ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ ಬಸ್ ಡಿಕ್ಕಿ- ಪ್ರಾಣಾಪಾಯದಿಂದ ಸಚಿವರು ಪಾರು..!
ಬೆಂಗಳೂರು : ಮುಜರಾಯಿ, ಹಿಂದುಳಿದ ವರ್ಗಗಳ ಇಲಾಖಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರು ಅಪಘಾತಕ್ಕೊಳಗಾಗಿದ್ದು, ಸಚಿವರು ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು – ಮೈಸೂರು ನೈಸ್ ರಸ್ತೆ ಬಳಿ ಈ ಅಪಘಾತ ಸಂಭವಿಸಿದೆ.
ಪೆಟ್ರೋಲ್ ಹಾಕಿಸಿಕೊಂಡು ವಾಪಸ್ ತೆರಳುವಾಗ ಘಟನೆ ನಡೆದಿದ್ದು, ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಸಚಿವರು ಸಂಚರಿಸುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಮೈಸೂರಿನಿಂದ ಬೆಂಗಳೂರಿನ ಕಡೆಗೆ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಯಾಣ ಬೆಳೆಸಿದ್ದರು ಎಂದು ತಿಳಿದು ಬಂದಿದ್ದು ಅಪಘಾತ ಸಂಭವಿಸಿದೆ.