Connect with us

    LATEST NEWS

    ಕೊರೊನಾ ಲಸಿಕೆ ನೀಡಲು ಸಿದ್ಧತೆ ಆರಂಭ..! ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ವ್ಯಾಕ್ಸಿನ್..

    Published

    on

    ಕೊರೊನಾ ಲಸಿಕೆ ನೀಡಲು ಸಿದ್ಧತೆ ಆರಂಭ..! ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ವ್ಯಾಕ್ಸಿನ್..

    ಬೆಂಗಳೂರು: ನಾಡಿನ ಜನತೆಗೆ ಶುಭ ಸುದ್ದಿ ದೊರೆತಿದೆ. ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳು ಮತ್ತು ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.

    ಈ ಬಗ್ಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ. ಅರುಂಧತಿ ಚಂದ್ರಶೇಖರ್ ಸೋಮವಾರ ಪತ್ರ ಬರೆದಿದ್ದು ಆರೋಗ್ಯ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಸಮಗ್ರ ಮಾಹಿತಿ ಸಲ್ಲಿಸಲು ಸೂಚಿಸಿದ್ದಾರೆ.

    ಈ ಮೊದಲ ಹಂತದ ಅಭಿಯಾನದಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಮೇಲುಸ್ತುವಾರಿಯಾಗಿ ನಿಯೋಜಿತರಾಗಲಿದ್ದಾರೆ. ಜಿಲ್ಲೆಯಲ್ಲಿರುವ ಆರೋಗ್ಯ ಸಂಸ್ಥೆಗಳ ವಿವರ, ಕೆಲಸ ನಿರ್ವಹಿಸುವ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಮಾಹಿತಿಯನ್ನು ಕೇಂದ್ರ ಸರ್ಕಾರದ ಕೋವಿಡ್-19 ವ್ಯಾಕ್ಸಿನೇಷನ್ ಬೇನಿಫಿಷೇರಿ ಮ್ಯಾನೇಜ್ಮೆಂಟ್ ಸಿಸ್ಟಮ್ ನಲ್ಲಿ ಅಪ್ಲೋಡ್ ಮಾಡುವಂತೆ ತಿಳಿಸಲಾಗಿದೆ.

    ಅಕ್ಟೋಬರ್ 31 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಆರೋಗ್ಯ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

    ಭಾನುವಾರ ನಡೆದಿದ್ದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ. ಹರ್ಷ ವರ್ಧನ್ ಅವರು ದೇಶದಲ್ಲಿ ಕೋರೊನಾ ಲಸಿಕೆಯನ್ನು ನೀಡುವ ಪ್ರಕ್ರೀಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂಬ ಸುಳಿವು ನೀಡಿದ್ದರು.

    ಇನ್ನು ಕೋವಿಡ್‌-19 ಗೆ ಲಸಿಕೆ ಲಭ್ಯವಾಗುವುದಕ್ಕಿಂತ ಮೊದಲೇ, ಈ ವರ್ಷಾಂತ್ಯಕ್ಕೆ 50 ಕೋಟಿ ಸಿರಿಂಜ್‌ಗಳನ್ನು ಸಂಗ್ರಹಿಸಲು ಯುನಿಸೆಫ್‌ ಮುಂದಾಗಿದೆ.

    2021ರ ವೇಳೆಗೆ 100 ಕೋಟಿ ಸಿರಿಂಜ್‌ಗಳು ಸಂಗ್ರಹಿಸಲು ಯುನಿಸೆಫ್‌ ನಿರ್ಧರಿಸಿದೆ. ಒಂದೊಮ್ಮೆ ಲಸಿಕೆ ಲಭ್ಯವಾಗುತ್ತಿದ್ದಂತೆ, ಜನರಿಗೆ ಲಸಿಕೆ ನೀಡಲು ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಸಂಸ್ಥೆ ಇಂಥ ಕ್ರಮಕ್ಕೆ ಮುಂದಾಗಿದೆ.

