Connect with us

DAKSHINA KANNADA

‘ತುಳುನಾಡ ಕೈಲಾಸ’ ಪಾವಂಜೆ ಕ್ಷೇತ್ರಕ್ಕೆ ಬ್ರಹ್ಮಕಲಶೋತ್ಸವದ ಸಂಭ್ರಮ

Published

on

ಮುಲ್ಕಿ: ಕರಾವಳಿಯಲ್ಲಿ ದೈವ ದೇವರನ್ನು ಆರಾಧಿಸುವ ಜನರು ಅಷ್ಟೇ ಪೂಜ್ಯವಾಗಿ ದೇವರನ್ನು ಕೂಡಾ ಆರಾಧಿಸುತ್ತಾರೆ. ಇತಿಹಾಸಪ್ರಸಿದ್ಧ ದೇವಾಲಯಗಳ ಬಗ್ಗೆ ನೋಡುತ್ತಾ ಹೋದರೆ ತುಳುನಾಡಿನ ಕೈಲಾಸವೆಂದೇ ಜನರ ಮನಸ್ಸಲ್ಲಿ ನೆಲೆಯೂರಿರುವ ಮುಲ್ಕಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನ ಕೂಡಾ ತನ್ನ ಐತಿಹ್ಯದಲ್ಲಿ ಪ್ರಸಿದ್ಧಿಯನ್ನು ಪಡೆಯುತ್ತದೆ. ಅಂತಹ ಸುಂದರವಾದ ಪವಿತ್ರ ದೇಗುಲಕ್ಕೆ ಇದೀಗ ಬ್ರಹ್ಮಕಲಶೋತ್ಸವದ ಸಂಭ್ರಮ.


ಪಾವಂಜೆಯ ನಾಲ್ಕು ಚೌಕ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಬಕ್ಕೆ ತೈಲಾಧಿವಾಸ ನಡೆಯಿತು, ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಈ ಧಾರ್ಮಿಕ ಕಾರ್ಯಕ್ರಮಗಳು, ದೇವಳದ ಜೀರ್ಣೋದ್ದಾರ ಕಾರ್ಯ ಭರದಿಂದ ಸಾಗುತ್ತಿದೆ, 12 ವರ್ಷಗಳಿಗೊಮ್ಮೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನೆರವೇರಬೇಕು ಎನ್ನುವುದು ವಾಡಿಕೆ.


ಆದರೆ ಈ ದೇವಸ್ಥಾನ ಕಳೆದ 21 ವರ್ಷಗಳ ಬಳಿಕ ಬ್ರಹ್ಮಕಲಶೋತ್ಸ ಕಾಣುತ್ತಿದೆ. ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದೆ.

ಶ್ರೀ ಗಣಪತಿ ದೇವರ ಎದುರಿನ ಮಂಟಪ ನವೀಕರಣ ಧ್ವಜಸ್ತಂಭ ಮತ್ತು ಅದಕ್ಕೆ ತಾಮ್ರದ ಹೊದಿಕೆ ಸೇವಾ ಕೌಂಟರ್ ನವೀಕರಣ, ಗರ್ಭಗುಡಿಯ ಸುತ್ತ ಹೊರಾಂಗಣದ ಹಾಸುಕಲ್ಲಿನ ನವೀಕರಣ ಪಾಕಶಾಲೆ ಮತ್ತು ಭೋಜನಶಾಲೆ ನವೀಕರಣ, ಶ್ರೀ ರಕ್ತಶ್ವರಿ ಗುಡಿಯ ಪುನರ್ ನಿರ್ಮಾಣ, ನಾಗನಕಟ್ಟೆ, ವಸಂತ ಮಂಟಪ, ದೇವಸ್ಥಾನದ ಪೂರ್ವದ ಗೋಪುರ ದುರಸ್ತಿ ಮತ್ತು ನವೀಕರಣ ಇತ್ಯಾದಿ ನಡೆಯಲಿದೆ.


ನವೆಂಬರ್ 20ರ ಬಳಿ ಧ್ವಜಸ್ಥಂಭ ನಿಲ್ಲಿಸುವ ಕೆಲಸವನ್ನು ಮಾಡಲಿದ್ದೇವೆ ಎನ್ನುತ್ತಾರೆ ಕ್ಷೇತ್ರದ ಅರ್ಚಕರು.

ಸಮಿತಿ ಪ್ರಮುಖರು ತಿಳಿಸುವಂತೆ 2023ರ ಜನವರಿ 19ರಿಂದ 21ರವರೆಗೆ ಬ್ರಹ್ಮಕಲಶೋತ್ಸವ ನಡೆಸಲು ನಿರ್ಧರಿಸಿದ್ದು, ಪೂರ್ವಭಾವಿ ಕೆಲಸಗಳು ತ್ವರಿತಗತಿಯಿಂದ ನಡೆಯುತ್ತಿದೆ. ಇನ್ನೊಂದು ತಿಂಗಳಲ್ಲಿ ಪೂರ್ಣ ಹಂತಕ್ಕೆ ಬರಲಿದೆ. 22 ವರ್ಷಗಳ ಬಳಿಕ ಈ ಕ್ಷೇತ್ರ ಬ್ರಹ್ಮಲಶೋತ್ಸವದ ಸಂಭ್ರಮದಲ್ಲಿದೆ.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ದೇವಸ್ಥಾನದಲ್ಲಿ ಅಭಿವೃದ್ಧಿ ಮತ್ತು ಬ್ರಹ್ಮಕಲಶೋತ್ಸವ ನಡೆಸುವ ಬಗ್ಗೆ ಕಾರ್ಯತತ್ಪರರಾಗಿದ್ದು, ಪ್ರಶ್ನಾಮುಖಿ ಚಿಂತನೆಯಲ್ಲಿ ಕಂಡುಕೊಂಡಂತೆ ಪ್ರಾಯಶ್ಚಿತ್ತಾದಿ ಕಾರ್ಯಗಳನ್ನು ಪೂರೈಸಲಾಗಿದೆ, ಮುಂಬರುವ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ನಾವೆಲ್ಲರೂ ದೇವರ ಕಾರ್ಯಕ್ಕೆ ಕೈಜೋಡಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿದೆ.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

LATEST NEWS

Trending