Connect with us

    LATEST NEWS

    ಎಪ್ರಿಲ್ 1ರಿಂದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

    Published

    on

    ಉಡುಪಿ: ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳು ಏಪ್ರಿಲ್‌ 1 ರ ಶುಕ್ರವಾರದಿಂದ 15 ನೇ ತಾರೀಕಿನವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾಡೋಜ ಡಾ. ಜಿ ಶಂಕರ್‌ ಹೇಳಿದರು.

     

    ಅವರು ಗುರುವಾರ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ.ಕ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು 1957 ರಲ್ಲಿ ಮೊಗವೀರ ಕುಲಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲರವರ ನೇತೃತ್ವದಲ್ಲಿ ದಿವಂಗತ ಸದಿಯ ಸಾಹುಕಾರರು ದಾನವಾಗಿ ನೀಡಿದ ಜಾಗದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದೆ.

    ಹಲವಾರು ವರ್ಷಗಳಿಂದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಿ ಶ್ರೀ ಮಹಾಲಕ್ಷ್ಮೀ ದೇವಿಯನ್ನು ಹತ್ತಿರದಲ್ಲಿ ನೋಡಬೇಕೆನ್ನುವ ಹಂಬಲವನ್ನು ಸ್ಥಳೀಯ ಹಾಗೂ ಮುಂಬಯಿಯ ಭಕ್ತಾಧಿಗಳು ಸಮಾಜದ ಮುಖಂಡರಾದ ನಾಡೋಜ ಡಾ ಜಿ ಶಂಕರ್ ಹಾಗೂ ದ.ಕ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳ ಜೊತೆ ವ್ಯಕ್ತಪಡಿಸಿದಾಗ ತಾವೆಲ್ಲರೂ ಸೇರಿ ಶ್ರದ್ಧಾಭಕ್ತಿಯಿಂದ ಈ ಕೆಲಸ ಮಾಡೋಣ ಎಂದು ತಿಳಿಸಿ ಮಹಾಜನ ಸಂಘದ ನೇತೃತ್ವದಲ್ಲಿ ಕೇರಳದ ಜ್ಯೋತಿಷ್ಯ ವಿದ್ವಾನ್ ಶ್ರೀ ಮಾಧವನ್ ಪುದುವಾಳರವರ ಮೂಲಕ ಅಷ್ಟಮಂಗಲ ಪ್ರಶ್ನೆಯಲ್ಲಿ ವಿಚಾರ ವಿನಿಮಯ ಮಾಡಲಾಯಿತು.

    ಅಷ್ಟಮಂಗಲ ಪ್ರಶ್ನೆಯಲ್ಲಿ ದೇವಸ್ಥಾನದ ಬಗ್ಗೆ ಅನೇಕ ಪ್ರಶ್ನೆಗಳು ಮೂಡಿ ಬಂದಿದ್ದು ಅವುಗಳಿಗೆಲ್ಲಾ ಪ್ರಾಯಶ್ಚಿತ್ತಾದಿ ಸತ್ಕರ್ಮಗಳನ್ನು ನೆರವೇರಿಸಿ ನಾಡೋಜ ಡಾ. ಜಿ ಶಂಕರ್ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯಕ್ರಮ ಕೈಗೊಳ್ಳುವುದೆಂದು ನಿರ್ದಾರ ಕೈಗೊಳ್ಳಲಾಯಿತು.
    ದ.ಕ ಮೊಗವೀರ ಮಹಾಜನ ಸಂಘದ ಸಭೆಯಲ್ಲಿ ಡಾ. ಜಿ ಶಂಕರ್‍ರವರ ಗೌರವಾಧ್ಯಕ್ಷತೆ , ಶ್ರೀ ಗುಂಡು ಬಿ ಅಮೀನ್‍ರವರ ಅಧ್ಯಕ್ಷತೆಯಲ್ಲಿ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು.

