Connect with us

    health

    ಬಾಯ್ಸ್.. ನಿಮಗೆ ಈ ಅಭ್ಯಾಸ ಇದೆಯಾ ?? ಹಾಗಾದ್ರೆ ಮಕ್ಕಳಾಗೋದು ಡೌಟ್ !!!

    Published

    on

    ಮಂಗಳೂರು: ಪುರುಷರ ಫಲವತ್ತತೆಯು ಪ್ರಸ್ತುತ ದಿನಗಳಲ್ಲಿ ಗಂಭೀರ ವಿಷಯವಾಗಿದ್ದು ನಿರ್ಲಕ್ಷ ಮಾಡದೆಯೇ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಹೆಣ್ಣಿಗೆ ಗರ್ಭ ಧರಿಸುವುದಕ್ಕೆ ವೀರ್ಯದ ಸಂಖ್ಯೆ ಪ್ರತಿ ಮಿಲಿಲೀಟರ್ ನಲ್ಲಿ 15 ಮಿಲಿಯನ್ ಗಿಂತ ಹೆಚ್ಚಿರಬೇಕು. ಇದು ಇದಕ್ಕಿಂತ ಕಡಿಮೆಯಿದ್ದರೆ, ಅದನ್ನು ಕಡಿಮೆ ವೀರ್ಯಾಣುಗಳ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ.

    ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಬಂಜೆತನದ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಈ ವೀರ್ಯಾಣುಗಳ ಸಂಖ್ಯೆಯಲ್ಲಿನ ಇಳಿಕೆ. ಜೊತೆಗೆ ಇತರ ಆರೋಗ್ಯ ಸಮಸ್ಯೆಗಳು. ಸಾಮಾನ್ಯವಾಗಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ಹಲವು ಕಾರಣಗಳಿವೆ. ತಡವಾಗಿ ಮದುವೆಯಾಗುವುದು, ಒತ್ತಡ, ಅನಾರೋಗ್ಯಕರ ಜೀವನಶೈಲಿಯು ವೀರ್ಯಾಣುಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ.

    ಇಂತಹ ಸಮಯದಲ್ಲಿ ಲೈಂಗಿಕ ಸಮಸ್ಯೆಗಳು, ಕಡಿಮೆ ಶಕ್ತಿ, ವೃಷಣ ಸಮಸ್ಯೆಗಳು, ದೇಹ – ಮುಖ – ಕೂದಲಿನ ಬೆಳವಣಿಗೆಯಲ್ಲಿ ಬದಲಾವಣೆಗಳನ್ನು ಅನುಭವಿಸುತ್ತಿದ್ದರೆ, ಅದು ಕಡಿಮೆ ವೀರ್ಯಾಣುಗಳ ಸಂಖ್ಯೆಯ ಸಂಕೇತವಾಗಿರಬಹುದು. ಈ ಕಾರಣಗಳಿಂದ ಬಂಜೆತನದ ಸಮಸ್ಯೆಯ ಜೊತೆಗೆ ಇತರ ಸಮಸ್ಯೆಗಳು ಕೂಡ ಸಾಮಾನ್ಯವಾಗಿ ಸಂಭವಿಸುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಪುರುಷರು ಪ್ರತಿದಿನ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಬಹಳ ಜಾಗರೂಕರಾಗಿರುವುದು ಒಳ್ಳೆಯದು.

    ನಿರ್ದಿಷ್ಟವಾಗಿ ಕೆಲವು ರೀತಿಯ ಅಭ್ಯಾಸಗಳು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಇದಲ್ಲದೆ, ಬಂಜೆತನದ ಸಮಸ್ಯೆಗೂ ಕಾರಣವಾಗಬಹುದು. ಅದರಲ್ಲಿಯೂ ಕಡಿಮೆ ವೀರ್ಯಾಣುಗಳ ಸಂಖ್ಯೆಯು ಹೆಣ್ಣಿಗೆ ಗರ್ಭಿಣಿಯಾಗಲು ತುಂಬಾ ಕಷ್ಟಕರವಾಗಿಸುತ್ತದೆ. ಹಾಗಾಗಿ ತಂದೆಯಾಗಲು ಬಯಸುವ ಮೊದಲು ಈ 5 ಅಭ್ಯಾಸಗಳಿಂದ ದೂರವಿರಬೇಕಾಗುತ್ತದೆ. ಹಾಗಾದರೆ ಅವು ಯಾವುವು? ಯಾಕಾಗಿ ಅವುಗಳಿಂದ ದೂರವಿರಬೇಕು? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ.

     

    ಮುಖ್ಯವಾಗಿ ದೂರವಿಡಬೇಕಾದ 5 ಅಭ್ಯಾಸಗಳು :

    ಧೂಮಪಾನ: ಸಿಗರೇಟು ಸೇದುವುದು ಕೆಲವು ಪುರುಷರಲ್ಲಿ ಸಾಮಾನ್ಯವಾಗಿದೆ. ಆದರೆ, ಧೂಮಪಾನವು ಕೇವಲ ಶ್ವಾಸಕೋಶಕ್ಕೆ ಸಂಬಂಧಿಸಿದ್ದಲ್ಲ. ಇದು ಲೈಂಗಿಕ ಆರೋಗ್ಯಕ್ಕೂ ಹಾನಿಕಾರಕ. ಧೂಮಪಾನ ಮಾಡುವ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

    ಮದ್ಯಪಾನ: ಕೆಲವು ಹುಡುಗರು ಚಿಕ್ಕ ವಯಸ್ಸಿನಿಂದಲೇ ಮದ್ಯಪಾನ ಮಾಡಲು ಪ್ರಾರಂಭಿಸುತ್ತಾರೆ. ಇದು ಒಳ್ಳೆಯದಲ್ಲ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಅಲ್ಲದೆ ಅತಿಯಾಗಿ ಆಲ್ಕೋಹಾಲ್ ಸೇವನೆಯು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಸಾಕಷ್ಟು ವೀರ್ಯಾಣು ಉತ್ಪತ್ತಿಯಾಗುವುದಿಲ್ಲ ಎಂದು ಹೇಳಲಾಗುತ್ತದೆ.

    ಉದ್ವೇಗ (ಒತ್ತಡ): ಅಧಿಕ ಒತ್ತಡವು ದೇಹದಲ್ಲಿ ಕಾರ್ಟಿಸೋಲ್ ನಂತಹ ಒತ್ತಡದ ಹಾರ್ಮೋನುಗಳ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಟೆಸ್ಟೋಸ್ಟೆರಾನ್ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ಯೋಗ, ಧ್ಯಾನ, ದೈಹಿಕ ವ್ಯಾಯಾಮ ಮುಂತಾದ ಒತ್ತಡ ನಿರ್ವಹಣಾ ವಿಧಾನಗಳನ್ನು ಅನುಸರಿಸುವುದು ಬಹಳ ಮುಖ್ಯ.

    ಅನಾರೋಗ್ಯಕರ ಆಹಾರಗಳು: ಆಹಾರ ಫಲವತ್ತತೆಯ ಮೇಲೂ ಪರಿಣಾಮ ಬೀರುತ್ತದೆ. ಫಾಸ್ಟ್ ಫುಡ್, ಸಕ್ಕರೆ ಮತ್ತು ಕೊಬ್ಬಿನ ಪದಾರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿ ಊತ ಮತ್ತು ತೂಕ ಹೆಚ್ಚಾಗಬಹುದು, ಇದು ವೀರ್ಯಾಣು ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಜೀವಸತ್ವಗಳು ಮತ್ತು ಖನಿಜಗಳ ಕೊರತೆಗಳು, ವಿಶೇಷವಾಗಿ ಸತು, ಸೆಲೆನಿಯಂ, ಫೋಲಿಕ್ ಆಮ್ಲ, ವೀರ್ಯಾಣುಗಳ ಗುಣಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಸೇವನೆ ಮಾಡುವ ಆಹಾರದ ಬಗ್ಗೆ ಗಮನವಹಿಸಬೇಕು.

    ವಿಪರೀತ ಶಾಖ: ಪುರುಷರಿಗೆ, ದೇಹದ ಕೆಳಭಾಗದಲ್ಲಿ ಅತಿಯಾದ ಶಾಖ ಅಥವಾ ಬಿಸಿಯ ಅನುಭವ ಆಗುವುದು ವೀರ್ಯಾಣುಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ, ನೀವು ಬಿಸಿ ನೀರಿನ ಸ್ನಾನ, ಬಿಗಿಯಾದ ಒಳ ಉಡುಪುಗಳು, ಲ್ಯಾಪ್ಟಾಪ್ ಅನ್ನು ನಿಮ್ಮ ತೊಡೆಯ ಮೇಲೆ ದೀರ್ಘಕಾಲ ಇರಿಸಿಕೊಂಡು ಕೆಲಸ ಮಾಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಲ್ಲದಿದ್ದರೆ, ವೃಷಣಗಳ ತಾಪಮಾನದ ಹೆಚ್ಚಳದಿಂದಾಗಿ ವೀರ್ಯಾಣು ಹಾನಿಯಾಗುವ ಅಪಾಯವೂ ಇರುತ್ತದೆ.

    Baindooru

    3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ

    Published

    on

    ವಿಜಯಪುರ: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 3ಕ್ಕೆ 3 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದು, ಕೈ ನಾಯಕರ ಆತ್ಮವಿಶ್ವಾಸ ಹೆಚ್ಚಾಗಿದೆ. ಮೂರು ಉಪಚುನಾವಣೆ ಗೆದ್ದ ಕಾಂಗ್ರೆಸ್‌ ನಾಯಕರು ವಿಜಯೋತ್ಸವದಲ್ಲಿ ಬ್ಯುಸಿಯಾಗಿದ್ದಾರೆ.

