Connect with us

    LATEST NEWS

    ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ

    Published

    on

    ಉಡುಪಿ: ಇಲ್ಲಿನ ಬ್ರಹ್ಮಗಿರಿಯಲ್ಲಿರುವ ಪ್ರವಾಸಿ ಮಂದಿರ ಸಂಪೂರ್ಣ ಕತ್ತಲನ್ನು ಆವರಿಸಿದೆ. ಕಳೆದ ಒಂದು ವರ್ಷದಿಂದ ವಿದ್ಯುತ್ ಬಿಲ್ ಬಾಕಿ ಉಳಿಸಿರುವ ಕಾರಣ ಪ್ರವಾಸಿ ಮಂದಿರಕ್ಕೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.  ಬಿಲ್ ಪಾವತಿ ಮಾಡುವಂತೆ ಹಲವು ಬಾರಿ ನೋಟೀಸ್ ನೀಡಿದರೂ ಯಾವುದೇ ಸ್ಪಂದನೆ ದೊರಕದ ಕಾರಣ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ಒಂದು ವರ್ಷದಿಂದ 3 ಲಕ್ಷ ರೂಪಾಯಿ ಗೂ ಅಧಿಕ ಮೊತ್ತವನ್ನು ಬಾಕಿ ಉಳಿಸಿಕೊಂಡಿದ್ದರು ಎನ್ನಲಾಗಿದೆ. ಇನ್ನು ಬ್ರಹ್ಮಗಿರಿಯ ಈ ಪ್ರವಾಸಿ ಮಂದಿರಲ್ಲಿ ರಾಜಕಾರಣಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಳಿದುಕೊಳ್ಳುತ್ತಿದ್ದರು. ಉಸ್ತುವಾರಿ ಸಚಿವರು ಬಂದಾಗಲೂ ಇದೇ ಪ್ರವಾಸಿ ಮಂದಿರದಲ್ಲಿ ಉಳಿದುಕೊಂಡಿದ್ದಾರೆ. ಹಲವು ಪತ್ರಿಕಾಗೋಷ್ಟಿಗಳು ಕೂಡಾ ಇದೆ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಆದರೆ ಒಂದು ವರ್ಷದಿಂದ ವಿದ್ಯುತ್ ಬಿಲ್‌ನ್ನು ಕಟ್ಟದೇ ಇರುವುದು ಮಾತ್ರ ವಿಪರ್ಯಾಸ.

    ಉಡುಪಿ : ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿಅ*ಗ್ನಿ ಅವಘ*ಡ

    ಸರಕಾರದ ಆರ್ಥಿಕ ದಿವಾಳಿತನಕ್ಕೆ ಇದೊಂದು ನಿದರ್ಶನ-ಯಶಪಾಲ್‌
    ಯಶ್‌ಪಾಲ್ ಉಡುಪಿ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಹಿನ್ನೆಲೆ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಅಧಿಕಾರಿಗಳು ಕಡಿತಗೊಳಿಸಿದ್ದಾರೆ. ಪಡುಬಿದ್ರಿ ಗ್ರಾ. ಪಂ.ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್ ಕಡಿತಗೊಳಿಸಲು ಕೂಡ ಮೆಸ್ಕಾಂ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದಲ್ಲಿ ಹಣವಿಲ್ಲ. ರಾಜ್ಯ ಸರಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ಸ್ಪಷ್ಟ ನಿದರ್ಶನ ಬೇಕಿಲ್ಲ ಎಂದು ಶಾಸಕ ಯಶ್‌ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಎಕ್ಸ್ ಮೂಲಕ ತಿಳಿಸಿದ್ದಾರೆ.

    ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಪ್ರತಿಕ್ರಿಯೆ ನೀಡಿದ್ದು, ಸರಕಾರದ ಹಣ ಬಿಡುಗಡೆಯಾಗುವಾಗ ವಿಳಂಬವಾದ ಕಾರಣ ಬಿಲ್ ಬಾಕಿಯಾಗಿರಬಹುದು. ಸಂಪರ್ಕ ಕಡಿತಗೊಳಿಸಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಸರಕಾರ ಹಣ ಮಂಜೂರುಗೊಳಿಸಿದ ಕೂಡಲೇ ಪಾವತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

    BELTHANGADY

    ಗಾಂಜಾ ಸಾಗಾಟ ಪ್ರಕರಣ: ಓರ್ವ ಆರೋಪಿ ಸೆರೆ

    Published

    on

    ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್‌ ಸಹಿತ ಒಟ್ಟು 1,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

    ಬೆಳ್ತಂಗಡಿಯ ಕುಕ್ಕೇಡಿಯ ಗೋಳಿಯಂಗಡಿ ನಿವಾಸಿ ಅಬುತಾಹಿರ್ ಯಾನೆ ಅನ್ವರ್ (25) ಬಂಧಿತ ಆರೋಪಿ. ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್‌ನಲ್ಲಿ ಈ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ.

    ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐ ನರೇಂದ್ರ, ಎಎಸ್‌ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

    Continue Reading

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    SHOCKING NEWS : ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ

    Published

    on

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


    ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.
    ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Continue Reading

    LATEST NEWS

    Trending