    ವಾಸ್ತು ತಜ್ಞ ವಿದ್ವಾನ್ ಶ್ರೀ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಕ್ಷೇತ್ರ ತಂತ್ರಿಗಳಾದ ಶ್ರೀ ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆಯವರ ಮಾರ್ಗದರ್ಶನದಲ್ಲಿ ಶಿಲಾಮಯ ಗರ್ಭ ಗುಡಿ , ಶಿಲಾಮಯ ಶ್ರೀ ಭದ್ರಕಾಳಿ ಗುಡಿ , ಶಿಲಾಮಯ ಶ್ರೀ ಪ್ರಸನ್ನ ಗಣಪತಿ ಗುಡಿ , ಶ್ರೀ ನಾಗದೇವರ ಗುಡಿ, ಸುತ್ತುಪೌಳಿ, ಗುರುಪೀಠ, ರಾಜಗೋಪುರ, ಯಾಗಶಾಲೆ, ವಸಂತ ಮಂಟಪ , ರಥಬೀಧಿ, ಸುತ್ತು ಆವರಣ ಗೋಡೆ, ಬಯಲು ರಂಗ ಮಂಟಪ , ಒಳಚರಂಡಿ ವ್ಯವಸ್ಥೆ, ನೆಲಹಾಸು(ಇಂಟರ್‍ಲಾಕ್) ಅಳವಡಿಕೆ ಹಾಗೂ ಪುಷ್ಕರಣಿಗಳನ್ನೊಳಗೊಂಡ ರೂಪಾಯಿ 32 ಕೋಟಿ ಅಂದಾಜು ಮೊತ್ತದ ಸಮಗ್ರ ಜೀರ್ಣೋದ್ಧಾರ ಕಾರ್ಯಕೈಗೊಳ್ಳಲಾಯಿತು.

    ಮೊಗವೀರ ಭವನ: ಮಂಗಳೂರು ರಿಪೈನರೀಸ್ ಆಂಡ್ ಪೆಟ್ರೋಕೆಮಿಕಲ್ ಲಿಮಿಟೆಡ್‌ನ ಸಿ ಎಸ್ ಆರ್ ನಿಧಿಯಿಂದ ಕೊಡಮಾಡಿದ ಅನುದಾನದೊಂದಿಗೆ ಹಾಗೂ ಮಹಾಜನ ಸಂಘದ ಮೊತ್ತವನ್ನು ಸೇರಿಸಿ ಸುಮಾರು 15 ಕೋಟಿ ವೆಚ್ಚದ ಎರಡು ಸಭಾಂಗಣಗಳನ್ನೊಳಗೊಂಡ “ಮೊಗವೀರ ಭವನ” ನಿರ್ಮಿಸಲಾಗಿದೆ.

    ಇದೀಗ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊಂಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀ ಪ್ರಸನ್ನ ಗಣಪತಿ, ಶ್ರೀ ಭದ್ರಕಾಳಿ, ಶ್ರೀ ನಾಗದೇವರ ಸಹಿತ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊಂಡ ವೈಧಿಕ ವಿಧಿ ವಿಧಾನಗಳನ್ನು ಇದೇ ಬರುವ ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಶ್ರೀ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕರಾದ ವೆಂಕಟನರಸಿಂಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಮತ್ತು ಯತಿವರೇಣ್ಯರ ಶುಭಾಶೀರ್ವಾದಗಳೊಂದಿಗೆ ವೈಭವೋಪೇತವಾಗಿ ನಡೆಸಲು ಸಂಕಲ್ಪಿಸಲಾಗಿದೆ ಎಂದರು.

    ಪ್ರಮುಖ ಧಾರ್ಮೀಕ ಕಾರ್ಯಕ್ರಮಗಳು:
    ಹೊರೆಕಾಣಿಕೆ: ರಾಜ್ಯ ಹಾಗೂ ಹೊರರಾಜ್ಯಗಳಿಂದ 2 ರಿಂದ 3 ಲಕ್ಷದಷ್ಟು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು ಆಗಮಿಸುವ ಎಲ್ಲಾ ಭಕ್ತಾಧಿಗಳಿಗೂ ದಿನಂಪ್ರತಿ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಪ್ರಯುಕ್ತ ಮಾರ್ಚ್ 27 ಕ್ಕೆ ಅವಿಭಜಿತ ದ. ಕ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಂದ ಪ್ರಸಾದದ ರೂಪದಲ್ಲಿ ಹೊರೆಕಾಣಿಕೆಯು ಕ್ಷೇತ್ರವನ್ನು ತಲುಪಲಿದೆ.