    ಕಾಂಗ್ರೆಸ್ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದರೆ ಬಿಜೆಪಿ ನಾಯಕರಿಗೆ ಬಹಳ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ನಾಯಕರು ನಿರೀಕ್ಷೆ ಮಾಡದ ತೀರ್ಪನ್ನು ಮೂರು ವಿಧಾನಸಭಾ ಕ್ಷೇತ್ರದ ಮತದಾರರು ನೀಡಿದ್ದು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಸೋಲು ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ಬೇಸರಕ್ಕೆ ಕಾರಣವಾಗಿದೆ.

    ಬೈಎಲೆಕ್ಷನ್ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಮನೆಯಲ್ಲಿನ ಟಿವಿ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲ್ಹಾರ ಪಟ್ಟಣದ ವೀರಭದ್ರಪ್ಪ ಬಾಗಿ ಎಂಬುವವರು ಇಂದು ಬೆಳಗ್ಗೆಯಿಂದ ಉಪಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಾ ಇದ್ದರು. 3ಕ್ಕೆ 3 ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದ್ದಂತೆ ಟಿವಿ ಒಡೆದು ರಾಜ್ಯ ಬಿಜೆಪಿ ನಾಯಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಿಜೆಪಿ ನಾಯಕರ ಒಗ್ಗಟ್ಟಿನ ಕೊರತೆಯಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಬಿಜೆಪಿ ವರಿಷ್ಠರು ಮೊದಲು ಬಿಜೆಪಿ ನಾಯಕರು, ಮುಖಂಡರ ಸಭೆ ಕರೆಯಬೇಕು. ಬಿಜೆಪಿ ನಾಯಕರ ನಡುವಿನ ಒಡಕಿನಿಂದ ಕಾರ್ಯಕರ್ತರು ಹಾಳಾಗುವ ಪರಿಸ್ಥಿತಿ ಬಂದಿದೆ ಎಂದು ವೀರಭದ್ರಪ್ಪ ಬಾಗಿ ಆಗ್ರಹಿಸಿದ್ದಾರೆ.

    Continue Reading

    Baindooru

    ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ

    Published

    on

    ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

    ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ

    ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

    Continue Reading

    Baindooru

    ಜಾರ್ಖಂಡ್‌ನಲ್ಲಿ ಬಿಗ್‌ ಟ್ವಿಸ್ಟ್‌; ಜೆಎಂಎಂ ಮುನ್ನಡೆ – ಎನ್‌ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ

    Published

    on

    ರಾಂಚಿ: ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಒಳಗೊಂಡ ‘ಇಂಡಿಯಾ’ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಗಡಿ ದಾಟಿದೆ.

    ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾದ ನಂತರ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು. ಆದರೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಮತ್ತೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಬೆಳಗ್ಗೆ 10.30ಕ್ಕೆ ರಾಜ್ಯದ 81 ಸ್ಥಾನಗಳ ಪೈಕಿ 51ರಲ್ಲಿ ಇಂಡಿಯಾ ಮೈತ್ರಿಕೂಟ ಮುಂದಿದೆ. 28 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ.

    ಜಾರ್ಖಂಡ್ ವಿಧಾನಸಭೆಗೆ ಬಹುಮತಕ್ಕೆ 41 ಸ್ಥಾನಗಳು ಅಗತ್ಯವಿದೆ. ರಾಜ್ಯಕ್ಕೆ ನ.13 ರಂದು ಮೊದಲ ಹಂತದ ಮತದಾನವು 43 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನ ನಡೆದಿತ್ತು.

    ಮ್ಯಾಟ್ರಿಜ್ ಪ್ರಕಾರ, ಎನ್‌ಡಿಎ 42-47 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿತ್ತು. ಜೆಎಂಎಂ ನೇತೃತ್ವದ ಮೈತ್ರಿಕೂಟವು 25-30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಬಹುದು ಎಂದು ಸಮೀಕ್ಷೆಗಳು ಹೇಳಿತ್ತು. ಆದರೆ, ಬಹುಪಾಲು ಸಮೀಕ್ಷೆಗಳು ಉಲ್ಟ ಆದಂತಿದೆ. ಆದಾಗ್ಯೂ, ಆಕ್ಸಿಸ್ ಮೈ ಇಂಡಿಯಾ ಮತ್ತು ಪಿ ಮಾರ್ಕ್ ಸಮೀಕ್ಷೆ ಭಿನ್ನವಾಗಿತ್ತು. ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್‌ 49-59 ಮತ್ತು ಎನ್‌ಡಿಎ ಮೈತ್ರಿಕೂಟ 37-47 ಸ್ಥಾನ ಪಡೆಯಬಹುದು ಎಂದು ಅಂದಾಜಿಸಿದ್ದವು. ಬಹುಪಾಲು ಇದು ನಿಜವಾದಂತೆ ಕಾಣುತ್ತಿದೆ.

    Continue Reading

    LATEST NEWS

    Trending