Connect with us

BELTHANGADY

ಬೆಳ್ತಂಗಡಿ: ದೇರಾಜೆಬೆಟ್ಟ ಕ್ಷೇತ್ರದಲ್ಲಿ ನಾಳೆಯಿಂದ ಪುನರ್‌ ಪ್ರತಿಷ್ಠೆ, ಬ್ರಹ್ಮ ಕುಂಭಾಭಿಷೇಕ

Published

on

ಬೆಳ್ತಂಗಡಿ: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಹಚ್ಚಹಸಿರಿನ ನಡುವೆ ಕಂಗೊಳಿಸುತ್ತಿರುವ ಕ್ಷೇತ್ರ ಮರೋಡಿ ದೇರಾಜೆಬೆಟ್ಟ ದೈವ– ಕೊಡಮಣಿತ್ತಾಯ ದೈವಸ್ಥಾನ. 800 ವರ್ಷಗಳ ಇತಿಹಾಸ ಹೊಂದಿರುವ ಕ್ಷೇತ್ರವು 250 ವರ್ಷಗಳ ಹಿಂದೆ ಪಾಳುಬಿದ್ದಿತ್ತು.

ಭಕ್ತರ ಸಹಕಾರದಿಂದ  30 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಕ್ಷೇತ್ರವು ಭವ್ಯವಾಗಿ ಜೀರ್ಣೋದ್ಧಾರಗೊಂಡು, ಬ್ರಹ್ಮ ಕುಂಭಾಭಿಷೇಕಕ್ಕೆ ಸಜ್ಜಾಗಿದೆ.
ಮರೋಡಿ ಗ್ರಾಮದಲ್ಲಿ ಈಗ ಹಬ್ಬದ ವಾತಾವರಣ ಮನೆಮಾಡಿದೆ. ನೂರಾರು ಭಕ್ತರು ಪ್ರತಿನಿತ್ಯ ಶ್ರಮದಾನದಲ್ಲಿ ಪಾಲ್ಗೊಂಡು ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಬೃಹತ್‌ ಚಪ್ಪರವನ್ನು ಸುಂದರವಾಗಿ ನಿರ್ಮಿಸಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ಸ್ವಾಗತ ಕಮಾನುಗಳು, ಬಂಟಿಂಗ್ಸ್‌, ಫ್ಲೆಕ್ಸ್‌, ಬ್ಯಾನರ್‌ಗಳು ಭಕ್ತರನ್ನು, ಗಣ್ಯರನ್ನು ಕೈಬೀಸಿ ಕರೆಯುತ್ತಿವೆ. ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.

ಜೀರ್ಣೋದ್ಧಾರ ಸಂಕಲ್ಪ: ಮರೋಡಿ ಪೊಸರಡ್ಕ ದೈವ ಕೊಡಮಣಿತ್ತಾಯ ಮತ್ತು ಬೈದರ್ಕಳ ಗರಡಿ ಜೀರ್ಣಾವಸ್ಥೆಯಲ್ಲಿದ್ದು, ಅದನ್ನು ಜೀರ್ಣೋದ್ಧಾರಗೊಳಿಸುವ ಸಂಕಲ್ಪದೊಂದಿಗೆ ಭಕ್ತರ ಸಮ್ಮುಖದಲ್ಲಿ ಅಷ್ಟಮಂಗಳ, ಆರೂಢಪ್ರಶ್ನೆ ಇಡಲಾಗಿತ್ತು.

ಅದಕ್ಕೂ ಮೊದಲು ದೇರಾಜೆಬೆಟ್ಟದ ದೈವಸ್ಥಾನ ನಿರ್ಮಿಸಿ, ನೇಮೋತ್ಸವ ಬಳಿಕ ಪೊಸರಡ್ಕ ಕ್ಷೇತ್ರವನ್ನು ಜೀರ್ಣೋದ್ಧಾರ ಮಾಡಬೇಕು ಎಂದು ಪ್ರಶ್ನೆಯಲ್ಲಿ ಗೋಚರವಾದಂತೆ ದೇರಾಜೆಬೆಟ್ಟ ಕ್ಷೇತ್ರವನ್ನು ಜೀರ್ಣೋದ್ಧಾರ ಮಾಡಲಾಗಿದೆ.

ನಾಳೆಯ ಕಾರ್ಯಕ್ರಮ: ದೈವಗಳ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಫೆ.19, 20ರಂದು ಕೇಳ ಅನಂತ ಆಸ್ರಣ್ಣರ ನೇತೃತ್ವದಲ್ಲಿ ಪೌರೋಹಿತ್ಯದಲ್ಲಿ ನಡೆಯಲಿದೆ.

19ರಂದು ದೇವತಾ ಪ್ರಾರ್ಥನೆ, ತೋರಣ ಮಹೂರ್ತ, ಉಗ್ರಾಣ ಮಹೂರ್ತ, ಹೊರಕಾಣಿಕೆ ಸಮರ್ಪಣೆ, ಮರೋಡಿ ಶಾಂತಿನಗರ ಅರುಣೋದಯ ಮಂದಿರದಿಂದ ಹೊರಕಾಣಿಕೆ ಮೆರವಣಿಗೆ ನಡೆಯಲಿದೆ. 20ರಂದು ದೈವ ಹಾಗೂ ಕೊಡಮಣಿತ್ತಾಯ ದೈವಗಳ ಮಂಚ ಪ್ರತಿಷ್ಠಾಪನೆ, ಕಲಶಾಭಿಷೇಕ, ಪರ್ವ ಸಂಕ್ರಾಂತಿ, ದರ್ಶನ, ಸಂಜೆ ಭಂಡಾರ ಆಗಮನ, ರಾತ್ರಿ ದೈವ ಕೊಡಮಣಿತ್ತಾಯ ದೈವಗಳ ನೇಮೋತ್ಸವ ನಡೆಯಲಿದೆ.

20ರಂದು ಬೆಳಿಗ್ಗೆ 11.30ಕ್ಕೆ ಅಳದಂಗಡಿ ಅರಮನೆಯ ಪದ್ಮಪ್ರಸಾದ್ ಅಜಿಲ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ದೇವೇಂದ್ರ ಹೆಗ್ಡೆ, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಶ್ರೀ ಜೈನ್ ಪಾಲ್ಗೊಳ್ಳುವರು.

ರಾತ್ರಿ 8ಕ್ಕೆ ಬ್ರಹ್ಮ ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಕೆ. ಹೇಮರಾಜ್ ಬೆಳ್ಳಿಬೀಡು ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಕಟೀಲಿನ ಪ್ರಧಾನ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣರು ಆಶೀರ್ವಚನ ನೀಡುವರು.

ಬೆಳ್ತಂಗಡಿ ಬೆಸ್ಟ್ ಫೌಂಡೇಷನ್‌ನ ಅಧ್ಯಕ್ಷ ರಕ್ಷಿತ್ ಶಿವರಾಂ, ಅಳಗಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಪಾಲ್ಗೊಳ್ಳುವರು. ಹೈಕೋರ್ಟ್‌ ವಕೀಲ ಪ್ರಜ್ವಲ್‌ ಬಂಗೇರ ಧಾರ್ಮಿಕ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending