Connect with us

    LATEST NEWS

    ಉಡುಪಿಯ ರಸ್ತೆ ದುರಂತದಲ್ಲಿ ಮೆದುಳು ನಿಷ್ಕ್ರಿಯ-ಅಂಗಾಂಗ ದಾನಕ್ಕೆ ಮುಂದಾದ ನವೀನ್ ಕುಟುಂಬ

    Published

    on

    ಉಡುಪಿ: ರಸ್ತೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಘಟನೆ ಉಡುಪಿಯಲ್ಲಿ ನಡೆದಿದೆ.

    ಜೂ.8 ರಂದು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವೀನ್‌ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದರು.

    ಅಪಘಾತದ ತೀವ್ರತೆಗೆ ನವೀನ್‌ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪತ್ನಿ ಮಲ್ಲಿಕಾ ಹಾಗೂ ಕುಟುಂಬಸ್ಥರು ಸೇರಿ ಅಂಗಾಂಗ ದಾನಕ್ಕೆಇಚ್ಛೆ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾವನ್ನು 6 ಜನರಿಗೆ ದಾನ ಮಾಡಿದ್ದರು.

    ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮಾತನಾಡಿ, “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಶ್ರೀನಿವಾಸ್ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು.

    ದಾನ ಮಾಡಿದ ಅಂಗಾಂಗವನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಗಾವಲಿನೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಝೀರೋ ಟ್ರಾಫಿಕ್‌ ಮೂಲಕ ಮಂಗಳೂರಿಗೆ ಕಳುಹಿಸಲಾಯಿತು.

    LATEST NEWS

    ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ; ಸವಾರ ಸಾ*ವು

    Published

    on

    ತೆಕ್ಕಟ್ಟೆ : ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ ಉರುಳಿ ಬಿದ್ದು ಸವಾರ ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾದ ಘಟನೆ ಕುಂದಾಪುರ ತೆಕ್ಕಟ್ಟೆ ಸಮೀಪದ ಕೊಮೆಯಲ್ಲಿ ಸಂಭವಿಸಿದೆ.

    ಪಡುಕರೆ ನಿವಾಸಿ ಮಹೇಂದ್ರ (32) ಮೃತ ದುರ್ದೈವಿ.

    ಸಂಬಂಧಿಕರ ಮನೆಯಲ್ಲಿ ದೀಪಾವಳಿ ಹಬ್ಬದ ಕಾರ್ಯಕ್ರಮವನ್ನು ಮುಗಿಸಿ ತಡರಾತ್ರಿ ಬೈಕ್ ನಲ್ಲಿ ಮಹೇಂದ್ರ ಬರುತ್ತಿದ್ದ ವೇಳೆ ತೆಕ್ಕಟ್ಟೆ– ಕೊಮೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಹಿತ ರಸ್ತೆ ಬದಿಯ ಗದ್ದೆಗೆ ಆಯತಪ್ಪಿ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿದ್ದುದರಿಂದ ಉಸಿರುಗಟ್ಟಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.

    ಕೃಷಿಭೂಮಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಕೊಂಡಿದ್ದು, ಬೈಕ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಮಗುಚಿ ಬಿದ್ದಿದ್ದರಿಂದ ನೀರಿನಲ್ಲಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    Continue Reading

    DAKSHINA KANNADA

    ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ಮೆಸೇಜ್; ಯುವಕರಿಂದ ಹಲ್ಲೆ

    Published

    on

    ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.

    ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ‌ ಚಿಕಿತ್ಸೆ ಪಡೆಯುತ್ತಿದ್ದಾನೆ.

    ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ.

    ಸ್ಥಳೀಯ ಯುವತಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದು ಬಂದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ.

    ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

    Published

    on

    ಮಂಗಳೂರು/ರಾಮನಗರ : ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ.

    ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

    ಇದನ್ನೂ ಓದಿ : ಚಲಿಸುತ್ತಿದ್ದ ಬೈಕಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ; ಇಬ್ಬರ ಬಂಧನ

    ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್‌ ನೆರವಿಗೆ ಧಾವಿಸಿದ್ದಾರೆ. ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದ ಬಳಿಕ ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.

    Continue Reading

    LATEST NEWS

    Trending