ್ಯರತ್ನಂ ಮಾಥುಕುಟ್ಟಿ ವೈದ್ಯರು ಕರಾವಳಿ ಭಾಗದಲ್ಲಿ ಗಿಡಮೂಲಿಕೆ, ಆಯುರ್ವೇದ ಮನೆಮದ್ದಿನ ಮೂಲಕ ಕಳೆದ 35 ವರ್ಷದಿಂದ ಅನೇಕ ಮಾರಣಾಂತಿಕ ಖಾಯಿಲೆಗಳನ್ನು ಚಮತ್ಕಾರದ ರೀತಿಯಲ್ಲಿ ಗುಣಪಡಿಸಿದ ವ್ಯಕ್ತಿ.

    6 ಎಕರೆ ಪ್ರದೇಶದಲ್ಲಿ ಇವರು ಬೆಳೆದ 3000 ಸಾವಿರಕ್ಕೂ ಅಧಿಕ ಗಿಡ, ಹೂವು, ಹಣ್ಣು ಸೇರಿ ಮಾರಕ ರೋಗಗಳನ್ನು ಗುಣಪಡಿಸುವ ಔಷದೀಯ ಗುಣಗಳುಳ್ಳ ಸಸ್ಯ ಸಂಪತ್ತು ಹೊಂದಿದ್ದು,

    ದೇಶ ವಿದೇಶಗಳ ಅನೇಕ ಜನರು ಇವರ ಈ ಭಾಗಕ್ಕೆ ಬಂದು ತಮ್ಮ ಆನಾರೋಗ್ಯ ಸಮಸ್ಯಗೆ ಒಳಿತನ್ನು ಕಂಡಿದ್ದಾರೆ. ಇವರ ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಅಡ್ಯನಡ್ಕದ ಇಡೆನ್ ಬೋಟಾನಿಕಲ್ ಗಾರ್ಡನ್ ಇದೇ ಮಂಗಳವಾರದಂದು ಲೋಕಾರ್ಪಣೆಗೊಳ್ಳಲಿದೆ.

    ಈ ಕಾರ್ಯಕ್ರಮವನ್ನು ಮಾ.22ರ ಮಂಗಳವಾರ ಸಂಜೆ 4 ಗಂಟೆಗೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉದ್ಗಾಟಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಸಂಸದ ನಳಿನ್ ಕುಮಾರ್ ಕಟೀಲ್, ಮಾಣಿಲದ ಮೋಹನ ದಾಸ ಪರಮಹಂಸ ಸ್ವಾಮೀಜಿ, ರೆ. ಫಾ. ಚೆಂಬೊಟಿಕಲ್, ಇವರ ಆಶಿರ್ವಚನವಿದ್ದು,

    ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಎ.ಕೆಮ್ ಅಶ್ರಫ್, ಕುಂಜಂಬು, ನೆಲ್ಲಿಕುನ್ನು, ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಯಶ್ ಪಾಲ್ ಸುವರ್ಣ ಸೇರಿ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ

    Published

    on

    ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ  ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು  ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


    ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

    ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.

    Continue Reading

    BANTWAL

    ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಹಾನಿ

    Published

    on

    ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

    ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

    ಸಿಡಿಲು ಬಡಿದ ಸಂದರ್ಭದಲ್ಲಿ ಸಂದರ್ಭ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆದುಂಡು ಬರಲು ತೆರಳಿದ್ದರು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಸಿಡಿಲು ಬಡಿದ ಪರಿಣಾಮ 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ಅವರು ಹೇಳಿದ್ದಾರೆ.

    Continue Reading

    BANTWAL

    ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ

    Published

    on

    ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.
    ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು ಮಾಡಿ ಜನಮನಕ್ಕೆ ಹತ್ತಿರವಾಗಿದ್ದಾರೆ. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.

    ಟಿಕ್ ಟಾಕ್ ನಲ್ಲಿ ಕಾಮಿಡಿ ವೀಡಿಯೋ ಮಾಡಿ ಪ್ರಸಿದ್ದಿ ಪಡೆದಿದ್ದ ಧನರಾಜ್ ಬಳಿಕ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕಾಮಿಡಿ ವಿಡಿಯೋಗಳನ್ನು ಮಾಡಿ ಖ್ಯಾತಿ ಗಳಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿಯೂ ಗಮನ ಸೆಳೆದಿದ್ದರು.


    ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್ಯ ಜೊತೆಗೂಡಿ ವೀಡಿಯೋಗಳನ್ನು ಮಾಡುತ್ತಿರುವ ಧನರಾಜ್ ಆಚಾರ್ಯ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.

    Continue Reading

    LATEST NEWS

    Trending