    ‘ಕೋವಿಡ್‌-19 ಲಸಿಕೆ ಲಭ್ಯತೆಗಾಗಿ ಇಡೀ ವಿಶ್ವವೇ ಎದುರು ನೋಡುತ್ತಿದೆ. ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಅದರ ವ್ಯಾಪಕ ಬಳಕೆಗೆ ಹಿನ್ನಡೆಯಾಗಬಾರದು. ಹೀಗಾಗಿ ಸಿರಿಂಜ್‌ಗಳನ್ನು ಸುರಕ್ಷಿತವಾಗಿ, ತ್ವರಿತವಾಗಿ ಎಲ್ಲ ದೇಶಗಳಿಗೆ ತಲುಪಿಸಲು ಬೇಕಾದ ಸಿದ್ಧತೆಗಳಿಗೆ ಸಂಸ್ಥೆ ಚಾಲನೆ ನೀಡಿದೆ’ ಎಂದು ಯುನಿಸೆಫ್‌ ಹೇಳಿದೆ.

    ‘ವಿಶ್ವದ ಎಲ್ಲ ಜನರಿಗೆ ಕೋವಿಡ್‌-19 ವಿರುದ್ಧದ ಲಸಿಕೆ ನೀಡುವುದು ಮಾನವ ಕುಲದ ಇತಿಹಾಸದಲ್ಲಿಯೇ ಬೃಹತ್‌ ಸಾಮೂಹಿಕ ಲಸಿಕೆ ಕಾರ್ಯಕ್ರಮವಾಗಲಿದೆ. ಹೀಗಾಗಿ, ಈ ಮಾರಕ ಸೋಂಕಿಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಸಮರೋಪಾದಿಯಲ್ಲಿ ಲಸಿಕೆ ಕಾರ್ಯಕ್ರಮ ಆರಂಭಿಸಬೇಕಾಗುತ್ತದೆ’ ಎಂದು ಯುನಿಸೆಫ್‌ನ ನಿರ್ದೇಶಕಿ ಹೆನ್ರಿಟಾ ಫೋರ್‌ ಹೇಳಿಕೆ ನೀಡಿದ್ದಾರೆ.

    LATEST NEWS

    ಕಂಬಳ ಕ್ಷೇತ್ರಕ್ಕೆ ಮತ್ತೊಂದು ಅಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ

    Published

    on

    ಮಣಿಪಾಲ: ಕೆಲವು ದಿನಗಳ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಅಘಾ*ತ ಎದುರಾಗಿದೆ. ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಹೃದಯಾಘಾ*ತದಿಂದ ಕೊನೆ*ಯುಸಿರೆಳೆದಿದೆ.

    ‘ನಾಗು’ ಕೋಣವು ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

    ಬೈಂದೂರಿನಿಂದ ಬಂಢಾರಮನೆ ಸೇರಿದ್ದ ನಾಗು, ಬಳಿಕ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು.

    ಕೂಟಗಳಲ್ಲಿ ಸಕ್ರಿಯವಾಗಿದ್ದ ಎರಡು ಕೋಣಗಳನ್ನು ಎರಡು ವಾರಗಳ ಅಂತರದಲ್ಲಿ ಕಂಬಳ ಕ್ಷೇತ್ರ ಕಳೆದುಕೊಂಡಿದೆ.

    Continue Reading

    LATEST NEWS

    WATCH : UDUPI : ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದಿದ್ದು ಹೇಗೆ?

    Published

    on

    ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.


    ನಾಯಿ ಬೊಗಳಿದರೂ ಮನೆಯವರು ಹೊರಬಂದಿಲ್ಲ. ಕೆಲವು ದಿನಗಳಿಂದ ಮಣಿಪಾಲ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ತಿಳಿದಿದ್ದ ಮನೆಯವರು ಸುಮ್ಮನಿದ್ದರು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ. ಬೆಳಿಗ್ಗೆ ಮನೆಯ ಸಿಸಿಟಿವಿ ದ್ರಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದೃಶ್ಯ ಕಂಡು ಭಯಭೀತರಾಗಿದ್ದಾರೆ.

    ಇದನ್ನೂ ಓದಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
    ಆದರೆ ಅಚ್ಚರಿ ಎಂಬಂತೆ ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾ*ಣ ಉಳಿಸಿಕೊಂಡಿದೆ. ಈ ಘಟನೆ ಮಣಿಪಾಲ, ಪೆರಂಪಳ್ಳಿ ಭಾಗದಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

    Continue Reading

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Trending