    ಈಗಾಗಲೇ ಹೈದ್ರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ ಇತರ ಭಾಗಗಳಿಂದ ಹೊರೆಕಾಣಿಕೆಗಳು ದೇವಸ್ಥಾನಕ್ಕೆ ತಲುಪಿದೆ. ಕರಾವಳಿ ಭಾಗದ ಭಕ್ತಾಧಿಗಳ ಹೊರಕಾಣಿಕೆಯು 2000ಕ್ಕೂ ಮಿಕ್ಕಿದ ವಾಹನಗಳ ಮೂಲಕ ದೇವಸ್ಥಾನದ ಉತ್ತರ ಭಾಗದ ಮೆರವಣಿಗೆಯು ಮೂಳೂರಿನಿಂದ ಹಾಗೂ ದಕ್ಷಿಣ ಭಾಗದ ಮೆರವಣಿಗೆಯು ತೆಂಕ ಎರ್ಮಾಳ್‍ನಿಂದ ಹೊರಟು ವಿವಿಧ ರೀತಿಯ ಟ್ಯಾಬ್ಲೋ, ಚೆಂಡೆ, ಭಜನಾಕುಣಿತ ಮುಂತಾದ ಬಿರುದಾವಳಿಗಳೊಂದಿಗೆ ದೇವಸ್ಥಾನ ತಲುಪಲಿದೆ.

    ಅನ್ನ ಛತ್ರ ಹಾಗೂ ಪಾರ್ಕಿಂಗ್: ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ನೂಕು ನುಗ್ಗಲಾಗದಂತೆ ಸುಮಾರು 1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಅನ್ನಛತ್ರದ ಚಪ್ಪರ ನಿರ್ಮಿಸಿ ಎಲೆ ಊಟ ಮತ್ತು ಬಫೆ ಊಟಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹಾಗೂ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ವಾಹನ ನಿಲುಗಡೆಗೆ ಬೇಕಾಗುವಷ್ಟು ಪಾರ್ಕಿಂಗ್ ಜಾಗದ ಸಿದ್ದತೆ ಮಾಡಿಕೊಳ್ಳಲಾಗಿದೆ.

    ರಾಜಗೋಪುರ ಹಾಗೂ ಲಕ್ಷ್ಮೀ ತೀರ್ಥ ಕೆರೆ ಉದ್ಘಾಟನೆ ಎಪ್ರಿಲ್ 1: ನೂತನವಾಗಿ ನಿರ್ಮಾಣಗೊಂಡ ಭವ್ಯ ರಾಜಗೋಪುರ ಹಾಗೂ ಸರಕಾರದ ಅನುಧಾನದೊಂದಿಗೆ ನಿರ್ಮಾಣಗೊಂಡ ಲಕ್ಷ್ಮೀತೀರ್ಥ ಕೆರೆಯು ಎಪ್ರಿಲ್ 1ರ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

    ದಿನಂಪ್ರತಿ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ : ಎಪ್ರಿಲ್ 2ರಿಂದ ಎಪ್ರಿಲ್ 15ರತನಕ ಪ್ರತೀದಿನ ಸಂಜೆ ಗಂಟೆ 4 ರಿಂದ 5ರವರೆಗೆ ಸಾವಿರ ಸುಮಂಗಲೆಯರಿಂದ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ.

    ಮಹಾಲಕ್ಷ್ಮೀ ದೇವಿಯ ಬಿಂಬ ಪ್ರತಿಷ್ಠೆ , ಸ್ವರ್ಣಕಲಶ ಪ್ರತಿಷ್ಠೆ ಹಾಗೂ ಮಹಾಅನ್ನಸಂತರ್ಪಣೆ ಎಪ್ರಿಲ್ 6ರಂದು ನಡೆಯಲಿದೆ.
    ವಾರ್ಷಿಕ ರಥೋತ್ಸವ :ವರ್ಷಂಪ್ರತಿ ನಡೆಯುವ ಶ್ರೀಮಹಾಲಕ್ಷ್ಮೀ ರಥೋತ್ಸವ ಹಾಗೂ ಮಹಾಅನ್ನಸಂತರ್ಪಣೆಯು ಎಪ್ರಿಲ್ 13ರಂದು ನಡೆಯಲಿದೆ.

