ಮಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗುತ್ತಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡು ಬಂದಿದೆ.
ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇಂದು 412 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿಂದು 5.37 ರಷ್ಟು ಕೊರೊನಾ ಪಾಸಿಟಿವಿಟಿ ದರ ದಾಖಲಾಗಿದೆ.
ಇದೇ ಸಂದರ್ಭ 839 ಜನ ಗುಣಮುಖರಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ 3,100 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.