Tuesday, August 16, 2022

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..!

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..!

ಬ್ರೆಝಿಲ್:   ಹೆದ್ದಾರಿಯಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 37 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬ್ರೆಜಿಲ್ ನಲ್ಲಿ  ನಡೆದಿದೆ.ಬ್ರೆಜಿಲ್ ನ ಸಾವೋಪೋಲೋ ರಾಜ್ಯದ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಜವಳಿ ಕಾರ್ಖಾನೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ನಡೆದಿದೆ. 37 ಮಂದಿ ಮೃತಪಟ್ಟರೆ, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ನಜ್ಜುಗುಜ್ಜಾಗಿರುವ ವಾಹನಗಳ ಮಧ್ಯೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ರಕ್ಷಕರು ಹರಸಾಹಸಪಡಬೇಕಾಯಿತು.

ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರಂಭದಲ್ಲಿ 32 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿತ್ತು. ಕೆಲವೇ ಸಮಯದಲ್ಲಿ ಮೃತರ ಸಂಖ್ಯೆ 37ಕ್ಕೇರಿದೆ.

ಕೆಲ ಮೃತದೇಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕೆಲವು ದೇಹಗಳು ಅವಶೇಷಗಳಡಿ ಸಿಲುಕಿರುವುದರಿಂದ ಟ್ರಕ್ ನಲ್ಲಿ ಮತ್ತು ಬಸ್ಸಿನಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿಲ್ಲ.

ಆದರೆ, ಸ್ಥಳೀಯ ಮಾಧ್ಯಮ ವರದಿಯ ಪ್ರಕಾರ ಬಸ್ಸಿನಲ್ಲಿ 53 ಮಂದಿ ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಅಪಘಾತದಿಂದ ಪಾರಾಗಿದ್ದಾನೆ.ಬ್ರೆಜಿಲ್‍ನ ಅತ್ಯಂತ ದೊಡ್ಡ ನಗರ ಮತ್ತು ವಾಣಿಜ್ಯ ನಗರಿ ಪಶ್ಚಿಮ ಸಾವೊಪೋಲೋದಿಂದ ಸುಮಾರು 210 ಮೈಲಿ ದೂರದಲ್ಲಿರುವ ತಗುಯಿ ಪಟ್ಟಣದ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ.

LEAVE A REPLY

Please enter your comment!
Please enter your name here

Hot Topics

ದ.ಕ.ಜಿಲ್ಲಾ ಮಡಿವಾಳರ ಸಂಘ, ರಜಕ ಯೂತ್‌ : ಸ್ವಾತಂತ್ರ್ಯ ಸಂಭ್ರಮ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ (ರಿ) ಮಂಗಳೂರು ಮತ್ತು ರಜಕ ಯೂತ್ ಮಂಗಳೂರು ಸಹಭಾಗಿತ್ವದಲ್ಲಿ ಆಝಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಸಂಘದ ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯ ಸಂಭ್ರಮದ...

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಸಾವು

ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು...

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ ಸಾಬೀತು- ಅಪರಾಧಿಗೆ 7 ವರ್ಷ ಕಠಿಣ ಶಿಕ್ಷೆ

ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ 7 ವರ್ಷ ಕಠಿಣ...