    ಚತುಃಪವಿತ್ರ ನಾಗಮಂಡಲ ಸೇವೆ : ಎಪ್ರಿಲ್ 15ರ ರಾತ್ರಿ ಗಂಟೆ 8.00ಕ್ಕೆ ಹಾಲಿಟ್ಟು ಸೇವೆ ರಾತ್ರಿ 9.00ರಿಂದ ಚತುಃಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಎಪ್ರಿಲ್ 16ರ ಬೆಳಗ್ಗೆ ಸಂಪೆÇೀಕ್ಷಣೆ, ಮಂತ್ರಾಕ್ಷತೆಯೊಂದಿಗೆ ಪುನಃ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಶುಭಾಂತ್ಯವಾಗಲಿದೆ.

    ನಿರಂತರ 15 ದಿನಗಳ ಪರ್ಯಂತ ಧಾರ್ಮಿಕ ಸಭಾಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಸಿದ್ಧರಾಮಯ್ಯ, ಶ್ರೀ ಹೆ ಚ್ ಡಿ ಕುಮಾರಸ್ವಾಮಿ, ಸಂಸದರುಗಳಾದ ಶ್ರೀನಳಿನ್ ಕುಮಾರ್ ಕಟೀಲ್ , ಶೋಭಾಕರಂದ್ಲಾಜೆ , ರಾಜ್ಯದ ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ.

    ವಿವಿಧ ಮಠಾಧೀಶರುಗಳು ಮತ್ತು ಧಾರ್ಮಿಕ ಮುಖಂಡರುಗಳು ಆಶೀರ್ವಚನ ನೀಡಲಿದ್ದಾರೆ.
    ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಭಾರತ ಸರಕಾರ ಪ್ರಸ್ತುತ ಪಡಿಸುವ ದಕ್ಷಿಣ ವಲಯ ಸಾಂಸ್ಕ್ರತಿಕ ಕೇಂದ್ರ ತಾಂಜವೂರು ಇವರು ಸಾದರ ಪಡಿಸುವ 20 ರಾಜ್ಯಗಳ ಕಲಾವಿದರುಗಳ ಸಾಂಸ್ಕ್ರತಿಕ ಉತ್ಸವ ಏರ್ಪಡಿಸಲಾಗಿದೆ.

    ರಾಜ್ಯದ ಹಾಗೂ ಸ್ಥಳೀಯ ಕಲಾವಿದರುಗಳಿಂದ ಪ್ರತೀ ದಿನ ಸಂಜೆ ನೃತ್ಯ ವೈವಿಧ್ಯ, ಯಕ್ಷಗಾನ , ನಾಟಕ ಮುಂತಾದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಮತ್ತು ಖ್ಯಾತ ಗಾಯಕರೂ , ಸಂಗೀತ ನಿರ್ದೇಶಕರೂ ಆದ ಗಾನಗಂಧರ್ವ ವಿಜಯ ಪ್ರಕಾಶರವರಿಂದ ಸಾಂಸ್ಕ್ರತಿಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

    ಪ್ರತೀದಿನ ಪೂರ್ವಾಹ್ನ ಗಂಟೆ 11.30 ರಿಂದ ರಾಜ್ಯದ ಖ್ಯಾತ ಕಲಾವಿದರುಗಳಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

    ಸುದ್ದಿಗೋಷ್ಠೀಯಲ್ಲಿ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಜಿರ್ಣೋದ್ಧಾರ ಸಮಿತಿಯ ಅಧ್ಯ್ಷರಾದ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್, ಸುಧಾಕರ ಕುಂದರ್, ವಾಸುದೇವ ಸಾಲ್ಯಾನ್, ಮೋಹನ್ ಕರ್ಕೇರಾ, ಭರತ್ ಎರ್ಮಾಳ್, ವಿನಯ್ ಕರ್ಕೇರಾ, ಶಂಕರ್ ಸಾಲ್ಯಾನ್ ಹಾಗೂ ಇತರರು ಉಪಸ್ಥಿರಿದ್ದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending