Connect with us

    BANTWAL

    ತನ್ನ ಮೆಸೇಜ್‌ಗೆ ವಿವಾಹಿತ ಮಹಿಳೆ ರಿಪ್ಲೈ ಮಾಡಿಲ್ಲವೆಂದು ಆಕೆಯ ಮನೆಗೆ ನುಗ್ಗಿ ಕೊಲೆಗೆ ಯತ್ನಿಸಿದ ಭೂಪ

    Published

    on

    ಬಂಟ್ವಾಳ: ಸಂಬಂಧಿಕ ಮಹಿಳೆಯೊರ್ವಳು ಮೆಸೇಜ್ ಮಾಡಿಲ್ಲ ಎನ್ನುವ ಕಾರಣಕ್ಕಾಗಿ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಮಹಿಳೆಯನ್ನು ಕೊಲ್ಲಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪಿಲಿಮೊಗರು ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


    ಪಲ್ಲಿಪಾಡಿ ನಿವಾಸಿ ರಮೇಶ್ ಎಂಬಾತ ಆರೋಪಿಯಾಗಿದ್ದು ಸದ್ಯ ತಲೆಮರೆಸಿಕೊಂಡಿದ್ದಾನೆ.
    ಪಿಲಿಮೊಗರು ನಿವಾಸಿ ಉಮೇಶ್ ಎಂಬವರ ಪತ್ನಿ ಲತಾ ಅವರನ್ನು ಆರೋಪಿಯು ಕೊಲ್ಲಲು ಪ್ರಯತ್ನಿಸಿದ್ದು , ಗಾಯಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
    ರಮೇಶ್ ಎಂಬುವವರು ಲತಾ ಅವರ ಸಂಬಂಧಿಕನಾಗಿದ್ದು, ಆಗಾಗ ಮನೆಗೆ ಬಂದು ಹೋಗುತ್ತಿದ್ದ.

    ಮನೆಯವರ ಜೊತೆ ಸಲುಗೆಯಿಂದ ಇದ್ದು ಆತ ಕಾಲ್ ಹಾಗೂ ಮೆಸೇಜ್ ಮಾಡುತ್ತಿದ್ದ. ಈ ವಿಚಾರ ಲತಾ ಅವರ ಗಂಡ ಉಮೇಶ್ ಅವರಿಗೆ ತಿಳಿದು ಪತ್ನಿಗೆ ಬೈದು ಮೆಸೇಜ್ ಹಾಗೂ ಕಾಲ್ ಮಾಡದಂತೆ ತಿಳಿಸಿದ್ದರು.

    ಅದರಂತೆ ಆರೋಪಿ ಮೆಸೇಜ್‌ ಮಾಡುತ್ತಿದ್ದರೂ ಆಕೆ ರಿಪ್ಲೈ ಮಾಡುತ್ತಿರಲಿಲ್ಲ. ಇದರಿಂದ ಆಕ್ರೋಶಗೊಂಡ ರಮೇಶ್ ನಿನ್ನೆ ಸೀದಾ ಲತಾ ಅವರ ಮನೆಗೆ ಬಂದು ನೀನು ಯಾಕೆ ಮೆಸೇಜ್ ಮತ್ತು ಕಾಲ್ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾನೆ.

    ಲತಾ ಅವರು ಕಾರಣವನ್ನು ತಿಳಿಸಿದಾಗ ಆರೋಪಿ ರಮೇಶ್ ಅವ್ಯಾಚ್ಯ ಶಬ್ದಗಳಿಂದ ಬೈದು ಮೈ ಮುಟ್ಟಲು ಬಂದಿದ್ದು, ಈ ವೇಳೆ ವಿರೋಧ ವ್ಯಕ್ತಪಡಿಸಿದ ಮಹಿಳೆ ತನ್ನ ಗಂಡನಲ್ಲಿ ತಿಳಿಸುವುದಾಗಿ ಹೇಳಿದಾಗ ಕತ್ತಿಯನ್ನು ತಂದು ಹಲ್ಲೆಗೆ ಯತ್ನಿಸಿದ್ದಾನೆ.

    ಈ ವೇಳೆ ಲತಾ ಅವರ ಬೊಬ್ಬೆ ಕೇಳಿ ಪಕ್ಕದ ಮನೆಯಲ್ಲಿರುವ ಮೈದುನ ಹಾಗೂ ಅತ್ತೆ ಸ್ಥಳಕ್ಕೆ ಬಂದಾಗ ಅವರನ್ನು ನೋಡಿ ಆರೋಪಿ ಪರಾರಿಯಾಗಿದ್ದಾನೆ.

    ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

    BANTWAL

    ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

    Published

    on

    ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

    ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

    ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

    ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

    Continue Reading

    BANTWAL

    ಬಂಟ್ವಾಳ: ನೇತ್ರಾವತಿ ನದಿಯ ದೋಣಿಯ ಅಂಬಿಗ ನಾಪತ್ತೆ

    Published

    on

    ಬಂಟ್ವಾಳ: ನೇತ್ರಾವತಿ ನದಿಯ ದೋಣಿಯ ಅಂಬಿಗ ಬರಿಮಾರು ಕಡವಿನಬಾಗಿಲು ನಿವಾಸಿ ದಿವಾಕರ ನಾಪತ್ತೆಯಾಗಿದ್ದಾರೆ.

    ದಿವಾಕರ ಅವರು ಸುಮಾರು 30 ವರ್ಷಗಳಿಂದ ಅಂಬಿಗನಾಗಿ ಕೆಲಸ ಮಾಡುತ್ತಿದ್ದು, ಇವರು ನುರಿತ ಈಜುಗಾರರಾಗಿದ್ದರು. ಬರಿಮಾರು-ಸರಪಾಡಿಗೆ ದೋಣಿ ಮೂಲಕ ಸಂಪರ್ಕ ಸೇತುವೆಯಾಗಿ ಇವರು ಪ್ರತಿದಿನ ಕೆಲಸ ಮಾಡುತ್ತಿದ್ದರು.

    ಜ.3 ರ ಶುಕ್ರವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ಬರಿಮಾರಿನಿಂದ ಸರಪಾಡಿಗೆ ಹೋಗಿ ಅಲ್ಲಿನ ಅಂಗಡಿಯೊಂದರಿಂದ ಮನೆಗೆ ತರಕಾರಿ ಪಡೆದು, ವಾಪಸ್ ತೆರಳಿದ್ದು, 11 ಗಂಟೆ ವೇಳೆ ದೋಣಿ ಬರಿಮಾರು ಕಡವಿನ ಬಾಗಿಲಿನಲ್ಲಿ ತೇಲಾಡುವ ಸ್ಥಿತಿಯಲ್ಲಿ ಕಂಡು ಬಂದಿದೆ. ದಿವಾಕರ ಅವರು ಕಾಣಿಸಿದ ಕಾರಣ ಅವರ ಪತ್ನಿ ಸರಪಾಡಿಯ ಅಂಗಡಿಯ ಮೂಲಕ ಮಾಲೀಕರಿಗೆ ಫೋನ್ ಮಾಡಿ ವಿಚಾರಿಸಿದ್ದರು.

    ಬರಿಮಾರು ಕಡವಿನ ಬಾಗಿಲಿನಲ್ಲಿ ಹಸಿಹುಲ್ಲು ಕಟ್ಟು, ಮೊಬೈಲ್, ಚಪ್ಪಲಿ ಕಂಡು ಬಂದಿದೆ. ದಿವಾಕರ ಅವರಿಗೆ ಮೂರ್ಛೆ ರೋಗವಿದ್ದು, ಈ ಹಿಂದೆ ಕೂಡಾ ನದಿ ಬದಿಯಲ್ಲಿ ಬಿದ್ದ ಘಟನೆ ನಡೆದಿತ್ತು. ಇವತ್ತು ಕೂಡಾ ಮೂರ್ಛೆ ರೋಗ ಭಾದಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಸ್ಥಳೀಯರು ನದಿ ಸುತ್ತಮುತ್ತ ಹುಡುಕಾಟ ನಡೆಸುತ್ತಿದ್ದು, ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

    Continue Reading

    BANTWAL

    ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಂದ ಕಳಚಿ ಬಿದ್ದ ಡೀಸೆಲ್ ಟ್ಯಾಂಕ್

    Published

    on

    ವಿಟ್ಲ: ಇಲ್ಲಿನ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಜ.2ರ ಗುರುವಾರದಂದು ನಡೆದಿದೆ.

    ಸರಕಾರಿ ಬಸ್ಸೊಂದು ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸಂದರ್ಭ ಬಸ್ ನಿಂದ ಡಿಸೇಲ್ ಟ್ಯಾಂಕ್‌ ಹೆದ್ದಾರಿಗೆ ಕಳಚಿ ಬಿದ್ದಿದ್ದು, ತತ್ ಕ್ಷಣ ಬಸ್‌ ಸಂಚಾರ ಸ್ಥಗಿತಗೊಂಡಿದೆ.ಈ ನಡುವೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬದಲಿ ಬಸ್ಸಿನ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದ ಎಂದು ಸಾರ್ವಜನಿಕರು ದೂರಿದ್ದಾರೆ.

    Continue Reading

    LATEST NEWS

    Trending