DAKSHINA KANNADA
ಮಂಗಳೂರು: ಕರ್ತವ್ಯ ನಿರತ ಪೊಲಿಸ್ ಸಿಬಂದಿಗಳ ಮೇಲೆ ದಾಳಿ- ರೈಫಲ್ ಧ್ವಂಸ..!
ಮಂಗಳೂರು: ಕರ್ತವ್ಯ ನಿರತ ಪೊಲಿಸ್ ಸಿಬಂದಿಗಳ ಮೇಲೆ ದಾಳಿ- ರೈಫಲ್ ಧ್ವಂಸ..!
ಮಂಗಳೂರು : ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಮತ್ತೊಂದು ದಾಳಿ ನಡೆದಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕಾವೂರು ಠಾಣೆಯ ಕರ್ತವ್ಯ ನಿರತ ಪೊಲೀಸ್ ಸಿಬಂದಿಗಳ ಮೇಲೆ ಈ ದಾಳಿ ನಡೆದಿದೆ.
ನಿನ್ನೆ ತಡ ರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆಕ್ ಪಾಯಿಂಟ್ ನಲ್ಲಿ ಕರ್ತವ್ಯದಲ್ಲಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ಪೊಲೀಸ್ ಸಿಬಂದಿಗಳ ಮೇಲೆ ಹಲ್ಲೆ ನಡೆಸಿ ಅವರ ರೈಫಲ್ ( ಬಂದೂಕು) ಕಿತ್ತು ನೆಲಕ್ಕೆ ಹೊಡೆದು ಧ್ವಂಸ ಮಾಡಿದ್ದಾರೆ.
ಕೂಡಲೇ ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನೀರುಮಾರ್ಗ ಖಾಸಾಗಿ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದ್ದು ಎಲ್ಲಾ ನಾಲ್ವರೂ ವಿದ್ಯಾರ್ಥಿಗಳು ಡ್ರಗ್ ನಶೆಯಲ್ಲಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಸೀಲನೆ ನಡೆಸಿದ್ದು ಈ ಸಂಬಂಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕಳೆದ 2 ತಿಂಗಳಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ನಡೆದ ನಾಲ್ಕನೇ ದಾಳಿ ಪ್ರಕರಣ ಇದಾಗಿದ್ದು, ಕಾನೂನು ರಕ್ಷಕರಾದ ಪೋಲಿಸರಿಗೆ ರಕ್ಷಣೆ ಇಲ್ಲವಾಗಿದ್ದು ಇನ್ನು ಜನ ಸಾಮಾನ್ಯರನ್ನು ರಕ್ಷಣೆ ಮಾಡುವವರು ಯಾರು ಎಂಬ ಪ್ರಶ್ನೆ ಮಂಗಳೂರಿನ ಪ್ರಜ್ಞಾವಂತ ನಾಗರಿಕರಲ್ಲಿ ಮೂಡಿದೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
- DAKSHINA KANNADA7 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA7 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA6 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM7 days ago
ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?