Friday, August 12, 2022

ಮದುವೆಯಾಗುವಂತೆ ಕೇಳಿದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆಗೈದ ಬಾಯ್‌ಫ್ರೆಂಡ್

ಬೆಂಗಳೂರು​: ತನ್ನ ಪ್ರಿಯಕರನಲ್ಲಿ ಮದುವೆಯಾಗುವಂತೆ ಕೇಳಿದ ಯುವತಿಗೆ ಪ್ರೇಯಸನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ನಡೆದಿದೆ.


ಈ ಘಟನೆ ಎರಡು ದಿನಗಳ ಹಿಂದೆ ತಡವಾಗಿ ಬೆಳಕಿಗೆ ಬಂದಿದ್ದು, ದಾನೇಶ್ವರಿ ಎಂಬ ಯುವತಿಯ ಮೇಲೆ ಶಿವಕುಮಾರ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯ ವಿಚಾರದಲ್ಲಿ ಪ್ರಸ್ತಾಪ ನಡೆದಿತ್ತು. ಈ ಸಂದರ್ಭ ಇಬ್ಬರ ನಡುವೆ ಗಲಾಟೆಯಾಗಿತ್ತು. ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದಿದ್ದಳು. ಈ ವೇಳೆ ಮದುವೆ ವಿಚಾರದಲ್ಲಿ ಇದ್ದ ಜಗಳ ಅತಿರೇಕಕ್ಕೇರಿತ್ತು.

ಈ ವೇಳೆ ಕೋಪಗೊಂಡ ಶಿವಕುಮಾರ್ ಬಾಟಲ್‌ನಲ್ಲಿ ಪೆಟ್ರೋಲ್ ತಂದು ದಾನೇಶ್ವರಿ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ.
ಗಾಯಾಳು ಯುವತಿಯನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಾನೇಶ್ವರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.
ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಶಿವಕುಮಾರ್‌ ವಿರುದ್ಧ IPC 302 ಮತ್ತು SC -ST ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....